ಮುರ್ಡೇಶ್ವರ : ಕಟ್ಟುನಿಟ್ಟಿನ ಕ್ರಮಗಳ ನಡುವೆ ವಾರ್ಷಿಕ ರಥೋತ್ಸವ ಸಂಪನ್ನ

Team Udayavani, Jan 20, 2022, 7:52 PM IST

1-mu

ಭಟ್ಕಳ: ಮಹತೋಭಾರ ಮುರ್ಡೇಶ್ವರ ದೇವರ ವಾರ್ಷಿಕ ರಥೋತ್ಸವ ಅತ್ಯಂತ ಕಟ್ಟುನಿಟ್ಟಿನ ಕ್ರಮಗಳ ನಡುವೆಯೂ ಅತ್ಯಂತ ಯಶಸ್ವೀಯಾಗಿ ಜರುಗಿತು. ಮುರ್ಡೇಶ್ವರ ರಥೋತ್ಸವದ ಇತಿಹಾಸದಲ್ಲಿಯೇ ಅತ್ಯಂತ ಕಡಿಮೆ ಸಂಖ್ಯೆಯಲ್ಲಿರುವ ಭಕ್ತರ ಜಯಘೋಷದ ನಡುವೆ ರಥೋತ್ಸವ ನಡೆದಿದ್ದು, ತಾಲೂಕಾಡಳಿತದ ಕಟ್ಟುನಿಟ್ಟಿನ ಕ್ರಮದಿಂದಾಗಿ ಜನತೆ ಮನೆಯಲ್ಲಿಯೇ ಕುರಿತು ಜಾತ್ರಾ ಮಹೋತ್ಸವವನ್ನು ವೀಕ್ಷಿಸಿದರು.

ಈ ವರ್ಷ ಡಾ. ಆರ್. ಎನ್. ಶೆಟ್ಟಿಯವರ ಪುತ್ರ ಸುನಿಲ್ ಶೆಟ್ಟಿ ಮತ್ತು ಕುಟುಂಬದವರು ನೂತನ ಬ್ರಹ್ಮ ರಥವನ್ನು ಸಮರ್ಪಣೆ ಮಾಡಿದ್ದು ಕೋವಿಡ್‍ನಿಂದಾಗಿ ಬ್ರಹ್ಮ ರಥೋತ್ಸವ ನಡೆಯುವುದೇ ಅನುಮಾನವಾಗಿತ್ತು. ಆದರೆ ಎಲ್ಲರ ಸಹಕಾರದಿಂದ ಕೋವಿಡ್ ನಿಯಾಮವಳಿಗಳನ್ನು ಪಾಲಿಸುವ ಕಟ್ಟು ನಿಟ್ಟಿನ ಆದೇಶದೊಂದಿಗೆ ಬ್ರಹ್ಮ ರಥೋತ್ಸವ ಜರುಗಿದ್ದು ಪೊಲೀಸರು ಹಾಗೂ ತಾಲ್ಲೂಕು ಆಡಳಿತ ಅತ್ಯಂತ ನಿಗಾ ವಹಿಸಿತ್ತು.

ರಥೋತ್ಸವಕ್ಕೂ ಪೂರ್ವ ತಾಲೂಕಾ ಆಡಳಿತ 200 ಜನರಿಗೆ ಪಾಸ್‍ಗಳನ್ನು ನೀಡಿದ್ದು ಪಾಸ್ ಹೊಂದದೇ ಇರುವವರು ರಥೋತ್ಸವದ ಸ್ಥಳದಿಂದ ಹೊರ ಹೋಗುವಂತೆ ಪೊಲೀಸ್ ಪದೇ ಪದೇ ಮೈಕ್ ಮೂಲಕ ಹೇಳುತ್ತಿದ್ದುದು ಜನರನ್ನು ನಿಯಂತ್ರಿಸಲು ಸಹಕಾರಿಯಾಯಿತು.

ರಥೋತ್ಸವದ ವೇಳೆಯಲ್ಲಿ ದೇವಸ್ಥಾನದ ಪ್ರಧಾನ ಅರ್ಚಕ ಜಯರಾಮ ಅಡಿಗಳ್ ರಥೋತ್ಸವದ ವಿಧಿ ವಿಧಾನಗಳನ್ನು ಪೂರೈಸಿದರು. ಇನ್ನೋರ್ವ ಪ್ರಧಾನ ಅರ್ಚಕ ಶಿವರಾಮ ಅಡಿಗಳ್, ದೇವಸ್ಥಾನದ ರಥದಾನಿ ಸುನಿಲ್ ಆರ್. ಶೆಟ್ಟಿ ಹಾಗೂ ಕುಟುಂಬದವರು, ನಾಗರಾಜ ಶೆಟ್ಟಿ, ದೇವಸ್ಥಾನದ ವ್ಯವಸ್ಥಾಪಕ ಮಂಜುನಾಥ ಶೆಟ್ಟಿ, ಶಾಸಕ ಸುನಿಲ್ ನಾಯ್ಕ, ಹಿರಿಯ ನ್ಯಾಯವಾದಿ ಆರ್. ಆರ್. ಶ್ರೇಷ್ಟಿ, ನಾಗರೀಕ ಸೇವಾ ಸಮಿತಿಯ ಎಸ್. ಎಸ್. ಕಾಮತ್, ಕಾಸ್ಕಾರ್ಡ ಬ್ಯಾಂಕಿನ ಮಾಜಿ ಉಪಾಧ್ಯಕ್ಷ ಈಶ್ವರ ಎನ್. ನಾಯ್ಕ, ಈಶ್ವರ ದೊಡ್ಮನೆ, ಜಯಂತ ನಾಯ್ಕ, ರಾಮದಾಸ ಶೇಟ್, ಗಜಾನನ ನಾಯ್ಕ, ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರುಗಳು ಉಪಸ್ಥಿತರಿದ್ದರು.

ಸಹಾಯಕ ಆಯುಕ್ತೆ ಮಮತಾದೇವಿ ಜಿ.ಎಸ್. ಹಾಗೂ ತಹಸೀಲ್ದಾರ್ ರವಿಚಂದ್ರ ಎಸ್. ಅವರು ಸ್ವತಹ ಹಾಜರಿದ್ದು ರಥೋತ್ಸವದ ಕಾರ್ಯಕ್ರಮ ವೀಕ್ಷಿಸುತ್ತಿದ್ದರು.

ಡಿ.ವೈ.ಎಸ್.ಪಿ. ಕೆ.ಯು. ಬೆಳ್ಳಿಯಪ್ಪ, ಸಿ.ಪಿ.ಐ. ಮಹಾಬಲೇಶ್ವರ ನಾಯ್ಕ, ಮುರ್ಡೇಶ್ವರ ಪಿ.ಎಸ್.ಐ. ರವೀಂದ್ರ ಬೀರಾದಾರ, ಗ್ರಾಮೀಣ ಠಾಣೆಯ ಸಬ್ ಇನ್ಸಪೆಕ್ಟರ್ ಭರತ್ ಕುಮಾರ್ ಸೇರಿದಂತೆ ಬೇರೆ ಬೇರೆ ಕಡೆಯಿಂದ ಸಬ್ ಇನ್ಸಪೆಕ್ಟರ್‍ಗಳು ಆಗಮಿಸಿದ್ದರು. ಮುಂಜಾಗ್ರತಾ ಕ್ರಮವಾಗಿ ಹೆಚ್ಚುವರಿ ಪೊಲೀಸ್ ಬಂದೋಬಸ್ತ ಏರ್ಪಡಿಸಲಾಗಿದ್ದು ರಥೋತ್ಸವ ನಡೆಯುವ ಎಲ್ಲಾ ರಸ್ತೆಗಳನ್ನು ಬ್ಯಾರಿಕೇಡ್ ಮೂಲಕ ಮುಚ್ಚಲಾಗಿತ್ತು.

ಟಾಪ್ ನ್ಯೂಸ್

ಪಂಚಮಸಾಲಿ ಮೀಸಲು ಹೋರಾಟಕ್ಕೆ ಸದಾ ಬೆಂಬಲ: ಮನಗೂಳಿ ಅಭಿನವಶ್ರೀ

ಪಂಚಮಸಾಲಿ ಮೀಸಲು ಹೋರಾಟಕ್ಕೆ ಸದಾ ಬೆಂಬಲ: ಮನಗೂಳಿ ಅಭಿನವಶ್ರೀ

ಭಾರತದಲ್ಲಿ 24ಗಂಟೆಯಲ್ಲಿ 2,022 ಕೋವಿಡ್ ಸೋಂಕು ಪ್ರಕರಣ ದೃಢ, 46 ಮಂದಿ ಸಾವು

ಭಾರತದಲ್ಲಿ 24ಗಂಟೆಯಲ್ಲಿ 2,022 ಕೋವಿಡ್ ಸೋಂಕು ಪ್ರಕರಣ ದೃಢ, 46 ಮಂದಿ ಸಾವು

ರಾಮನಗರದಲ್ಲಿ ಕುಮಾರಸ್ವಾಮಿ ಆಪರೇಷನ್! ಡಿಕೆ ಬ್ರದರ್ಸ್ ಗೆ ಟಕ್ಕರ್ ಕೊಡುತ್ತಾರಾ ಎಚ್ ಡಿಕೆ

ರಾಮನಗರದಲ್ಲಿ ಕುಮಾರಸ್ವಾಮಿ ಆಪರೇಷನ್! ಡಿಕೆ ಬ್ರದರ್ಸ್ ಗೆ ಟಕ್ಕರ್ ಕೊಡುತ್ತಾರಾ ಎಚ್ ಡಿಕೆ?

suicide

ಜಿಲ್ಲೆಯಲ್ಲಿ ಆತ್ಮಹತ್ಯೆ ಹೆಚ್ಚಳ

ಕೋವಿಡ್ 19: ಭಾರತ ಸೇರಿದಂತೆ 16 ದೇಶಗಳಿಗೆ ಪ್ರಯಾಣಿಸುವುದನ್ನು ನಿಷೇಧಿಸಿದ ಸೌದಿ ಅರೇಬಿಯಾ

ಕೋವಿಡ್ 19: ಭಾರತ ಸೇರಿದಂತೆ 16 ದೇಶಗಳಿಗೆ ಪ್ರಯಾಣಿಸುವುದನ್ನು ನಿಷೇಧಿಸಿದ ಸೌದಿ ಅರೇಬಿಯಾ

Don’t Think Rohit Sharma Needs A Break,” Says Ravi Shastri

ರೋಹಿತ್ ಶರ್ಮಾಗೆ ಬ್ರೇಕ್ ಕೊಟ್ಟಿದ್ಯಾಕೆ? ಇದು ಅನಗತ್ಯ: ರವಿ ಶಾಸ್ತ್ರಿ

siddaramaih

ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಒಂಟಿಯಾಗುತ್ತಿದ್ದಾರೆಯೇ? ಹೈಕಮಾಂಡ್ ನೀಡಿದ ಸಂದೇಶವೇನು?ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

ನಿಯಮ ಬಾಹಿರ ರಸ್ತೆ ನಿರ್ಮಾಣಕ್ಕೆ ಸಾರ್ವಜನಿಕರ ವಿರೋಧ

6

ದಲ್ಲಾಳಿ ಮುಕ್ತ ಮಾರುಕಟ್ಟೆ ಒದಗಿಸಲು ಯತ್ನ

5

ಕಷ್ಟದಲ್ಲಿದ್ದವರಿಗೆ ನೆರವಾಗುವ ಕೆಲಸವಾಗಲಿ

4

ಮಾಜಾಳಿಯಲ್ಲಿ ಅಪರೂಪದ ಏಡಿ ಪತ್ತೆ

ಫ್ರಾನ್ಸ್ ನಲ್ಲಿ ನಡೆದ ವಿಶ್ವ ಮಕ್ಕಳ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಶಿರಸಿಯ ಪ್ರೇರಣಾ

ಫ್ರಾನ್ಸ್ ನಲ್ಲಿ ನಡೆದ ವಿಶ್ವ ಮಕ್ಕಳ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಶಿರಸಿಯ ಪ್ರೇರಣಾ

MUST WATCH

udayavani youtube

ಉಡುಪಿಯಲ್ಲಿ ‘ ಮಾವಿನ ಮೇಳ ‘ | ನಾಳೆ ( may 23) ಕೊನೇ ದಿನ

udayavani youtube

ಶಿರ್ವ : ನೂತನ ಹೈಟೆಕ್‌ ಬಸ್ಸು ನಿಲ್ದಾಣ ಲೋಕಾರ್ಪಣೆ

udayavani youtube

ಬೆಳ್ತಂಗಡಿಯಲ್ಲೊಂದು ಗೋಡಂಬಿಯಾಕಾರದ ಮೊಟ್ಟೆ ಇಡುವ ಕೋಳಿ..

udayavani youtube

ಆಗ ನಿಮ್ಮಲ್ಲಿ 2 ಆಯ್ಕೆಗಳಿರುತ್ತವೆ .. ಅದೇನಂದ್ರೆ..

udayavani youtube

ದತ್ತಪೀಠದಲ್ಲಿ ನಮಾಜ್.. ವಿಡಿಯೋ ವೈರಲ್ : ಜಿಲ್ಲಾಧಿಕಾರಿ ಹೇಳಿದ್ದೇನು ?

ಹೊಸ ಸೇರ್ಪಡೆ

ಪಂಚಮಸಾಲಿ ಮೀಸಲು ಹೋರಾಟಕ್ಕೆ ಸದಾ ಬೆಂಬಲ: ಮನಗೂಳಿ ಅಭಿನವಶ್ರೀ

ಪಂಚಮಸಾಲಿ ಮೀಸಲು ಹೋರಾಟಕ್ಕೆ ಸದಾ ಬೆಂಬಲ: ಮನಗೂಳಿ ಅಭಿನವಶ್ರೀ

ಭಾರತದಲ್ಲಿ 24ಗಂಟೆಯಲ್ಲಿ 2,022 ಕೋವಿಡ್ ಸೋಂಕು ಪ್ರಕರಣ ದೃಢ, 46 ಮಂದಿ ಸಾವು

ಭಾರತದಲ್ಲಿ 24ಗಂಟೆಯಲ್ಲಿ 2,022 ಕೋವಿಡ್ ಸೋಂಕು ಪ್ರಕರಣ ದೃಢ, 46 ಮಂದಿ ಸಾವು

ರಾಮನಗರದಲ್ಲಿ ಕುಮಾರಸ್ವಾಮಿ ಆಪರೇಷನ್! ಡಿಕೆ ಬ್ರದರ್ಸ್ ಗೆ ಟಕ್ಕರ್ ಕೊಡುತ್ತಾರಾ ಎಚ್ ಡಿಕೆ

ರಾಮನಗರದಲ್ಲಿ ಕುಮಾರಸ್ವಾಮಿ ಆಪರೇಷನ್! ಡಿಕೆ ಬ್ರದರ್ಸ್ ಗೆ ಟಕ್ಕರ್ ಕೊಡುತ್ತಾರಾ ಎಚ್ ಡಿಕೆ?

5

ಯುಜಿಡಿ ಪೈಪ್ ಲೈನ್ ಗೆ ಖಾಸಗಿ ಲೇಔಟ್ ನ ಪೈಪ್ ಲೈನ್ ಜೋಡಣೆ : ಅಧಿಕಾರಿಗಳಿಂದ ತಡೆ

suicide

ಜಿಲ್ಲೆಯಲ್ಲಿ ಆತ್ಮಹತ್ಯೆ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.