ಕುಡಿದು ವಾಹನ ಚಲಾಯಿಸಿ ಪೊಲೀಸರ ನಿಂದನೆ: ನಟಿ ಕಾವ್ಯಾ ಥಾಪರ್ ಬಂಧನ
Team Udayavani, Feb 18, 2022, 5:06 PM IST
ಮುಂಬಯಿ: ಪಶ್ಚಿಮ ಉಪನಗರ ಜುಹುದಲ್ಲಿ ಮದ್ಯದ ಅಮಲಿನಲ್ಲಿ ಚಾಲನೆ ಮಾಡುವಾಗ ನಿಂತಿದ್ದ ವಾಹನಕ್ಕೆ ತನ್ನ ಕಾರನ್ನು ಢಿಕ್ಕಿ ಹೊಡೆದ ನಂತರ ಪೊಲೀಸ್ ಸಿಬ್ಬಂದಿಯನ್ನು ಅವಾಚ್ಯವಾಗಿ ನಿಂದಿಸಿ ಮತ್ತು ಹಲ್ಲೆ ಮಾಡಲು ಯತ್ನಿಸಿದ ಆರೋಪದ ಮೇಲೆ ನಟಿ ಕಾವ್ಯಾ ಥಾಪರ್ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ತಮಿಳು ಮತ್ತು ತೆಲುಗು ಚಿತ್ರಗಳಲ್ಲಿ ನಟಿಸಿರುವ 26 ವರ್ಷದ ನಟಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಗುರುವಾರ ನಸುಕಿನ 1 ಗಂಟೆ ಸುಮಾರಿಗೆ ಜುಹುವಿನ ಜೆ ಡಬ್ಲ್ಯೂ ಮ್ಯಾರಿಯಟ್ ಹೋಟೆಲ್ ಬಳಿ ಈ ಘಟನೆ ನಡೆದಿದ್ದು, ಥಾಪರ್ ಅವರು ಮದ್ಯದ ಅಮಲಿನಲ್ಲಿ ಎಸ್ಯುವಿ ಚಲಾಯಿಸುತ್ತಿದ್ದರು ಎಂದು ಅವರು ಹೇಳಿದರು. ಥಾಪರ್ ಕಾರಿನ ನಿಯಂತ್ರಣ ಕಳೆದುಕೊಂಡು ನಿಂತಿದ್ದ ವಾಹನದ ಹಿಂಭಾಗಕ್ಕೆ ಢಿಕ್ಕಿ ಹೊಡೆದಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ದಾರಿಹೋಕರೊಬ್ಬರು ಘಟನೆಯನ್ನು ಗಮನಿಸಿ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿದ್ದು, ನಂತರ ಜುಹು ಪೊಲೀಸರ ತಂಡವು ಸ್ಥಳಕ್ಕೆ ಧಾವಿಸಿತು ಎಂದು ಅವರು ಹೇಳಿದರು.
ಪೊಲೀಸ್ ಸಿಬ್ಬಂದಿಯನ್ನು ನೋಡಿದ ನಟಿ ಅವರನ್ನು ಅವಾಚ್ಯವಾಗಿ ನಿಂದಿಸಲು ಪ್ರಾರಂಭಿಸಿ ಹಲ್ಲೆ ಮಾಡಲು ಪ್ರಯತ್ನಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಕಾವ್ಯಾ ಥಾಪರ್ ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
MUST WATCH
ಹೊಸ ಸೇರ್ಪಡೆ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…