ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ :ಕುಂದಾಪುರದ ವಿಶ್ವನಾಥ ಭಾಸ್ಕರ್ ಗಾಣಿಗನಿಗೆ 3 ಚಿನ್ನದ ಪದಕ
Team Udayavani, Feb 22, 2021, 8:24 PM IST
ತಮಿಳುನಾಡು : ಕೊಯಂಬತ್ತೂರಿನಲ್ಲಿ ನಡೆದ ಸೀನಿಯರ್ ನ್ಯಾಷನಲ್ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ 2021 ಸ್ಪರ್ಧೆಯಲ್ಲಿ ಕುಂದಾಪುರ ತಾಲೂಕಿನ ಬಾಲಿಕೆರೆಯ ವಿಶ್ವನಾಥ್ ಭಾಸ್ಕರ್ ಗಾಣಿಗ ಅವರು 93 ಕೆಜಿ ದೇಹತೂಕ ವಿಭಾಗದಲ್ಲಿ 3 ಚಿನ್ನದ ಪದಕವನ್ನು ಗಳಿಸಿದ್ದಾರೆ.
ಫೆಬ್ರವರಿ 17 ರಿಂದ 21ರ ವರೆಗೆ ಐದು ದಿನಗಳ ಕಾಲ ನಡೆದ ಸ್ಪರ್ಧಾ ಕೂಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿದ ವಿಶ್ವನಾಥ್ ಭಾಸ್ಕರ್ ಗಾಣಿಗ 3 ಚಿನ್ನದ ಪದಕವನ್ನು ಪಡೆಯುವ ಮೂಲಕ ಕರ್ನಾಟಕ ತಂಡದ ಕೀರ್ತಿಯನ್ನು ಮೇಲೆತ್ತಿದ್ದಾರೆ.
ಬೆಂಚ್ ಪ್ರೆಸ್ ವಿಭಾಗದಲ್ಲಿ 180ಕೆಜಿ, ಸ್ಕ್ವಾಟ್ ವಿಭಾಗದಲ್ಲಿ 327.ಕೆಜಿ ಹಾಗೂ ಡೆಡ್ ಲಿಫ್ಟ್ ವಿಭಾಗದಲ್ಲಿ 320 ಕೆಜಿ ಭಾರ ಎತ್ತುವ ಮೂಲಕ ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡಿದ್ದಾರೆ.
ವಿಶ್ವನಾಥ್ ಭಾಸ್ಕರ್ ಗಾಣಿಗ ಅವರ ಸಾಧನೆಗೆ 2019ರಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್