ಶಾಸಕ ಪ್ರಿಯಾಂಕ್ ಖರ್ಗೆ ಪತ್ನಿ ಮೊಬೈಲ್ ಕಳವು: ಇಬ್ಬರ ಸೆರೆ
Team Udayavani, Feb 15, 2022, 11:00 AM IST
ಬೆಂಗಳೂರು: ವಾಯುವಿಹಾರಕ್ಕೆ ಹೋಗುತ್ತಿದ್ದ ಶಾಸಕ ಪ್ರಿಯಾಂಕ್ ಖರ್ಗೆ ಅವರ ಪತ್ನಿ ಶೃತಿ ಅವರ ಐಫೋನ್ ಕಸಿದುಕೊಂಡು ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ.
ಶಿವಾಜಿನಗರ ಖಾಜಾ ಮೋಯಿನ್(30) ಮತ್ತು ಕಾವಲ್ ಬೈರಸಂದ್ರದ ಶೇಕ್ ಇಲಿಯಾಜ್(25) ಬಂಧಿತ ಆರೋಪಿಗಳು. ಆರೋಪಿಗಳಿಂದ ಮೊಬೈಲ್ ವಶಕ್ಕೆ ಪಡೆಯಲಾಗಿದೆ.
ಫೆ.6ರಂದು ಬೆಳಗ್ಗೆ 7 ಗಂಟೆ ಸುಮಾರಿಗೆ ಸದಾಶಿವನಗರದ ಅಫಿನಿಟಿ ಜಿಮ್ ಬಳಿ ಮೊಬೈಲ್ನಲ್ಲಿ ಮಾತನಾಡಿಕೊಂಡು ಶೃತಿ ಅವರು ವಾಯುವಿಹಾರ ಹೋಗುತ್ತಿದ್ದರು. ಈ ವೇಳೆ ದ್ವಿಚಕ್ರವಾಹನದಲ್ಲಿ ಬಂದ ಆರೋಪಿಗಳು ಏಕಾಏಕಿ ಮೊಬೈಲ್ ಕಸಿದುಕೊಂಡ ಸ್ಯಾಂಕಿ ಕೆರೆ ಕಡೆ ಪರಾರಿಯಾಗಿದ್ದರು.
ಈ ಸಂಬಂಧ ಕಾರ್ಯಾಚರಣೆ ನಡೆಸಿ ಘಟನಾ ಸ್ಥಳದ ಸುತ್ತ-ಮುತ್ತಲ ಸಿಸಿ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲಿಸಿದಾಗ ಆರೋಪಿಗಳ ಸುಳಿವು ಸಿಕ್ಕಿತ್ತು. ಈ ಆಧಾರದ ಮೇಲೆ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಖಾಜಾ ಮೋಯಿನ್ ಮತ್ತು ಶೇಕ್ ಇಲಿಯಾಜ್ ಅಪರಾಧ ಹಿನ್ನೆಲೆಯುಳ್ಳವರಾಗಿದ್ದಾರೆ. ನಗರದ ವಿವಿಧೆಡೆ ದ್ವಿಚಕ್ರ ವಾಹನಗಳನ್ನು ಕಳವು ಮಾಡಿದ ಆರೋಪಿಗಳು, ಅವುಗಳಲ್ಲೇ ನಗರದ ವಿವಿ ಧೆಡೆ ಸುತ್ತಾಡಿ ಒಂಟಿಯಾಗಿ ಮೊಬೈಲ್ನಲ್ಲಿ ಮಾತನಾಡಿಕೊಂಡು ಹೋಗುವವರನ್ನು ಹಿಂಬಾಲಿಸಿ ಮೊಬೈಲ್ ಕಸಿದುಕೊಂಡು ಪರಾರಿಯಾಗುತ್ತಿದ್ದರು. ಕಳವು ಮೊಬೈಲ್ಗಳನ್ನು ಕಡಿಮೆ ಮೊತ್ತಕ್ಕೆ ಮಾರಾಟ ಮಾಡುತ್ತಿದ್ದರು. ಈ ಹಣದಲ್ಲಿ ಮೋಜಿನ ಜೀವನ ನಡೆಸುತ್ತಿದ್ದರು ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್
Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ
Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ
Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ