ಮಿಯ್ಯಾರು: ಹೆದ್ದಾರಿ ಬದಿ ಅರೆಬರೆ ಕಾಮಗಾರಿ, ಅಪಾಯ ಭೀತಿ!

Team Udayavani, Mar 29, 2021, 1:14 AM IST

ಮಿಯ್ಯಾರು: ಹೆದ್ದಾರಿ ಬದಿ ಅರೆಬರೆ ಕಾಮಗಾರಿ, ಅಪಾಯ ಭೀತಿ!

ಕಾರ್ಕಳ : ಬಜಗೋಳಿ ಮಿಯ್ಯಾರು ರಾಷ್ಟ್ರೀಯ ಹೆದ್ದಾರಿಯ ಜೋಡುಕಟ್ಟೆಯ ಕಾಜರ್‌ಬೈಲ್‌ ಸೇತುವೆ ಬಳಿ ರಸ್ತೆ ಕೆಟ್ಟಿದ್ದು, ವಾಹನ ಅಪಘಾತಕ್ಕೆ ಆಹ್ವಾನ ನೀಡುತ್ತಿದೆ.

ಈ ಹೆದ್ದಾರಿಯು ಮಿಯ್ಯಾರು ಪಂಚಾಯತ್‌ ವ್ಯಾಪ್ತಿಯಲ್ಲಿ ಹಾದು ಹೋಗಿದೆ. ರಸ್ತೆ ಬದಿಯಲ್ಲೇ ಕುಡಿಯುವ ನೀರಿನ ಭೂಗತ ಪೈಪ್‌ ಕೂಡ ಹಾದು ಹೋಗಿದ್ದು. ಇತ್ತೀಚೆಗೆ ಅದು ಕೆಟ್ಟು ಹೋದ ಹಿನ್ನೆಲೆಯಲ್ಲಿ ಇದನ್ನು ಸಂಬಂಧಿಸಿದವರು ದುರಸ್ತಿ ಪಡಿಸಿದ್ದಾರೆ. ಕಾಜರ್‌ಬೈಲ್‌ ಸೇತುವೆಯ ಒಂದು ಬದಿ ಅಗೆದು ಕಾಮಗಾರಿ ನಡೆಸಿ, ಪೈಪ್‌ ಮರು ಜೋಡಿಸಿ ಸರಿಪಡಿಸಲಾಗಿದೆ. ರಸ್ತೆ ಅಗೆಯುವಾಗ ಹೆದ್ದಾರಿ ರಸ್ತೆಗೂ ಹಾನಿಯಾಗಿದೆ.

ಅನಂತರದಲ್ಲಿ ಮುಚ್ಚುವಾಗ ಹಾನಿಯಾದ ಸ್ಥಳವನ್ನು ಹಿಂದಿನಂತೆ ಸರಿಯಾಗಿ ಮುಚ್ಚದೆ ಬಿಡಲಾಗಿದೆ. ಗುಂಡಿ ತೋಡಿದ ಜಾಗದಲ್ಲಿ ಕಲ್ಲು ಇಡಲಾಗಿದ್ದು, ಅವು ಮೇಲ್ಭಾಗದಲ್ಲೇ ಇವೆ. ವಾಹನ ಸಂಚರಿಸುವಾಗ ಇವುಗಳು ತೊಂದರೆ ಕೊಡುತ್ತಿವೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ದಿನಕ್ಕೆ ಸಹಸ್ರಾರು ವಾಹನಗಳು ವೇಗವಾಗಿ ಸಂಚಾರ ನಡೆಸುತ್ತಿದ್ದು, ಇದೇ ವೇಳೆ ಅಗೆದಿಟ್ಟ ಜಾಗದ ಕಲ್ಲುಗಳಿಂದ ಅಪಾಯ ಸಂಭವಿಸುತ್ತಿವೆ. ಬಹುಮುಖ್ಯವಾಗಿ ದ್ವಿಚಕ್ರ ವಾಹನ ಸವಾರರು ಇಲ್ಲಿ ಹೆಚ್ಚು ಅಪಘಾತಕ್ಕೆ ಒಳಗಾಗುತ್ತಿರುತ್ತಾರೆ.

ಲಘು, ಘನ ವಾಹನಗಳು ಒಂದಕ್ಕೊಂದು ಸೈಡ್‌ ಕೊಟ್ಟು ತೆರಳುವಾಗ ಸ್ಥಳದಲ್ಲಿನ ಕಲ್ಲುಗಳಿಗೆ ಗುದ್ದಿ ಬೀಳುವ ಸನ್ನಿವೇಶವೇ ಹೆಚ್ಚು. ರಾತ್ರಿ ವೇಳೆ ಹಲವು ಅಪಘಾತಗಳು ಈ ಸ್ಥಳದಲ್ಲಿ ಸಂಭವಿಸಿದ್ದೂ ಇದೆ ಎಂದು ಸ್ಥಳೀಯರು ಹೇಳುತ್ತಾರೆ. ಈ ಜಾಗವನ್ನು ಇದೇ ರೀತಿ ಇಟ್ಟಲ್ಲಿ ಮುಂದಿನ ದಿನಗಳಲ್ಲಿ ಮತ್ತಷ್ಟೂ ಅವಘಡಗಳು ಸಂಭವಿಸಿ ಜೀವಹಾನಿ ಸಂಭವಿಸುವ ಸಾಧ್ಯತೆಯೇ ಹೆಚ್ಚು. ಹೀಗಾಗಿ ಗುಂಡಿ ತೋಡಿಟ್ಟವರು ವೈಜ್ಞಾನಿಕವಾಗಿ ಹಿಂದಿನಂತೆ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಸರಿಪಡಿಸಿಕೊಡಬೇಕು ಎಂದು ವಾಹನ ಸವಾರರು ಹೇಳುತ್ತಾರೆ.

ಸ್ಥಳ ಪರಿಶೀಲನೆ ನಡೆಸಿ ಕ್ರಮ
ಹೆದ್ದಾರಿ ಬದಿ ಕಾಮಗಾರಿಗೆಂದು ಅಗೆದ ಸ್ಥಳ ಅಪಾಯಕಾರಿ ಸ್ಥಿತಿಯಲ್ಲಿರುವ ಬಗ್ಗೆ ನನ್ನ ಗಮನಕ್ಕೆ ಬಂದಿದ್ದು ನಾನು ಸ್ಥಳ ಪರಿಶೀಲನೆ ನಡೆಸಿ ಅನಂತರ ಅದರ ಬಗ್ಗೆ ಕ್ರಮ ವಹಿಸಲಾಗುವುದು.

-ಮಹಾದೇವ,, ಪಿಡಿಒ . ಮಿಯ್ನಾರು ಗ್ರಾ.ಪಂ.

ರಸ್ತೆ ಮುಚ್ಚದೆ ಹಾಗೆಯೇ ಬಿಡಲಾಗಿದೆ
ಇತ್ತೀಚೆಗೆ ಕಾಮಗಾರಿ ನಡೆಸಲೆಂದು ರಸ್ತೆಯನ್ನು ಅಗೆಯಲಾಗಿತ್ತು. ಅನಂತರ ಇದನ್ನು ಸರಿಯಾಗಿ ಮುಚ್ಚದೆ ಹಾಗೆಯೇ ಬಿಡಲಾಗಿದೆ. ಇಲ್ಲಿ ಸಾಮಾನ್ಯವಾಗಿ ರಾತ್ರಿ ಅಪಘಾತ ಆಗುತ್ತಿರುತ್ತವೆ.
-ಮೇಕ್ಸ್‌ , ಸ್ಥಳೀಯರು

ಟಾಪ್ ನ್ಯೂಸ್

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

1-wwewewqe

Temple; ಎಪ್ರಿಲ್‌ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.