ಮುದ್ದೇಬಿಹಾಳ: ಯೂನಿಯನ್ ಬ್ಯಾಂಕ್ ಎಟಿಎಂ ದರೋಡೆ ಪ್ರಕರಣ ಭೇದಿಸಿದ ಪೊಲೀಸರು


Team Udayavani, Nov 27, 2021, 11:27 AM IST

7ATM

ಮುದ್ದೇಬಿಹಾಳ: ಪಟ್ಟಣದ ಹುಡ್ಕೋದ ಪಲ್ಲವಿ ಕಾಂಪ್ಲೆಕ್ಸ್ ನಲ್ಲಿರುವ ಯೂನಿಯನ್ ಬ್ಯಾಂಕ್ (ಹಿಂದಿನ ಕಾರ್ಪೋರೇಷನ್ ಬ್ಯಾಂಕ್) ಎಟಿಎಂ ದರೋಡೆ ಪ್ರಕರಣವನ್ನು ಮುದ್ದೇಬಿಹಾಳ ಪೊಲೀಸರು ಕೇವಲ ನಾಲ್ಕೇ ದಿನದಲ್ಲಿ ಭೇದಿಸಿ ಒಟ್ಟು 7 ಆರೋಪಿಗಳನ್ನು ಬಂಧಿಸಿದ್ದಾರೆ.

ದರೋಡೆಗೆ ಒಳಗಾದ 16 ಲಕ್ಷ ರೂಪಾಯಿಗಳನ್ನು ವಶಪಡಿಸಿಕೊಂಡು ಇಲಾಖೆಯ ಅಧಿಕಾರಿಗಳು ಮತ್ತು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಎಟಿಎಂ ದರೋಡೆ ಆಗಿರುವ ಘಟನೆ ನ.21 ರಂದು ಸಂಜೆ ಬೆಳಕಿಗೆ ಬಂದಿತ್ತು. ಎಟಿಎಂ ಇದ್ದ ಕೊಠಡಿಯ ಶಟರ್ಸ್‍ನ ಬಾಗಿಲ ಬೀಗ ಮುರಿದದ್ದು ಹೊರತು ಪಡಿಸಿದರೆ ಬೇರೆ ಯಾವುದೇ ಸುಳಿವು ಇರಲಿಲ್ಲ. ಎಟಿಎಂ ಯಂತ್ರಕ್ಕೆ ಧಕ್ಕೆಯೂ ಆಗಿರಲಿಲ್ಲ. ಆದರೆ ಅದರೊಳಗಿದ್ದ ಹಣ ಮಾತ್ರ ಮಾಯವಾಗಿತ್ತು. ಪ್ರಾರಂಭದಲ್ಲಿ ಈ ಪ್ರಕರಣ ಪೊಲೀಸರಿಗೆ ಸವಾಲೆನ್ನಿಸಿಕೊಂಡಿತ್ತು. ದರೋಡೆ ಹಿಂದೆ ಬ್ಯಾಂಕ್ ಸಿಬ್ಬಂದಿ ಕೈವಾಡ ಇರಬಹುದೆ ಎನ್ನುವ ಜಾಡಿನಲ್ಲಿ ತನಿಖೆ ನಡೆಸಿದಾಗ ಪ್ರಕರಣದ ಎಳೆ ಸಿಕ್ಕು ಅದನ್ನು ಹಿಂಬಾಲಿಸಿದಾಗ ಇಡೀ ಪ್ರಕರಣ ಬಯಲಿಗೆ ಬಂದಿದೆ.

ಇದೇ ಬ್ಯಾಂಕಿನಲ್ಲಿ ಹಿಂದೆ ಅಕೌಂಟಂಟ್ ಆಗಿದ್ದು ಈಗ ಬೇರೆ ಶಾಖೆಗೆ ವರ್ಗಾವಣೆಗೊಂಡಿರುವ ಮಹಿಳಾ ಸಿಬ್ಬಂದಿಯ ಪ್ರಿಯಕರ ಎ- 1 ಆರೋಪಿ ಎನ್ನುವುದು ಗೊತ್ತಾದ ಕೂಡಲೇ ಕಾರ್ಯಾಚರಣೆಗಿಳಿದ ಪೊಲೀಸರು ಆಕೆಯೂ ಸೇರಿ ಒಟ್ಟು ಏಳು ಆರೋಪಿಗಳನ್ನು ಬಲೆಗೆ ಕೆಡವಿದರು. ಎ-1 ಆರೋಪಿ ತನ್ನ ಪ್ರೇಯಸಿಯ ಮೋಬೈಲನಿಂದ ಕದ್ದಿದ್ದ ಎಟಿಎಂ ಸಿಕ್ರೇಟ್ ಕೋಡ್ ಬಳಸಿ, ಮೂವರು ಸ್ಥಳೀಯ ಗೊಲ್ಲರ ಯುವಕರು, ಓರ್ವ ಕಾರು ಚಾಲಕ, ಬ್ಯಾಂಕಿನ ಕಾವಲುಗಾರ ಹಾಗೂ ಇವರಿಗೆ ಸಹಕರಿಸಿದ ಒಟ್ಟು ಏಳು ಆರೋಪಿಗಳನ್ನು ಬಂಧಿಸಿದ್ದಾರೆ.

ಶನಿವಾರ ಮದ್ಯಾಹ್ನದ ನಂತರ ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಟರ ಕಚೇರಿಗೆ ತೆರಳಿ ಆರೋಪಿಗಳ ಹೆಸರು ಬಹಿರಂಗಪಡಿಸಲು ಸಿದ್ದತೆ ನಡೆಸಿದ್ದಾರೆ. ಬಸವನ ಬಾಗೇವಾಡಿ ಡಿಎಸ್ಪಿ ಅರುಣಕುಮಾರ ಕೋಳೂರ, ಮುದ್ದೇಬಿಹಾಳ ಸಿಪಿಐ ಆನಂದ ವಾಘ್ಮೋಡೆ, ಮಹಿಳಾ ಪಿಎಸೈ ರೇಣುಕಾ ಜಕನೂರ, ಪ್ರೊಬೇಷನರಿ ಪಿಎಸೈ ದೀಪಾ ಮತ್ತು ಸ್ಥಳೀಯ ಠಾಣೆಯ ಕ್ರೈಂ ಮತ್ತು ಸಿವಿಲ್ ಪೊಲೀಸ್ ಸಿಬ್ಬಂದಿಯ ಕಾರ್ಯತತ್ಪರತೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆನಂದಕುಮಾರ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

ಪಿಜಿಇಟಿ ವೈದ್ಯಕೀಯ ಕೋರ್ಸು: ಜ.21ರ ವರೆಗೆ ದಾಖಲೆ ಪರಿಶೀಲನೆ

ಪಿಜಿಇಟಿ ವೈದ್ಯಕೀಯ ಕೋರ್ಸು: ಜ.21ರ ವರೆಗೆ ದಾಖಲೆ ಪರಿಶೀಲನೆ

ಮನೆ ಬಾಗಿಲಿಗೆ ಪಿಂಚಣಿ ಕಾರ್ಯಕ್ರಮ ಮುಂದೂಡಿಕೆ

ಮನೆ ಬಾಗಿಲಿಗೆ ಪಿಂಚಣಿ ಕಾರ್ಯಕ್ರಮ ಮುಂದೂಡಿಕೆ

ಸ್ಪೆಕ್ಟ್ರಂ ಬಾಕಿ 30,791 ಕೋಟಿ ಕೊಟ್ಟ ರಿಲಯನ್ಸ್‌ ಜಿಯೋ

ಸ್ಪೆಕ್ಟ್ರಂ ಬಾಕಿ 30,791 ಕೋಟಿ ಕೊಟ್ಟ ರಿಲಯನ್ಸ್‌ ಜಿಯೋ

ಹೆಚ್ಚಿನ ಅವಧಿಗೆ ಶಾಸಕರ ಅಮಾನತು ಅಸಾಂವಿಧಾನಿಕ: ಸುಪ್ರೀಂಕೋರ್ಟ್‌

ಹೆಚ್ಚಿನ ಅವಧಿಗೆ ಶಾಸಕರ ಅಮಾನತು ಅಸಾಂವಿಧಾನಿಕ: ಸುಪ್ರೀಂಕೋರ್ಟ್‌

ರಸ್ತೆಯಲ್ಲೇ ಹರಡಿದ್ದ ಹುರುಳಿ ಸೊಪ್ಪು : ಗರ್ಭಿಣಿಯನ್ನು ಹೊತ್ತ ಆಂಬ್ಯುಲೆನ್ಸ್ ಸವಾರನ ಪರದಾಟ

ಆಂಬ್ಯುಲೆನ್ಸ್ ಚಕ್ರಕ್ಕೆ ಹುರುಳಿ ಸೊಪ್ಪು ಸಿಲುಕಿ ಅವಾಂತರ : ಗರ್ಭಿಣಿ ಪರದಾಟ, ಚಾಲಕ ಸುಸ್ತು

ಗಂಗಾವತಿ : ಮರೀಚಿಕೆಯಾದ ಪೂರ್ಣ ಪ್ರಮಾಣದ ರೈಲು ನಿಲ್ದಾಣ, ಪ್ರಯಾಣಿಕರ ಗೋಳು

ಗಂಗಾವತಿ : ಮರೀಚಿಕೆಯಾದ ಪೂರ್ಣ ಪ್ರಮಾಣದ ರೈಲು ನಿಲ್ದಾಣ, ಪ್ರಯಾಣಿಕರ ಗೋಳು

ಹಳೇ ಲ್ಯಾಂಡ್‌ ರೋವರ್‌ 3 ಎಂ.ಎಸ್‌.ಧೋನಿ ಪಾಲು

ಹಳೇ ಲ್ಯಾಂಡ್‌ ರೋವರ್‌ 3 ಎಂ.ಎಸ್‌.ಧೋನಿ ಪಾಲು!ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

27cleaning

ರಜಪೂತ ಸಮಾಜದಿಂದ ಮುಕ್ತಿಧಾಮ ಸ್ವಚ್ಛತಾ ಕಾರ್ಯ

26school

ಮೊರಾರ್ಜಿ ವಸತಿ ಶಾಲೆ ಲೋಕಾರ್ಪಣೆಗೆ ಸಿದ್ದ

25apeal

ಬಾಲಾಜಿ ಸಕ್ಕರೆ ಕಾರ್ಖಾನೆ ವಿರುದ್ಧ ಪ್ರತಿಭಟನೆ

6death

ಮಂಡ್ಯದಲ್ಲಿ ಮುದ್ದೇಬಿಹಾಳದ ವ್ಯಕ್ತಿ ಸಾವು

20police

ಮೋರಟಗಿ ಪೊಲೀಸ್‌ ಠಾಣೆಗೆ ಸಿಬ್ಬಂದಿ ಕೊರತೆ

MUST WATCH

udayavani youtube

24 ಅಡಿ ಎತ್ತರದ ಸೈಕಲ್ ತಯಾರಿಸಿ ರೈಡ್ ಮಾಡಿದ ವ್ಯಕ್ತಿ

udayavani youtube

ನೆಲಕಡಲೆಯ ಕೃಷಿಯಲ್ಲಿ ಯಶಸ್ವಿ ಕಂಡ ರೈತ

udayavani youtube

ಕರ್ಫ್ಯೂ ತೆಗೆಯಿರಿ : ತಮ್ಮ ಸರಕಾರದ ವಿರುದ್ಧವೇ ಗರ್ಜಿಸಿದ ಸಿಂಹ

udayavani youtube

ಮೊಸಳೆಯ ಜೊತೆ ಯುವಕನ ಮೃತದೇಹ : ದಾಂಡೇಲಿಯ ಕಾಳಿ ನದಿಯಲ್ಲಿ ಘಟನೆ

udayavani youtube

ಕೃಷ್ಣಾಪುರ ಪರ್ಯಾಯ – 2022 Highlights

ಹೊಸ ಸೇರ್ಪಡೆ

ಪಿಜಿಇಟಿ ವೈದ್ಯಕೀಯ ಕೋರ್ಸು: ಜ.21ರ ವರೆಗೆ ದಾಖಲೆ ಪರಿಶೀಲನೆ

ಪಿಜಿಇಟಿ ವೈದ್ಯಕೀಯ ಕೋರ್ಸು: ಜ.21ರ ವರೆಗೆ ದಾಖಲೆ ಪರಿಶೀಲನೆ

ಮನೆ ಬಾಗಿಲಿಗೆ ಪಿಂಚಣಿ ಕಾರ್ಯಕ್ರಮ ಮುಂದೂಡಿಕೆ

ಮನೆ ಬಾಗಿಲಿಗೆ ಪಿಂಚಣಿ ಕಾರ್ಯಕ್ರಮ ಮುಂದೂಡಿಕೆ

shivamogga news

473 ಕೋಟಿ ರೂ. ವೆಚ್ಚದಲ್ಲಿ ಸ್ಮಾರ್ಟ್‌ಸಿಟಿ ಯೋಜನೆ

ಸ್ಪೆಕ್ಟ್ರಂ ಬಾಕಿ 30,791 ಕೋಟಿ ಕೊಟ್ಟ ರಿಲಯನ್ಸ್‌ ಜಿಯೋ

ಸ್ಪೆಕ್ಟ್ರಂ ಬಾಕಿ 30,791 ಕೋಟಿ ಕೊಟ್ಟ ರಿಲಯನ್ಸ್‌ ಜಿಯೋ

ದ್ತಯುಇಕಮನಬವಚಷಱ

ಖರ್ಗೆದ್ವಯರಿಗಾಗಿ ದತ್ತ ದೇಗುಲದಲ್ಲಿ ಪೂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.