ಆಪರೇಷನ್ ಗಂಗಾ ಯಶಸ್ಸಿಗೆ ಭಾರತದ ಹೆಚ್ಚುತ್ತಿರುವ ಪ್ರಭಾವ ಕಾರಣ: ಪ್ರಧಾನಿ ಮೋದಿ
ಅನೇಕ ದೊಡ್ಡ ದೇಶಗಳು ನಾಗರಿಕರನ್ನು ಸ್ಥಳಾಂತರಿಸಲು ತೊಂದರೆಗಳನ್ನು ಎದುರಿಸುತ್ತಿವೆ
Team Udayavani, Mar 6, 2022, 4:23 PM IST
ಪುಣೆ : ಯುದ್ಧ ಪೀಡಿತ ಉಕ್ರೇನ್ನಲ್ಲಿ ಸಿಲುಕಿರುವ ನಾಗರಿಕರನ್ನು ಸ್ಥಳಾಂತರಿಸುವ ”ಆಪರೇಷನ್ ಗಂಗಾ”ದ ಯಶಸ್ಸಿಗೆ ಜಾಗತಿಕ ರಂಗದಲ್ಲಿ ಹೆಚ್ಚುತ್ತಿರುವ ಭಾರತದ ಪ್ರಭಾವವೇ ಕಾರಣ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ.
“ಅನೇಕ ದೊಡ್ಡ ದೇಶಗಳು ನಾಗರಿಕರನ್ನು ಸ್ಥಳಾಂತರಿಸಲು ತೊಂದರೆಗಳನ್ನು ಎದುರಿಸುತ್ತಿವೆ. ಆಪರೇಷನ್ ಗಂಗಾ ಮೂಲಕ ನಾವು ಸಾವಿರಾರು ಭಾರತೀಯರನ್ನು ಯುದ್ಧ ವಲಯದಿಂದ ಸುರಕ್ಷಿತವಾಗಿ ಸ್ಥಳಾಂತರಿಸುತ್ತಿದ್ದೇವೆ” ಎಂದು ಸಿಂಬಯಾಸಿಸ್ ವಿಶ್ವವಿದ್ಯಾಲಯದ ಸುವರ್ಣ ಮಹೋತ್ಸವ ಆಚರಣೆಯನ್ನು ಉದ್ಘಾಟಿಸಿ ಮಾತನಾಡುವ ವೇಳೆ ಪ್ರಧಾನಿ ಮೋದಿ ಹೇಳಿದ್ದಾರೆ.
ಇದನ್ನೂ ಓದಿ : “ಉಕ್ರೇನ್ ನಲ್ಲಿ ನಮ್ಮನ್ನು ರಕ್ಷಿಸಿದ್ದು ತ್ರಿವರ್ಣ ಧ್ವಜ”: ಉಜಿರೆ ತಲುಪಿದ ಹೀನಾ ಫಾತಿಮಾ
ಉಕ್ರೇನ್ನಲ್ಲಿ ಉಲ್ಬಣಗೊಳ್ಳುತ್ತಿರುವ ಬಿಕ್ಕಟ್ಟಿನ ಮಧ್ಯೆ, ಭಾರತ ಸರ್ಕಾರವು ಆಪರೇಷನ್ ಗಂಗಾ ಅಡಿಯಲ್ಲಿ ಯುದ್ಧ ಪೀಡಿತ ಉಕ್ರೇನ್ನಲ್ಲಿ ಸಿಲುಕಿಕೊಂಡಿದ್ದ 13,700 ನಾಗರಿಕರನ್ನು ಕಳೆದ ವಾರ ಪ್ರಾರಂಭಿಸಿದ ವಿಶೇಷ ವಿಮಾನಗಳಲ್ಲಿ ಸುರಕ್ಷಿತವಾಗಿರಿಸಿದೆ ಎಂದು ಸರ್ಕಾರ ಶನಿವಾರ ಹೇಳಿಕೆಯಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ