ಮೇ 2ರಿಂದ ನೆಟ್, 4ರಿಂದ ಸಿಬಿಎಸ್ಇ ಪರೀಕ್ಷೆ
Team Udayavani, Feb 3, 2021, 6:50 AM IST
ಹೊಸದಿಲ್ಲಿ: ಯುಜಿಸಿ ನೆಟ್ (ರಾಷ್ಟ್ರೀಯ ಪ್ರವೇಶ ಪರೀಕ್ಷೆ ) ಪರೀಕ್ಷೆಯ ದಿನಾಂಕ ಮಂಗಳವಾರ ಹೊರಬಿದ್ದಿದ್ದು, ಮೇ 2ರಂದು ಪರೀಕ್ಷೆಗಳು ಆರಂಭವಾಗಲಿವೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಮಾಹಿತಿ ನೀಡಿದ್ದಾರೆ.
ಜೂನಿಯರ್ ರಿಸರ್ಚ್ ಫೆಲೋಶಿಪ್ ಹಾಗೂ ಸಹಾಯಕ ಪ್ರೊಫೆಸರ್ ಹುದ್ದೆಗೆ ಅರ್ಹತೆ ಪಡೆಯಲು ಇರುವ ಯುಜಿಸಿ- ನೆಟ್ ಪರೀಕ್ಷೆ ಗಳು ಮೇ 2ರಿಂದ ಆರಂಭ ವಾಗಿ 17ರವರೆಗೆ ನಡೆಯಲಿವೆ. ಪರೀಕ್ಷೆ ಬರೆಯ ಲಿಚ್ಛಿಸುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ugcnet.nta.nic.in ಮೂಲಕ ಅರ್ಜಿಯನ್ನು ಆನ್ಲೈನ್ನಲ್ಲೇ ಭರ್ತಿ ಮಾಡಬೇಕು. ಆನ್ಲೈನ್ ಅರ್ಜಿ ತುಂಬಲು ಫೆ. 2ರಿಂದ ಮಾ. 2ರ ವರೆಗೆ ಅವಕಾಶವಿದೆ. ಅರ್ಜಿ ಶುಲ್ಕವನ್ನು ಮಾ. 3ರೊಳಗೆ ಪಾವತಿಸಬೇಕು ಎಂದೂ ಪೋಖ್ರಿಯಾಲ್ ತಿಳಿಸಿದ್ದಾರೆ.
ಮೇ 4ರಿಂದ ಸಿಬಿಎಸ್ಇ ಪರೀಕ್ಷೆ
ಕೇಂದ್ರ ಮಾಧ್ಯಮಿಕ ಶಿಕ್ಷಣ ಮಂಡಳಿ (ಸಿಬಿಎಸ್ಇ) ಕೂಡ ಮಂಗಳವಾರ 10 ಮತ್ತು 12ನೇ ತರಗತಿ ಪರೀಕ್ಷೆಯ ದಿನಾಂಕ ಪ್ರಕಟಿಸಿದೆ. ಮೇ 4ರಿಂದ ಪರೀಕ್ಷೆ ಗಳು ಆರಂಭವಾಗಲಿದ್ದು, 10ನೇ ತರಗತಿ ಪರೀಕ್ಷೆ ಜೂ.7ಕ್ಕೆ ಹಾಗೂ 12ನೇ ತರಗತಿಯ ಪರೀಕ್ಷೆಗಳು ಜೂ. 10ರಂದು ಮುಕ್ತಾಯ ವಾಗಲಿವೆ ಎಂದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!