ಜನಸಂಖ್ಯೆ ಆಧಾರಿತವಾಗಿ ಒಕ್ಕಲಿಗರಿಗೆ ಮೀಸಲಾತಿ ಹೆಚ್ಚಿಸಲು ಸಚಿವ ಡಾ.ಕೆ.ಸುಧಾಕರ್‌ ಮನವಿ

ಕೋವಿಡ್‌ ನಿಯಂತ್ರಣ ಕ್ರಮಗಳು ವೈಜ್ಞಾನಿಕವೇ ಹೊರತು ರಾಜಕೀಯವಲ್ಲ

Team Udayavani, Dec 23, 2022, 2:18 PM IST

dr-sdk

ಬೆಳಗಾವಿ : ಒಕ್ಕಲಿಗ ಸಮುದಾಯದ ಒಟ್ಟು ಜನಸಂಖ್ಯೆಗೆ ಹೋಲಿಸಿದರೆ ಶಿಕ್ಷಣ ಹಾಗೂ ಔದ್ಯೋಗಿಕ ಕ್ಷೇತ್ರದಲ್ಲಿ ನೀಡಿರುವ ಮೀಸಲಾತಿ ಕಡಿಮೆ ಇದೆ. ಇದಕ್ಕಾಗಿ ಮೀಸಲಾತಿ ಹೆಚ್ಚಳಕ್ಕೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ಒಕ್ಕಲಿಗ ಸಮುದಾಯದ ಜನಸಂಖ್ಯೆಗೆ ಹೋಲಿಸಿದರೆ ಶಿಕ್ಷಣ ಹಾಗೂ ಔದ್ಯೋಗಿಕ ಕ್ಷೇತ್ರದಲ್ಲಿ ನೀಡಿರುವ ಮೀಸಲಾತಿ ಸಾಲುವುದಿಲ್ಲ. ಒಕ್ಕಲಿಗರಲ್ಲಿ ಬಹುತೇಕರು ರೈತರಾಗಿದ್ದು, ದೇಶಕ್ಕೆ ಅಪಾರ ಕೊಡುಗೆ ನೀಡುತ್ತಿದ್ದಾರೆ. ಇದಕ್ಕಾಗಿ ಮೀಸಲಾತಿ ಹೆಚ್ಚಳಕ್ಕೆ ಕ್ರಮ ವಹಿಸಲು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದೆ. ನಾವು ಹೆಚ್ಚು ಮೀಸಲಾತಿ ಕೇಳಿಲ್ಲ, ಜನಸಂಖ್ಯೆಗೆ ತಕ್ಕಂತೆ ಮಾತ್ರ ನೀಡಲು ಕೋರಲಾಗಿದೆ. ಇಲ್ಲಿ ಯಾವುದೇ ಒತ್ತಡ ಇಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಎಲ್ಲಾ ಸಮುದಾಯಗಳ ಅಗತ್ಯವೇನು ಎಂಬುದನ್ನು ಅರಿತಿದ್ದಾರೆ. ಅವರು ಎಲ್ಲರಿಗೂ ಸಾಮಾಜಿಕ ನ್ಯಾಯ ನೀಡಲಿದ್ದಾರೆ ಎಂದರು.

ಎಸ್‌ಸಿ, ಎಸ್‌ಟಿ ಸಮುದಾಯ ಮೀಸಲಾತಿ ಹೆಚ್ಚಳ ಬಹಳ ವರ್ಷಗಳಿಂದ ಚರ್ಚೆಯಲ್ಲಿತ್ತು. ಆದರೆ ಮುಖ್ಯಮಂತ್ರಿಗಳು ಮಾತ್ರ ಅದನ್ನು ಸಾಕಾರಗೊಳಿಸಲು ಕ್ರಮ ವಹಿಸಿದ್ದಾರೆ ಎಂದರು.

ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದ ವಿಚಾರಣೆ ಸುಪ್ರೀಂ ಕೋರ್ಟ್‌ನಲ್ಲಿ ಇನ್ನೂ ನಡೆಯುತ್ತಿದೆ. ನ್ಯಾಯಾಲಯವು ಸಕಾರಾತ್ಮಕ ತೀರ್ಪು ನೀಡಲಿದೆ ಎಂಬ ವಿಶ್ವಾಸವಿದೆ. ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಆಶಯದಂತೆ ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂಬ ಹಾದಿಯಲ್ಲಿ ಸರ್ಕಾರ ನಡೆಯುತ್ತಿದೆ. ಎಲ್ಲಾ ಸಮುದಾಯಗಳ ನ್ಯಾಯ ಸಮ್ಮತ ಬೇಡಿಕೆಗೆ ಸರ್ಕಾರ ಮನ್ನಣೆ ನೀಡಲಿದೆ ಎಂದರು.

ಕೋವಿಡ್‌ ಮಾರ್ಗಸೂಚಿ ರಾಜಕೀಯವಲ್ಲ

ಕೋವಿಡ್‌ ನಿಯಂತ್ರಣಕ್ಕೆ ಕ್ರಮ ವಹಿಸಿರುವುದು ವೈಜ್ಞಾನಿಕ ಹಿನ್ನೆಲೆಯಿಂದಲೇ ಹೊರತು, ರಾಜಕೀಯ ಕಾರಣಕ್ಕಲ್ಲ. ಜೆಡಿಎಸ್‌ ನಾಯಕರಾದ ಎಚ್‌.ಡಿ.ಕುಮಾರಸ್ವಾಮಿಯವರು ಹಲವು ದಿನಗಳಿಂದ ಯಾತ್ರೆ ಮಾಡುತ್ತಿದ್ದಾರೆ. ಕಾಂಗ್ರೆಸ್‌ನ ರಾಹುಲ್‌ ಗಾಂಧಿಯುವರು ನೂರು ದಿನಕ್ಕೂ ಹೆಚ್ಚು ಕಾಲ ಯಾತ್ರೆ ಮಾಡಿದ್ದಾರೆ. ಆದರೆ ಇಷ್ಟು ದಿನಗಳಲ್ಲಿ ಕೋವಿಡ್‌ ಬಗ್ಗೆ ಸರ್ಕಾರ ಮಾತನಾಡಿಲ್ಲ. ಚೀನಾ, ಕೊರಿಯಾ ಮೊದಲಾದ ದೇಶಗಳಲ್ಲಿ ಪ್ರಕರಣ ಹೆಚ್ಚಿರುವುದರಿಂದ ಮಾತ್ರ ಈಗ ಜನರ ಆರೋಗ್ಯ ರಕ್ಷಣೆಗಾಗಿ ಕೋವಿಡ್‌ ನಿಯಂತ್ರಣಕ್ಕೆ ಕ್ರಮ ವಹಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರ ಬದ್ಧ ಆಡಳಿತದಿಂದಾಗಿ ಕೋವಿಡ್‌ ನಿಯಂತ್ರಣಕ್ಕೆ ಬಂದಿದೆ ಎಂದರು.

ಕಾಂಗ್ರೆಸ್‌, ಜೆಡಿಎಸ್‌ನ ಯಾತ್ರೆಗಳು ಸಾಮಾನ್ಯ ರಾಜಕೀಯ ಪ್ರಚಾರವಾಗಿದೆ. ಇದು ಜನರ ಮನಸ್ಸಿನ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಜೆಡಿಎಸ್‌ನ ಕುಮಾರಸ್ವಾಮಿಯವರು ಹಳೆ ಮೈಸೂರು ಪ್ರದೇಶಗಳಲ್ಲಿ ಯಾತ್ರೆ ಮಾಡುತ್ತಿದ್ದಾರೆ. ಉಳಿದೆಡೆ ಜೆಡಿಎಸ್‌ ಇಲ್ಲ ಎಂದರು.

ಕೋವಿಡ್‌ ಲಸಿಕೆಯನ್ನು ದಾಖಲೆಯ ಮಟ್ಟದಲ್ಲಿ ನೀಡಲಾಗಿದೆ. ರಾಜ್ಯದಲ್ಲಿ ಶೇ.100 ರಷ್ಟು ಲಸಿಕಾಕರಣ ಆಗಿದೆ. ಆದರೆ ಮೂರನೇ ಡೋಸ್‌ನ ಲಸಿಕೆಯನ್ನು ಕೂಡ ಎಲ್ಲರೂ ಪಡೆಯಬೇಕು. ಮೂಗಿಗೆ ಹಾಕುವ ಲಸಿಕೆಯಿಂದ ಮಕ್ಕಳಿಗೆ ಬಹಳ ಪ್ರಯೋಜನವಾಗಲಿದ ಎಂದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.