ಚಹಾ, ಯೋಗದ ಮೇಲೂ ಸಂಚು: ನರೇಂದ್ರ ಮೋದಿ ಟೀಕೆ
Team Udayavani, Feb 8, 2021, 7:00 AM IST
ಸೋನಿತ್ಪುರ : ಭಾರತದ ಹೆಸರಿಗೆ ಮಸಿ ಬಳಿಯುವುದಕ್ಕಾಗಿ ಹೊಂಚು ಹಾಕುತ್ತಿರುವ ಜಾಗತಿಕ ಸಂಚುಕೋರರು ನಮ್ಮ ಚಹಾ, ಯೋಗವನ್ನೂ ಬಿಟ್ಟಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಟೀಕಿಸಿದ್ದಾರೆ.
ಈ ಮೂಲಕ ಸ್ವೀಡಿಶ್ ಹೋರಾಟಗಾರ್ತಿ ಗ್ರೆಟಾ ಥನ್ಬರ್ಗ್ ಟ್ವೀಟ್ ಮಾಡಿದ್ದ ವಿವಾದಿತ ಟೂಲ್ಕಿಟ್ ಬಗ್ಗೆ ಪ್ರಧಾನಿ ಇದೇ ಮೊದಲ ಬಾರಿಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಸ್ಸಾಂನ ಸೋನಿತ್ಪುರದಲ್ಲಿ ಮಾತನಾಡಿ, ವಿವಾದಿತ ಟೂಲ್ಕಿಟ್ನಲ್ಲಿ ನಮ್ಮ ಚಹಾ, ಯೋಗಾ ವಿರುದ್ಧವೂ ಅಪಪ್ರಚಾರ ಮಾಡುವ ಸಂಚಿತ್ತು ಎನ್ನುವುದನ್ನು ದಿಲ್ಲಿ ಪೊಲೀಸರು ಇತ್ತೀಚೆಗಷ್ಟೇ ಹೇಳಿದ್ದರು ಎಂದರು.
ಗ್ರೆಟಾ ಹೆಸರು ಪ್ರಸ್ತಾವಿಸದೆಯೇ ಭಾರತೀಯ ಸಂಸ್ಕೃತಿಯೊಂದಿಗೆ ತಳುಕು ಹಾಕಿಕೊಂಡಿರುವ ಚಹಾಕ್ಕೂ ಕಪ್ಪು ಮಸಿ ಬಳಿಯಲು ಪಿತೂರಿ ನಡೆದಿದೆ. ಚಹಾ ತೋಟದ ಕಾರ್ಮಿಕರು ಈ ಅಸಹಿಷ್ಣು ದಾಳಿಯನ್ನು ಸಹಿಸಿಕೊಳ್ಳಲಾರರು. ಅವರು ಖಂಡಿತ ಇದಕ್ಕೆ ತಕ್ಕ ಉತ್ತರ ನೀಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಭಾರತೀಯ ಚಹಾದಲ್ಲಿ ಕೀಟನಾಶಕದ ಅಂಶ ಅಧಿಕವಿದೆ ಎಂದು ಗ್ರೀನ್ಪೀಸ್ ಎನ್ಜಿಒ ಇತ್ತೀಚೆಗೆ ಮಾಡಿದ್ದ ಆರೋಪಕ್ಕೂ ಪ್ರಧಾನಿ ಈ ಮಾತುಗಳಿಂದ ತಿರುಗೇಟು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
MUST WATCH
ಹೊಸ ಸೇರ್ಪಡೆ
Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್
Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ
NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ