ಮಣಿಪುರದಲ್ಲಿ ಸನ್ನಿ ಲಿಯೋನ್ ಫ್ಯಾಷನ್ ಶೋ ಸ್ಥಳದ ಬಳಿ ಗ್ರೆನೇಡ್ ಸ್ಫೋಟ!
Team Udayavani, Feb 4, 2023, 4:03 PM IST
ಇಂಫಾಲ: ನಟಿ ಸನ್ನಿ ಲಿಯೋನ್ ನಾಳೆ (ಭಾನುವಾರ) ಪಾಲ್ಗೊಳ್ಳಬೇಕಾಗಿದ್ದ ಫ್ಯಾಷನ್ ಶೋ ಕಾರ್ಯಕ್ರಮದ ಸ್ಥಳದ ಬಳಿ ಶನಿವಾರ ಪ್ರಬಲ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮಣಿಪುರದ ರಾಜಧಾನಿಯ ಹಟ್ಟಾ ಕಾಂಗ್ಜೆಬುಂಗ್ ಪ್ರದೇಶದಲ್ಲಿ ನಡೆದ ಘಟನೆಯಲ್ಲಿ ಯಾವುದೇ ವ್ಯಕ್ತಿಗಳಿಗೆ ಗಾಯಗಳಾದ ಬಗ್ಗೆ ವರದಿಯಾಗಿಲ್ಲ. ಶನಿವಾರ ಬೆಳಗ್ಗೆ 6.30ರ ಸುಮಾರಿಗೆ ಸ್ಥಳದಿಂದ ಕೇವಲ 100 ಮೀಟರ್ ದೂರದಲ್ಲಿ ಸ್ಫೋಟ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಸುಧಾರಿತ ಸ್ಫೋಟಕ ಸಾಧನ ಅಥವಾ ಗ್ರೆನೇಡ್ನಿಂದ ಸ್ಫೋಟ ಸಂಭವಿಸಿದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.ಈ ಸ್ಫೋಟದ ಹೊಣೆಯನ್ನು ಇದುವರೆಗೆ ಯಾವುದೇ ಉಗ್ರಗಾಮಿ ಸಂಘಟನೆ ಹೊತ್ತುಕೊಂಡಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್