
ನಂದಿನಿ ಹಾಲು ಪ್ರತಿ ಲೀಟರ್ ಗೆ 3 ರೂ. ಹೆಚ್ಚಳ…?
ಕೆಎಂಎಫ್‍ನ ವಾರ್ಷಿಕ ಸರ್ವಸಾಧಾರಣ ಸಭೆಯಲ್ಲಿ ಒಮ್ಮತದ ನಿರ್ಣಯ
Team Udayavani, Sep 11, 2022, 6:24 PM IST

ಬೆಂಗಳೂರು : ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡಲು ರೈತರ ಆರ್ಥಿಕಾಭಿವೃದ್ಧಿಗೆ ಪ್ರತಿ ಲೀಟರ್ ಹಾಲಿಗೆ 3 ರೂ. ಹೆಚ್ಚಳ ಮಾಡಲು ಕೆಎಂಎಫ್ ನಿರ್ಧರಿಸಿದೆ ಎಂದು ತಿಳಿದುಬಂದಿದೆ.
ಕಳೆದ ಶುಕ್ರವಾರದಂದು ನಗರದ ಖಾಸಗಿ ಹೊಟೇಲ್‍ನಲ್ಲಿ ಜರುಗಿದ ಕೆಎಂಎಫ್‍ನ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಈ ಬಗ್ಗೆ ಸರ್ವಾನುಮತದ ನಿರ್ಣಯ ಕೈಗೊಂಡಿದ್ದು, ಕೆಎಂಎಫ್‍ನ ಎಲ್ಲ 14 ಜಿಲ್ಲಾ ಹಾಲು ಒಕ್ಕೂಟಗಳು ಹಾಲಿನ ದರ ಹೆಚ್ಚಳ ಮಾಡುವುದರ ಬಗ್ಗೆ ಒಲುವು ತೋರಿವೆ ಎಂದು ಹೇಳಲಾಗುತ್ತಿದೆ.
ಹಾಲಿನ ದರ ಹೆಚ್ಚಳ ಮಾಡುವಂತೆ ಕಳೆದ 8 ತಿಂಗಳುಗಳಿಂದ ರಾಜ್ಯದ ಜಿಲ್ಲಾ ಹಾಲು ಒಕ್ಕೂಟಗಳು ಕೆಎಂಎಫ್‍ಗೆ ಒತ್ತಡ ಹೇರುತ್ತಿರುವ ಹಿನ್ನೆಲೆಯಲ್ಲಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದರೂ ಹಾಲಿನ ದರ ಹೆಚ್ಚಳಕ್ಕೆ ಸರ್ಕಾರ ಸೂಕ್ತವಾಗಿ ಸ್ಪಂದನೆ ನೀಡದ್ದರಿಂದ ಕೊನೆಗೂ ರೈತರ ಅನುಕೂಲಕ್ಕೋಸ್ಕರ ದರ ಹೆಚ್ಚಳಕ್ಕೆ ಮುಂದಾಗಿದೆ ಎಂದು ತಿಳಿದುಬಂದಿದೆ.
ದೇಶದಲ್ಲಿ ಕೆಎಂಎಫ್ ಹೊರತುಪಡಿಸಿ ಉಳಿದೆಲ್ಲ ಬೇರೆ ಬೇರೆ ಖಾಸಗಿ ಬ್ರಾಂಡ್‍ಗಳು ಹಾಲಿನ ದರದಲ್ಲಿ ಭಾರಿ ಬದಲಾವಣೆ ಮಾಡಿವೆ. ಕೆಎಂಎಫ್ ಮಾತ್ರ ಪ್ರತಿ ಲೀಟರ್ ಹಾಲಿಗೆ 37 ರೂ.ಗಳನ್ನು ನೀಡುತ್ತಿದೆ. ಬೇರೆ-ಬೇರೆ ಬ್ರಾಂಡ್‍ಗಳಿಗೆ ಹೋಲಿಕೆ ಮಾಡಿದರೆ 8 ರಿಂದ 10 ರೂ.ಗಳು ವ್ಯತ್ಯಾಸ ಕಂಡುಬರುತ್ತಿದೆ. ರೈತರ ಹಿತಕ್ಕಾಗಿ ನಂದಿನಿ ಹಾಲಿನ ದರದಲ್ಲಿ ಏರಿಕೆ ಮಾಡಲು ನಿರ್ಧರಿಸಿರುವ ಕೆಎಂಎಫ್, 3 ರೂ. ಹೆಚ್ಚಳ ಮಾಡಲು ಮುಂದಾಗಿದ್ದು ಏರಿಕೆ ಮಾಡಲಿರುವ ದರವನ್ನು ರೈತರಿಗೆ ನೀಡಲು ನಿರ್ಧಾರ ಕೈಗೊಂಡಿದೆ ಎಂದು ಹೇಳಲಾಗುತ್ತಿದೆ.
ದಕ್ಷಿಣ ಭಾರತದಲ್ಲಿ ವಿಪರೀತ ಮಳೆಯಾಗುತ್ತಿರುವದರಿಂದ ರೈತರ ಬೆಳೆಗಳು ಹಾನಿಯಾಗಿವೆ. ಹೈನುಗಾರಿಕೆಯನ್ನೇ ಅವಲಂಬಿಸಿರುವ ರೈತರಿಗೆ ನಂದಿನಿ ವರದಾನವಾಗಿದ್ದು, ಈ ಹಿನ್ನೆಲೆಯಲ್ಲಿ ರೈತರಿಗೆ ಉತ್ತೇಜಿಸಲು ಜೊತೆಗೆ ಹೈನುಗಾರಿಕೆಗೆ ಪ್ರೋತ್ಸಾಹ ನೀಡಲು ಹಾಲಿನ ದರದಲ್ಲಿ ಏರಿಕೆ ಮಾಡುವುದು ಅನಿವಾರ್ಯವಾಗಿದೆ ಎಂದು ಕೆಎಂಎಫ್‍ನ ಬಲ್ಲ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?
