
ಮುಸ್ಲಿಂ ಸಮುದಾಯಕ್ಕೆ ನಿಮಗಿಂತ ದೊಡ್ಡ ಶತ್ರು ಇಲ್ಲ; ಜಮೀರ್ ವಿರುದ್ಧ ಜೆಡಿಎಸ್ ಆಕ್ರೋಶ
ಸಿದ್ದಹಸ್ತನ ಜತೆ ಸೇರಿ ಮುಸ್ಲಿಂ ನಾಯಕರನ್ನು ಒಬ್ಬೊಬ್ಬರನ್ನಾಗಿಯೇ ಮುಗಿಸಿ...
Team Udayavani, Feb 5, 2023, 3:52 PM IST

ಬೆಂಗಳೂರು: ಮುಸ್ಲಿಂ ಸಮುದಾಯಕ್ಕೆ ನಿಮಗಿಂತ ದೊಡ್ಡ ಶತ್ರು ಬೇರೆ ಯಾರೂ ಇಲ್ಲ. ಸಮುದಾಯಕ್ಕೆ ಈ ಸತ್ಯ ಅರ್ಥವಾಗಿದೆ ಎಂದು ಕಾಂಗ್ರೆಸ್ ನಾಯಕ ಜಮೀರ್ ಅಹಮದ್ ಖಾನ್ ವಿರುದ್ಧ ಜೆಡಿಎಸ್ ಸರಣಿ ಟ್ವೀಟ್ ಗಳ ಮೂಲಕ ಭಾನುವಾರ ಆಕ್ರೋಶ ಹೊರ ಹಾಕಿದೆ.
” ಸಿ.ಎಂ. ಇಬ್ರಾಹಿಂ ಅವರನ್ನು ಕಾಂಗ್ರೆಸ್ ನಲ್ಲಿ ಮುಗಿಸಲು ಷಡ್ಯಂತ್ರ ರೂಪಿಸಿದಂತೆ, ಈಗ ಅವರ ಮಗನ ವಿಷಯದಲ್ಲೂ ದುಷ್ಟತಂತ್ರ ಹೂಡಲು ಹೊರಟಿದ್ದೀರಿ. ಸಿದ್ದಹಸ್ತನ ಜತೆ ಸೇರಿ ಮುಸ್ಲಿಂ ನಾಯಕರನ್ನು ಒಬ್ಬೊಬ್ಬರನ್ನಾಗಿಯೇ ಮುಗಿಸಿದ ಮಿಸ್ಟರ್ ಜಮೀರ್, ಮುಸ್ಲಿಂ ಸಮುದಾಯಕ್ಕೆ ನಿಮಗಿಂತ ದೊಡ್ಡ ಶತ್ರು ಬೇರೆ ಯಾರೂ ಇಲ್ಲ. ಸಮುದಾಯಕ್ಕೆ ಈ ಸತ್ಯ ಅರ್ಥವಾಗಿದೆ.” ಎಂದು ಟ್ವೀಟ್ ನಲ್ಲಿ ಕೆಂಡ ಕಾರಿದೆ.
”ಇಬ್ರಾಹಿಂ ಅವರನ್ನು ಕಾಂಗ್ರೆಸ್ ಪಕ್ಷದಲ್ಲಿ ಮುಗಿಸಲು ಹೊರಟಿದ್ದು ಸುಳ್ಳಾ? ನಿಮ್ಮ ರೀತಿ ಇಬ್ರಾಹಿಂ ಅವರು ರಾಜಕೀಯದಲ್ಲಿ ಸಭ್ಯತೆಯ ಎಲ್ಲೆ ಮೀರಿದವರಲ್ಲ. ಆದರೆ, ಸಭ್ಯತೆಯ ಗಂಧಗಾಳಿ ಗೊತ್ತಿಲ್ಲದ ನಿಮಗೆ ರಾಜಕೀಯ ಜನ್ಮಕೊಟ್ಟ ಮಾತೃಪಕ್ಷದ ಬಗ್ಗೆ ಇರುವ ಮತ್ಸರ ನಿಮ್ಮ ಕೊಳಕು ಮನಃಸ್ಥಿತಿಗೆ ಹಿಡಿದ ಕನ್ನಡಿ” ಎಂದು ಟ್ವೀಟ್ ಮಾಡಿದೆ.
”ನಾಲಗೆಯ ಮೇಲೆ ಸದಾ ಕಂಡವರ ಎಂಜಲು ಚಪ್ಪರಿಸುವ ಜಮೀರ್ ಅಹಮದ್, ನಿಮಗೆ ಮುಸ್ಲಿಂ ಸಮುದಾಯದ ಬಗ್ಗೆ ಮಾತನಾಡುವ ನೈತಿಕತೆ ಎಲ್ಲಿದೆ?ರಾಜಕಾರಣಕ್ಕಾಗಿ ನೀವು ಆ ಸಮುದಾಯವನ್ನು ಹೇಗೆ ನಡೆಸಿಕೊಂಡಿದ್ದಿರಿ? ಶ್ರೀ ಹೆಚ್.ಡಿ.ದೇವೇಗೌಡರ ಕುಟುಂಬ ಹೇಗೆ ನಡೆಸಿಕೊಳ್ಳುತ್ತಿದೆ ಎನ್ನುವುದು ದೇಶಕ್ಕೇ ಗೊತ್ತಿದೆ. ಭೂತದ ಬಾಯಲ್ಲಿ ಭಗವದ್ಗೀತೆ ಚೆನ್ನಾಗಿರಲ್ಲ” ಎಂದು ಸರಣಿ ಟ್ವೀಟ್ ಮಾಡಿದೆ.
”ಅರಮನೆಯಂಥ ವಿಲಾಸಿ ಭವನದಲ್ಲಿ ಐಷಾರಾಮಿ ಜೀವನ ನಡೆಸುವ ನಿಮಗೆ, ನಿಮ್ಮದೇ ಕ್ಷೇತ್ರದ ಗೌರಿಪಾಳ್ಯ, ಪಾದರಾಯನಪುರದ ಬಡ ಮುಸ್ಲಿಂ ಬಂಧುಗಳು ಎಂಥ ಕಷ್ಟದ ಸ್ಥಿತಿಯಲ್ಲಿ ಇದ್ದಾರೆ ಎನ್ನುವುದು ಗೊತ್ತಾ? ಕಾಮಾಲೆ ಕಣ್ಣಲ್ಲಿ ಮುಸ್ಲಿಂ ಸಮುದಾಯದ ಬಗ್ಗೆ ಮೊಸಳೆ ಕಣ್ಣೀರು ಹಾಕುವ ನಿಮಗೆ ಮುಸ್ಲಿಮರ ನೈಜಸ್ಥಿತಿಯ ಬಗ್ಗೆ ಅರಿವಿದೆಯಾ?” ಎಂದು ಪ್ರಶ್ನಿಸಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

ರಾಮನವಮಿ: ದೇವಾಲಯದ ಬಾವಿಯ ಸಿಮೆಂಟ್ ಹಾಸು ಕುಸಿದು 13 ಭಕ್ತರ ಮೃತ್ಯು

ಸ್ವಿಗ್ಗಿ ಸಮೀಕ್ಷೆಯಲ್ಲಿ ಏನಿದೆ…ಇಡ್ಲಿ ಇಂದಿಗೂ ಜನಪ್ರಿಯ ಎಂಬುದಕ್ಕೆ ಈ ವ್ಯಕ್ತಿಯೇ ಸಾಕ್ಷಿ!

ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಸಂಕಷ್ಟ; ಬಂಧಿಸುವಂತೆ ಕೋರ್ಟ್ ಆದೇಶ

ರಚನೆಯಾಗಿ ಎಂಟು ವರ್ಷಕ್ಕೇ ಸೋಂದಾ ಗ್ರಾಪಂಗೆ ಒಲಿದ ಗಾಂಧಿ ಗ್ರಾಮ ಪುರಸ್ಕಾರ

ಮರಳಿ ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಸಚಿವ ಗುಬ್ಬಿ ಶ್ರೀನಿವಾಸ್