ಮೈಸೂರು ಗ್ಯಾಂಗ್‍ರೇಪ್ ಪ್ರಕರಣದ ತನಿಖೆ ನಡೆಸಲು ಐದು ತಂಡ ರಚನೆ: ಬಸವರಾಜ್ ಬೊಮ್ಮಾಯಿ

Team Udayavani, Aug 27, 2021, 7:16 PM IST

mysore crime case

ಚಿಕ್ಕಬಳ್ಳಾಪುರ : ಮೈಸೂರಿನಲ್ಲಿ ಯುವತಿ ಮೇಲೆ ನಡೆದ ಅತ್ಯಾಚಾರ ಪ್ರಕರಣದ ಕುರಿತು ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಲು ಈಗಾಗಲೇ ಐದು ತಂಡಗಳನ್ನು ರಚಿಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರವಾಗಿ ವರದಿ ಸಲ್ಲಿಸಲು ಡಿಜಿಪಿ ಅವರಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು.

ತಾಲೂಕಿನ ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮದಲ್ಲಿ ಶ್ರೀ ಸತ್ಯ ಸಾಯಿ ಸರಳಾ ಸ್ಮಾರಕ ಆಸ್ಪತ್ರೆಯನ್ನು ರಾಷ್ಟ್ರ ಸೇವೆಗೆ ಸಮರ್ಪಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಘಟನೆಗೆ ಸಂಬಂಧಿಸಿದಂತೆ ಎಲ್ಲಾ ರೀತಿಯ ಮಾಹಿತಿಯನ್ನು ಕಲೆ ಹಾಕಲು ಘಟನಾ ಸ್ಥಳಕ್ಕೆ ತೆರಳಲು ಈಗಾಗಲೇ ಡಿಜಿಪಿ ಅವರಿಗೆ ಸೂಚನೆ ನೀಡಿದ್ದೇನೆ ಅವರು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ಸೂಕ್ತ ಕ್ರಮ ಜರುಗಿಸುತ್ತಾರೆ ಎಂದು ಸ್ಪಷ್ಟಪಡಿಸಿದರು.

ಸತ್ಯಸಾಯಿ ಸರಳ ಆಸ್ಪತ್ರೆಯನ್ನು ಉದ್ಘಾಟಿಸಿದ್ದೇನೆ ಬಹಳ ಸಂತೋಷವಾಗಿದೆ ಇಲ್ಲಿನ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಮತ್ತು ಅತ್ಯುತ್ತಮ ಸೌಲಭ್ಯಗಳು ಹೊಂದಿವೆ ಸಮಾಜದಲ್ಲಿರುವ ಎಲ್ಲಾ ವರ್ಗಗಳ ಜನರಿಗೆ ಉಚಿತವಾಗಿ ಆರೋಗ್ಯ ಸೇವೆ ನೀಡುತ್ತಿರುವುದು ನಿಜಕ್ಕೂ ಅಮೋಘವಾದ ಸೇವೆ ಸತ್ಯಸಾಯಿ ಸಂಸ್ಥೆಯ ಸದ್ಗುರು ಮಧುಸುಧನ್ ಸಾಯಿ ಅವರ ನೇತೃತ್ವದಲ್ಲಿ ಆಗುತ್ತಿದೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಅಗತ್ಯ ಸಹಾಯ ಮಾಡುತ್ತಿದ್ದಾರೆ ಎಂದರು.

ಇದನ್ನೂ ಓದಿ : ಅಸಂಘಟಿತ ಕಾರ್ಮಿಕರಿಗೆ ಜೀವನ ಭದ್ರತೆಯೊಂದಿಗೆ ಕೆಲಸಕ್ಕೆ ಸಮಾನ ವೇತನ ದೊರೆಯುವಂತಾಗಬೇಕು :ಸಿಎಂ

ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿಯಲ್ಲಿ ಅಂತಾರಾಷ್ಟ್ರೀಯ ವೈದ್ಯಕೀಯ ಕಾಲೇಜು ನಿರ್ಮಿಸಲು ಸಂಸ್ಥೆಗೆ ಸರ್ಕಾರದಿಂದ ಎಲ್ಲಾ ರೀತಿಯ ಸಹಕಾರವನ್ನು ನೀಡುತ್ತೇವೆ ಸಂಸ್ಥೆಯಲ್ಲಿ ನಡೆಯುತ್ತಿರುವ ಸೇವಾ ಮನೋಭಾವನೆಯ ವಿಚಾರದಲ್ಲಿ ಬಹಳಷ್ಟು ಸ್ಪೂರ್ತಿ ತೆಗೆದುಕೊಂಡು ಹೋಗುತ್ತಿದ್ದೇನೆ ಇಲ್ಲಿನ ಅಭಿವೃಧ್ಧಿಗೆ ಮತ್ತು ಸಂಸ್ಥೆಯನ್ನು ಇಡೀ ರಾಜ್ಯಾದ್ಯಂತ ಬೆಳೆಯಲು ಸಹಾಯ ಮಾಡಲು ಸರ್ಕಾರ ಬದ್ದವಾಗಿದೆಯೆಂದು ಸ್ಪಷ್ಟಪಡಿಸಿದರು.

ಗೃಹ ಸಚಿವರ ಹೇಳಿಕೆ ಸಂಬಂಧಿಸಿದಂತೆ ಸುಧ್ಧಿಗಾರರ ಪ್ರಶ್ನೆಗೆ ಉತ್ತರಿಸಿದೆ ಮುಖ್ಯಮಂತ್ರಿಗಳು ವಾಪಸ್ಸು ತೆರಳಿದರು ಈ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್,ರಾಜ್ಯ ಮಾವು ಅಭಿವೃಧ್ಧಿ ನಿಗಮದ ಅಧ್ಯಕ್ಷ ಕೆ.ವಿ.ನಾಗರಾಜ್,ನಗರಸಭೆಯ ಅಧ್ಯಕ್ಷ ಡಿ.ಎಸ್.ಆನಂದ್‍ರೆಡ್ಡಿ(ಬಾಬು),ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಮಲಿಂಪ್ಪ, ಉಪಾಧ್ಯಕ್ಷ ಚಿಂತಾಮಣಿಯ ಅರುಣ್‍ಬಾಬು, ಪ್ರಧಾನ ಕಾರ್ಯದರ್ಶಿ ಮರಳುಕುಂಟೆ ಕೃಷ್ಣಮೂರ್ತಿ,ಶಿಡ್ಲಘಟ್ಟ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸುರೇಂದ್ರಗೌಡ, ಶಿಡ್ಲಘಟ್ಟ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬಿ.ಸಿ.ನಂದೀಶ್, ಬಿಜೆಪಿ ಮುಖಂಡರಾದ ಲಕ್ಷ್ಮೀನಾರಾಯಣಗುಪ್ತ, ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.