ಮೈ ಶುಗರ್ ಸಕ್ಕರೆ ಕಾರ್ಖಾನೆ ಪುನಶ್ಚೇತನಕ್ಕೆ ಬದ್ಧ
Team Udayavani, May 29, 2020, 8:19 PM IST
ಬೆಂಗಳೂರು: ಮಂಡ್ಯದ ಮೈಶುಗರ್ ಸಕ್ಕರೆ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಲು ಸರ್ಕಾರ ಬದ್ಧ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದರು.
ಗೃಹ ಕಚೇರಿ “ಕೃಷ್ಣಾ’ದಲ್ಲಿ ಶುಕ್ರವಾರ ಮಂಡ್ಯ ಜಿಲ್ಲೆಯ ಶಾಸಕರೊಂದಿಗೆ ಸಭೆ ನಡೆಸಿದ ಯಡಿಯೂರಪ್ಪ, ಕಾರ್ಖಾನೆ ಪುನಶ್ಚೇತನಕ್ಕೆ ಸರ್ಕಾರ ಬದ್ಧವಾಗಿದೆ.
ಕಾರ್ಯಾಚರಣೆ ಮತ್ತು ನಿರ್ವಹಣೆ ಜತೆಗೆ ಸರ್ಕಾರವೇ ಕಾರ್ಖಾನೆಯ ಸಂಪೂರ್ಣ ನಿರ್ವಹಣೆ ಮಾಡುವುದರ ಸಾಧಕ- ಬಾಧಕ ಕುರಿತಂತೆ ಸಂಪುಟ ಸಹೋದ್ಯೋಗಿಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಇದಕ್ಕೂ ಮೊದಲು ಮಂಡ್ಯ ಜಿಲ್ಲೆಯ ಶಾಸಕರ ನಿಯೋಗ, ಐತಿಹಾಸಿಕ ಮಹತ್ವವುಳ್ಳ ಮಂಡ್ಯದ ಮೈಶುಗರ್ ಕಾರ್ಖಾನೆ ಸರ್ಕಾರಿ ಸ್ವಾಮ್ಯದಲ್ಲಿಯೇ ಉಳಿಯಬೇಕು. ಆ ಮೂಲಕ ಜಿಲೆಯ ರೈತರನ್ನು ಕಾಪಾಡಬೇಕು ಎಂದು ಮನವಿ ಮಾಡಿತು.
ಸಚಿವರಾದ ಶಿವರಾಮ ಹೆಬ್ಟಾರ್, ಕೆ.ಸಿ.ನಾರಾಯಣಗೌಡ, ಮಾಜಿ ಸಚಿವರಾದ ಸಿ.ಎಸ್.ಪುಟ್ಟರಾಜು, ಡಿ.ಸಿ. ತಮ್ಮಣ್ಣ, ಶಾಸಕರಾದ ಡಾ.ಕೆ.ಅನ್ನದಾನಿ, ರವೀಂದ್ರ ಶ್ರೀಕಂಠಯ್ಯ, ಕೆ.ಟಿ.ಶ್ರೀಕಂಠೇಗೌಡ, ರೈತ ಮುಖಂಡರಾದ ಸುನಂದಾ ಜಯರಾಮ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka; ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ
ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್ಗೆ ವಿನಾಯಿತಿ
NDA; ಮಂಡ್ಯಕ್ಕೆ ಬಂದಿರುವ ಕುಮಾರಸ್ವಾಮಿಯನ್ನು ಸೋಲಿಸಿ ಮನೆಗೆ ಕಳಿಸಿ: ಸಿದ್ದರಾಮಯ್ಯ
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
ಮತ್ತೆ 60 ಮಂದಿಯಿಂದ ಉಮೇದುವಾರಿಕೆ; 2ನೇ ಹಂತದ ಚುನಾವಣೆಗೆ ಈವರೆಗೆ 168 ಮಂದಿ ಕಣಕ್ಕೆ