ಶಿವಣ್ಣ, ಸುದೀಪ್ ಅವರೊಟ್ಟಿಗೆ ಸಿನಿಮಾ ಕನಸಿನಲ್ಲೂ ಯೋಚಿಸಿರಲಿಲ್ಲ: ಉಪೇಂದ್ರ
ಮಾರ್ಚ್ 17 ರಂದು ಪಂಚಭಾಷೆಗಳಲ್ಲಿ ಕಬ್ಜ
Team Udayavani, Mar 6, 2023, 10:17 PM IST
ಬೆಂಗಳೂರು : ಈ ವರ್ಷದ ಬಹುನಿರೀಕ್ಷಿತ ‘ಕಬ್ಜ’ ಚಿತ್ರ ಮಾರ್ಚ್ 17 ರಂದು ಪಂಚಭಾಷೆಗಳಲ್ಲಿ ಬಿಡುಗಡೆಯಾಗಲಿದ್ದು, ಟ್ರೇಲರ್ಗೆ ಈಗಾಗಲೇ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಭಾರಿ ನಿರೀಕ್ಷೆ ಮೂಡಿಸಿದೆ.
ಚಿತ್ರದ ಕುರಿತು ಖಾಸಗಿ ವಾಹಿನಿಯೊಂದಿಗೆ ಅನುಭವ ಹಂಚಿಕೊಂಡ ರಿಯಲ್ ಸ್ಟಾರ್ ಉಪೇಂದ್ರ ನಾನು ಶಿವಣ್ಣ ಮತ್ತು ಸುದೀಪ್ ಅವರೊಟ್ಟಿಗೆ ಸಿನಿಮಾ ಮಾಡುತ್ತೇನೆ ಎಂದು ಕನಸಿನಲ್ಲೂ ಯೋಚಿಸಿರಲಿಲ್ಲ ಎಂದು ಸಂಭ್ರಮ ಹೊರ ಹಾಕಿದ್ದಾರೆ.
ಚಂದ್ರು ಅವರು ಮೂರು ವರ್ಷಗಳ ಕಾಲ ಪರಿಶ್ರಮ ಪಟ್ಟು ಮಾಡಿರುವ ಸಿನಿಮಾ ಇದು. ಮೇಕಿಂಗ್ ನೋಡಿದರೆ ನಿಮಗೆ ಆ ಅನುಭವಾಗುತ್ತದೆ. ಕಲಾ ನಿರ್ದೇಶಕ ಶಿವಕುಮಾರ್ ಕ್ಯಾಮೆರಾ ಮೆನ್ ಎ ಜೆ ಶೆಟ್ಟಿ ಅವರ ತಪಸ್ಸು ಇದು ಅದರೊಂದಿಗೆ ನಾವು ಪಯಣಿಸಿದ್ದೇವೆ ಎಂದು ಉಪೇಂದ್ರ ಹೇಳಿದ್ದಾರೆ.
ಬಿಗ್ ಬಿ ಚಿತ್ರದ ಟ್ರೇಲರ್ ರಿಲೀಸ್ ಮಾಡಿ ಚಿತ್ರತಂಡಕ್ಕೆ ಶುಭಕೋರಿದ್ದು ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಾಗಿದೆ. ಆರ್.ಚಂದ್ರು ನಿರ್ಮಾಣ, ನಿರ್ದೇಶನದ ಚಿತ್ರದಲ್ಲಿ ಉಪೇಂದ್ರ ನಾಯಕರಾಗಿದ್ದು, ಕಿಚ್ಚ ಸುದೀಪ್ ಹಾಗೂ ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವುದು ವಿಶೇಷ. ಶ್ರೇಯಾ ಶರಣ್ ನಾಯಕಿಯಾಗಿದ್ದಾರೆ.
ಹಿಂದಿ ಚಿತ್ರರಂಗದ ದಿಗ್ಗಜ ನಟರಾದ ಅಮಿತಾಭ್ ಬಚ್ಚನ್ ಸೇರಿ ಸೇರಿದಂತೆ ಬೇರೆ ಬೇರೆ ಭಾಷೆಯ ನಟ-ನಟಿಯರು ಟ್ರೇಲರ್ ಬಗ್ಗೆ ಅಪಾರ ಮೆಚ್ಚುಗೆ ಸೂಚಿಸಿ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ʼಖಲ್ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್ನಲ್ಲಿ ಬಿಟೌನ್ ಸ್ಟಾರ್ಸ್ ಜೊತೆ ಯಶ್, ಅಲ್ಲು?
Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್ ಆದ ಮುನ್ನಿ
Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್
Salman Khan: ನಟ ಸಲ್ಮಾನ್ ಖಾನ್ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ
ಪೊಲೀಸ್ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್ ಸ್ಟರ್ ಆದದ್ದೇಗೆ?
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ