ವಿಧಾನ-ಕದನ 2023: ಬೆಳಗಾವಿಯ ಐವರು ಶಾಸಕರಿಗೆ ಹ್ಯಾಟ್ರಿಕ್‌ ಕನಸು

ಮಹೇಶ ಕುಮಟಳ್ಳಿ, ಶ್ರೀಮಂತ ಪಾಟೀಲ, ಶಶಿಕಲಾ ಜೊಲ್ಲೆ, ಪಿ. ರಾಜೀವ್‌, ಗಣೇಶ ಹುಕ್ಕೇರಿ ಗೆಲುವಿಗೆ ತವಕ

Team Udayavani, Apr 26, 2023, 7:49 AM IST

politi

ಬೆಳಗಾವಿ: ಈ ಬಾರಿಯ ವಿಧಾನಸಭೆ ಚುನಾವಣೆ ಹಲವಾರು ಅಚ್ಚರಿಯ ಜತೆಗೆ ವಿಶೇಷತೆಗಳಿಗೂ ಸಾಕ್ಷಿಯಾಗಲಿದೆ. ಹಲವು ಶಾಸಕರು ವಿಶಿಷ್ಟ ದಾಖಲೆಯ ಸಿದ್ಧತೆಯಲ್ಲಿದ್ದಾರೆ. ಇದಕ್ಕೆ ಗಡಿ ಜಿಲ್ಲೆ ಬೆಳಗಾವಿ ಸಹ ಹೊರತಾಗಿಲ್ಲ.

ಟಿಕೆಟ್‌ ಹಂಚಿಕೆ ವಿಷಯದಲ್ಲಿ ತೀವ್ರ ಅಸಮಾಧಾನಕ್ಕೆ ಗುರಿಯಾಗಿ ಪಕ್ಷಾಂತರ ರಾಜಕಾರಣದ ಮೂಲಕ ರಾಜ್ಯದಲ್ಲಿ ಬಿರುಗಾಳಿ ಎಬ್ಬಿಸಿ ದೊಡ್ಡ ಸುದ್ದಿ ಮಾಡಿದ್ದ ಜಿಲ್ಲೆ ಈಗ ಐವರು ಶಾಸಕರ ವಿಶಿಷ್ಟ ಸಾಧನೆಯ ಮೂಲಕ ಸುದ್ದಿ ಮಾಡಲಿದೆ. ಈ ವಿಶಿಷ್ಟ ಸಾಧನೆ ಬೇರೆ ಏನೂ ಅಲ್ಲ. ಐವರು ಹಾಲಿ ಶಾಸಕರ ಹ್ಯಾಟ್ರಿಕ್‌ ಸಾಧನೆಯ ಹಾದಿ.

ಈ ಐವರು ಶಾಸಕರಲ್ಲಿ ನಾಲ್ವರು ಶಾಸಕರು ಬಿಜೆಪಿಯಲ್ಲಿರುವುದು ಮತ್ತೂಂದು ವಿಶೇಷ. ಅಥಣಿ ಕ್ಷೇತ್ರದ ಮಹೇಶ ಕುಮಟಳ್ಳಿ, ಕುಡಚಿಯ ಪಿ.ರಾಜೀವ, ನಿಪ್ಪಾಣಿಯ ಶಶಿಕಲಾ ಜೊಲ್ಲೆ, ಕಾಗವಾಡದ ಶ್ರೀಮಂತ ಪಾಟೀಲ ಮತ್ತು ಚಿಕ್ಕೋಡಿಯ ಗಣೇಶ ಹುಕ್ಕೇರಿ ಹ್ಯಾಟ್ರಿಕ್‌ ಸಾಧನೆಯ ಸನಿಹದಲ್ಲಿದ್ದಾರೆ. ಇದರಲ್ಲಿ ಶ್ರೀಮಂತ ಪಾಟೀಲ ಮತ್ತು ಮಹೇಶ ಕುಮಟಳ್ಳಿ ಈ ಐದು ವರ್ಷಗಳ ಅವಧಿಯಲ್ಲಿ ಮೂರನೇ ಚುನಾವಣೆ ಎದುರಿಸುತ್ತಿರುವುದು ಮತ್ತೂಂದು ವಿಶೇಷ.

2018ರಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಜಯಗಳಿಸಿದ್ದ ಶ್ರೀಮಂತ ಪಾಟೀಲ ಮತ್ತು ಮಹೇಶ ಕುಮಟಳ್ಳಿ ಆನಂತರ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಆಪರೇಷ‌ನ್‌ ಕಮಲಕ್ಕೆ ಒಳಗಾಗಿ ಉಪಚುನಾವಣೆ ಎದುರಿಸಿ ಎರಡನೇ ಬಾರಿಗೆ ಶಾಸಕರಾದರು. ಈಗ ಇಬ್ಬರೂ ಶಾಸಕರು ಮತ್ತೆ ಚುನಾವಣೆಗೆ ಸಿದ್ಧರಾಗಿದ್ದಾರೆ.

ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡಿದ್ದ ಮಹೇಶ ಕುಮಟಳ್ಳಿ ಆಗ ಬಿಜೆಪಿಯ ಲಕ್ಷ್ಮಣ ಸವದಿ ವಿರುದ್ಧ ಜಯ ಗಳಿಸಿದ್ದರು. ಈ ಸಂದರ್ಭದಲ್ಲಿ ಕಾಂಗ್ರೆಸ್‌ನಲ್ಲಿದ್ದ ರಮೇಶ್‌ಜಾರಕಿಹೊಳಿ ತಮ್ಮ ಆಪ್ತ ಮಹೇಶ ಕುಮಟಳ್ಳಿ ಪರ ನಿಂತಿದ್ದರು. ಈ ಚುನಾವಣೆಯಲ್ಲಿ ಸವದಿಗೆ ಭಾರೀ ಮುಖಭಂಗವಾಗಿತ್ತು.
ರಾಜಕೀಯ ಸ್ಥಿತಿ ಬದಲಾದಂತೆ ಮಹೇಶ ಕುಮಟಳ್ಳಿ ಮತ್ತು ರಮೇಶ್‌ ಜಾರಕಿಹೊಳಿ ಇಬ್ಬರೂ ಬಿಜೆಪಿಯಲ್ಲಿದ್ದಾರೆ. ಕಟ್ಟಾ ಬಿಜೆಪಿವಾದಿಯಾಗಿದ್ದ ಲಕ್ಷ್ಮಣ ಸವದಿ ಈಗ ಕಾಂಗ್ರೆಸ್‌ನಲ್ಲಿದ್ದಾರೆ. ಇದೊಂದೇ ವ್ಯತ್ಯಾಸ. ಒಂದು ವೇಳೆ ಮಹೇಶ ಕುಮಟಳ್ಳಿ ಚುನಾವಣೆಯಲ್ಲಿ ಗೆದ್ದರೆ ಸವದಿ ಅವರ ಹ್ಯಾಟ್ರಿಕ್‌ ಸಾಧನೆ ಸರಿಗಟ್ಟಲಿದ್ದಾರೆ. ಅಥಣಿ ಕ್ಷೇತ್ರದಲ್ಲಿ ಇದುವರೆಗೆ ಸವದಿ ಹೊರತುಪಡಿಸಿ ಬೇರೆ ಯಾವ ಅಭ್ಯರ್ಥಿಯೂ ಹ್ಯಾಟ್ರಿಕ್‌ ಸಾಧನೆ ಮಾಡಿಲ್ಲ.

ಕಾಗವಾಡದಲ್ಲಿ ಶ್ರೀಮಂತ ಕಸರತ್ತು: ಕಾಗವಾಡ ಕ್ಷೇತ್ರದಲ್ಲೂ ಸಹ ಇದೇ ಪರಿಸ್ಥಿತಿ ಇದೆ. ಬಿಜೆಪಿಯ ಶ್ರೀಮಂತ ಪಾಟೀಲ ಸಹ ಹ್ಯಾಟ್ರಿಕ್‌ ಸಾಧನೆ ಬಾಗಿಲಲ್ಲಿದ್ದಾರೆ. ಕಾಗವಾಡ ಕ್ಷೇತ್ರದಲ್ಲಿ ಇದುವರೆಗೆ ರಾಜು ಕಾಗೆ ಹೆಸರಿನಲ್ಲಿ ಮಾತ್ರ ಹ್ಯಾಟ್ರಿಕ್‌ ಸಾಧನೆಯ ಗೌರವವಿದೆ. ಈ ಸಾಧನೆ ಮಾಡುವಾಗ ರಾಜು ಕಾಗೆ ಬಿಜೆಪಿಯಲ್ಲಿದ್ದರು ಎಂಬುದು ಗಮನಿಸಬೇಕಾದ ಅಂಶ.

ಈಗ ರಾಜು ಕಾಗೆ ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡುತ್ತಿದ್ದಾರೆ. ಶ್ರೀಮಂತ ಪಾಟೀಲ ಬಿಜೆಪಿಯಿಂದ ಎದುರಾಳಿಯಾಗಿದ್ದಾರೆ. ಕಳೆದ ಚುನಾವಣೆಯಲ್ಲಿ ಶ್ರೀಮಂತ ಪಾಟೀಲ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಮೊದಲ ಬಾರಿಗೆ ಶಾಸಕರಾಗಿದ್ದರು. ನಂತರ ಆಪರೇಷನ್‌ ಕಮಲಕ್ಕೆ ಒಳಗಾಗಿ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಶಾಸಕರಾದರು. ಶ್ರೀಮಂತ ಪಾಟೀಲ ಅವರ ಗೆಲುವಿನಲ್ಲೂ ರಮೇಶ್‌ ಜಾರಕಿಹೊಳಿ ಪಾತ್ರ ಬಹಳ ಮಹತ್ವದ್ದಾಗಿತ್ತು. ಉಪಚುನಾವಣೆಯಲ್ಲಿ ರಾಜು ಕಾಗೆ ಬಿಜೆಪಿ ಟಿಕೆಟ್‌ ಸಿಗದೆ ಅನಿವಾರ್ಯವಾಗಿ ಕಾಂಗ್ರೆಸ್‌ ಸೇರಿ ಚುನಾವಣೆ ಎದುರಿಸಿ ಸೋತಿದ್ದರು. ಈಗ ಮತ್ತೆ ಇಬ್ಬರೂ ಪರಸ್ಪರ ಎದುರಾಳಿಗಳಾಗಿದ್ದಾರೆ. ಒಂದು ವೇಳೆ ಶ್ರೀಮಂತ ಪಾಟೀಲ ಜಯಗಳಿಸಿದರೆ ಕಾಗವಾಡ ಕ್ಷೇತ್ರದಿಂದ ಸತತ ಮೂರು ಬಾರಿ ಗೆದ್ದ ಎರಡನೇ ಶಾಸಕರು ಎಂಬ ದಾಖಲೆಯಾಗಲಿದೆ.

ಕುಡಚಿಯಲ್ಲಿ ರಾಜೀವ್‌ ಸಾಧನೆಗೆ ಅಣಿ: ಕುಡಚಿ ಕ್ಷೇತ್ರದಲ್ಲಿ ಸತತ ಮೂರನೇ ಬಾರಿ ಗೆಲುವಿನ ತವಕದಲ್ಲಿರುವ ಪಿ.ರಾಜೀವ ಬಿಜೆಪಿ ಪಕ್ಷದವರು ಎಂಬುದು ವಿಶೇಷ. 2008ರಲ್ಲಿ ಹೊಸ ಕ್ಷೇತ್ರವಾಗಿ ಉದಯವಾದ ಕುಡಚಿಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದ ಪಿ.ರಾಜೀವ 2013ರಲ್ಲಿ ಬಿಎಸ್‌ಅರ್‌ ಪಕ್ಷದಿಂದ ಸ್ಪರ್ಧೆ ಮಾಡಿ ಮೊದಲ ಬಾರಿಗೆ ಗೆಲುವಿನ ಮೆಟ್ಟಿಲು ಹತ್ತಿದ್ದರು. ಅನಂತರ ಬಿಎಸ್‌ಅರ್‌ ಪಕ್ಷ ಬಿಜೆಪಿಯಲ್ಲಿ ವಿಲೀನವಾಯಿತು. ರಾಜೀವ್‌ ಬಿಜೆಪಿ ಶಾಸಕರಾಗಿ ಗುರುತಿಸಿಕೊಂಡರು. 2018ರಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡಿದ ರಾಜೀವ್‌ ಎರಡನೇ ಬಾರಿಗೆ ವಿಧಾನಸೌಧದ ಮೆಟ್ಟಿಲು ಹತ್ತಿದರು. ಈಗ ಸತತ ಮೂರನೇ ಬಾರಿಗೆ ಗೆಲುವಿನ ಕನಸು ಕಾಣುತ್ತಿದ್ದಾರೆ.

ಚಿಕ್ಕೋಡಿ ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷದ ಹುಕ್ಕೇರಿ ಕುಟುಂಬದ್ದೇ ದರ್ಬಾರ್‌. ಮೊದಲು ತಂದೆ ಪ್ರಕಾಶ ಹುಕ್ಕೇರಿ ಹಿಡಿತದಲ್ಲಿದ್ದ ಚಿಕ್ಕೋಡಿ-ಸದಲಗಾ ಕ್ಷೇತ್ರ ಈಗ ಅವರ ಪುತ್ರ ಗಣೇಶ ಕೈಯಲ್ಲಿದೆ. 2013ರಲ್ಲಿ ಗೆದ್ದಿದ್ದ ಪ್ರಕಾಶ ಹುಕ್ಕೇರಿ ರಾಜೀನಾಮೆ ನೀಡಿ 2014ರಲ್ಲಿ ಲೋಕಸಭೆಗೆ ಸ್ಪರ್ಧೆ ಮಾಡಿದರು. ಆಗ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡಿದ್ದ ಗಣೇಶ ಹುಕ್ಕೇರಿ ಮೊದಲ ಪ್ರಯತ್ನದಲ್ಲೇ ಶಾಸಕರಾದರು. 2018ರಲ್ಲಿ ಮತ್ತೆ ಕಣಕ್ಕಿಳಿದ ಗಣೇಶ ಹುಕ್ಕೇರಿ ಯಾವುದೇ ಅತಂಕವಿಲ್ಲದೆ ಎರಡನೇ ಬಾರಿಗೆ ವಿಧಾನಸಭೆ ಪ್ರವೇಶ ಮಾಡಿದರು. ಈಗ ಸತತ ಮೂರನೇ ಬಾರಿಗೆ ಸ್ಪರ್ಧೆ ಮಾಡಿರುವ ಗಣೇಶ ಹುಕ್ಕೇರಿಗೆ ಬಿಜೆಪಿಯಿಂದ ರಮೇಶ್‌ ಕತ್ತಿ ಪ್ರಬಲ ಪೈಪೋಟಿ ಒಡ್ಡಿದ್ದಾರೆ. ಈ ಕದನದಲ್ಲಿ ಗಣೇಶ ಹುಕ್ಕೇರಿ ಗೆದ್ದರೆ ತಂದೆಯಂತೆ ಮಗನೂ ಸಹ ಹ್ಯಾಟ್ರಿಕ್‌ ಸಾಧನೆ ಮಾಡಿದ ಗೌರವ ಪಡೆಯಲಿದ್ದಾರೆ.

ದಾಖಲೆ ಹಾದಿಯಲ್ಲಿ ಜೊಲ್ಲೆ
ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಸತತ ಮೂರನೇ ಬಾರಿಗೆ ಜಯ ಗಳಿಸಿದರೆ ಜಿಲ್ಲೆಯಿಂದ ಈ ಸಾಧನೆ ಮಾಡಿದ ಎರಡನೇ ಮಹಿಳಾ ಶಾಸಕಿ ಎಂಬ ದಾಖಲೆ ಬರೆಯಲಿದ್ದಾರೆ. ಇದುವರೆಗೆ ಕಾಂಗ್ರೆಸ್‌ನ ಚಂಪಾಬಾಯಿ ಬೋಗಲೆ ಮಾತ್ರ ಈ ಸಾಧನೆ ಮಾಡಿದ್ದಾರೆ. 1957ರಲ್ಲಿ ಹುಕ್ಕೇರಿ ದ್ವಿ ಸದಸ್ಯ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡಿ ಆಯ್ಕೆಯಾಗಿದ್ದ ಚಂಪಾಬಾಯಿ ಬೋಗಲೆ ಅನಂತರ 1962ರಲ್ಲಿ ಹೊಸದಾಗಿ ನಾಮಕರಣಗೊಂಡ ಸಂಕೇಶ್ವರ ಕ್ಷೇತ್ರದಿಂದ ಎರಡನೇ ಬಾರಿಗೆ ಶಾಸಕರಾಗಿದ್ದರು. ಮುಂದೆ 1967ರಲ್ಲಿ ಕ್ಷೇತ್ರ ಬದಲಾಯಿಸಿದ ಚಂಪಾಬಾಯಿ ಬೋಗಲೆ ಕಾಗವಾಡ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿ ಹ್ಯಾಟ್ರಿಕ್‌ ಗೌರವ ಪಡೆದರು. ಅಲ್ಲಿಂದ ಇದುವರೆಗೆ ಯಾವ ಮಹಿಳಾ ಶಾಸಕರು ಜಿಲ್ಲೆಯಲ್ಲಿ ಹ್ಯಾಟ್ರಿಕ್‌ ದಾಖಲೆ ಮಾಡಿಲ್ಲ. ಈಗ ನಿಪ್ಪಾಣಿಯ ಶಶಿಕಲಾ ಜೊಲ್ಲೆ ಅವರಿಗೆ ಈ ದಾಖಲೆ ಸರಿಗಟ್ಟುವ ಅವಕಾಶ ಸಿಕ್ಕಿದೆ. 2008ರಲ್ಲಿ ಶಾಸಕರಾಗುವ ಮೊದಲ ಪ್ರಯತ್ನದಲ್ಲಿ ಸೋತಿದ್ದ ಶಶಿಕಲಾ ಜೊಲ್ಲೆ 2013ರಲ್ಲಿ ಈ ದಾಹ ನೀಗಿಸಿಕೊಂಡರು. ಈ ಚುನಾವಣೆಯಲ್ಲಿ ಕಾಂಗ್ರೆಸ್‌ನ ಕಾಕಾಸಾಹೇಬ ಪಾಟೀಲ ಅವರನ್ನು ಸೋಲಿಸುವ ಮೂಲಕ ಹಿಂದಿನ ಚುನಾವಣೆ ಸೋಲಿನ ಸೇಡು ತೀರಿಸಿಕೊಂಡಿ ದ್ದರು. 2018ರಲ್ಲಿ ನಡೆದ ಚುನಾವಣೆಯಲ್ಲಿ ಶಶಿಕಲಾ ಜೊಲ್ಲೆ ಮತ್ತೆ ಕಾಂಗ್ರೆಸ್‌ನ ಕಾಕಾಸಾಹೇಬ ಅವರನ್ನು ಸೋಲಿಸಿದರು. ಈಗ ಸತತ ನಾಲ್ಕನೇ ಬಾರಿಗೆ ಇಬ್ಬರೂ ಮುಖಾಮುಖೀಯಾಗುತ್ತಿ ದ್ದಾರೆ. ಇಲ್ಲಿ ಗೆದ್ದರೆ ಶಶಿಕಲಾ ಅವರಿಗೆ ಹ್ಯಾಟ್ರಿಕ್‌ ಗೌರವ ಸಿಗಲಿದೆ.

~ ಕೇಶವ ಆದಿ

ಟಾಪ್ ನ್ಯೂಸ್

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.