ಕೈಗಾರಿಕೆಗಳಿಗೆ ಭೂಮಿ ನೀಡಲು ಶೀಘ್ರದಲ್ಲೇ ಹೊಸ ನೀತಿ: ಸಚಿವ ನಿರಾಣಿ

ಉದ್ಯಮಿಗಳಿಗೆ ವಿಳಂಬ ನೀತಿ ತಪ್ಪಿಸಲು ದಿಟ್ಟ ಕ್ರಮ, * ರಾಜ್ಯದಲ್ಲಿ ಹೆಚ್ಚಿನ ಬಂಡವಾಳ ಹೂಡಿಕೆ ನಿರೀಕ್ಷೆ

Team Udayavani, Oct 28, 2021, 7:10 PM IST

1-rrr

ಬೆಂಗಳೂರು: ಕೈಗಾರಿಗಳಿಗೆ ಉತ್ತೇಜನ ನೀಡಲು ಮಂಜೂರಾದ ಭೂಮಿಯ ಕ್ರಯಪತ್ರವನ್ನು ಕೈಗಾರಿಕೆಗಳು ಆರಂಭವಾದ 10ರಿಂದ 15 ದಿನಗಳ ಒಳಗೆ ಕೊಡಲು ರಾಜ್ಯ ಸರ್ಕಾರ ಶೀಘ್ರದಲ್ಲಿಯೇ ‘ಹೊಸ ನೀತಿ’ ರೂಪಿಸಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ‌ಸಚಿವ ಮುರುಗೇಶ್ ಆರ್ ನಿರಾಣಿ‌ ಅವರು ಗುರುವಾರ ಪ್ರಕಟಿಸಿದ್ದಾರೆ.

ಖಾಸಗಿ ಹೊಟೇಲ್ ನಲ್ಲಿ ‌ಇಂಡೋ-ಅಮೇರಿಕನ್ ಚೇಂಬರ್ ಆಫ್ ಕಾಮರ್ಸ್ ಆಯೋಜಿಸಿದ್ದ ‘ಕರ್ನಾಟಕದಲ್ಲಿ ಉತ್ಪಾದನೆ’ ಕುರಿತ ದುಂಡು ಮೇಜಿನ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಸಚಿವ ನಿರಾಣಿ, ”ಕೈಗಾರಿಕಾ ಯೋಜನೆಗಳು ವಿಳಂಬವಾಗುವುದನ್ನು ತಪ್ಪಿಸಲು ಉತ್ಪಾದನಾ ಕೈಗಾರಿಕೆಗಳು ತಮ್ಮ ಘಟಕಗಳನ್ನು ಸ್ಥಾಪಿಸಲು ಪ್ರಾರಂಭಿಸಿದ 10 ರಿಂದ 15 ದಿನಗಳಲ್ಲಿ ತಮಗೆ ಮಂಜೂರು ಮಾಡಿದ ಭೂಮಿಯ ಕ್ರಯ ಪತ್ರವನ್ನು ಪಡೆಯಲು ಅನುಕೂಲ ಮಾಡಿಕೊಡುವ ನೀತಿಯನ್ನು ಶೀಘ್ರದಲ್ಲೇ ಜಾರಿ ಮಾಡಲಿದ್ದೇವೆ” ಎಂದರು.

”ರಾಜ್ಯ ಸರ್ಕಾರದ ಈ ನಿರ್ಧಾರದಿಂದ ಕೈಗಾರಿಕಾ ಯೋಜನೆಗಳನ್ನು ಪ್ರಾರಂಭಿಸುವಲ್ಲಿ ವಿಳಂಬವನ್ನು ತಪ್ಪಿಸುವುದರ ಜೊತೆಗೆ ‌ಪ್ರಕ್ರಿಯೆಯನ್ನು ವೇಗಗೊಳಿಸಲು ಹೆಚ್ಚಿನ ಅನುಕೂಲವಾಗಲಿದೆ. ಇದರಿಂದಾಗಿ ಉದ್ಯಮಿಗಳು ದೊಡ್ಡ ಪ್ರಮಾಣದಲ್ಲಿ ಹೂಡಿಕೆಯಾಗಲಿದೆ” ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

”ಅಭಿವೃದ್ಧಿಪಡಿಸಿದ ಜಮೀನನ್ನು ‌ಮಾರುಕಟ್ಟೆಯ ಬೆಲೆ ಶೇ.15ರಿಂದ 20ಕ್ಕಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡದಂತೆ ಹೊಸ ನಿಯಮಗಳನ್ನು ರೂಪಿಸಲಾಗುವುದು” ಎಂದು ತಿಳಿಸಿದರು.

ಕರ್ನಾಟಕವನ್ನು ಜಾಗತಿಕ ಉತ್ಪಾದನಾ ಕೇಂದ್ರವನ್ನಾಗಿ ಮಾಡುವುದು ಸರ್ಕಾರದ ಗುರಿಯಾಗಿದೆ.ದೇಶದಲ್ಲೇ ‌”ರಾಜ್ಯವು ಅತ್ಯುತ್ತಮ ಕೈಗಾರಿಕಾ ಪರಿಸರ ವ್ಯವಸ್ಥೆಯನ್ನು ಹೊಂದಿದ್ದು, ಪ್ರಮುಖ ಉತ್ಪಾದನಾ ಕೈಗಾರಿಕೆಗಳಿಗೆ ನೆಲೆಯಾಗಿದೆ”ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಮುಂದಿನ ವರ್ಷ 2022 ರ ನವೆಂಬರ್ ತಿಂಗಳಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ರಾಜ್ಯದಲ್ಲಿ ಸುಮಾರು ‌₹ 10 ಲಕ್ಷ ಕೋಟಿ ಹೂಡಿಕೆಯ ಗುರಿ ಹೊಂದಿದ್ದೇವೆ ಎಂದು ಹೇಳಿದರು.

“ಕಳೆದ ಆರು ತಿಂಗಳಲ್ಲಿ ರಾಜ್ಯದಲ್ಲಿ ಪರಸ್ಪರ ಒಪ್ಪಂದ ಮತ್ತು ಹೂಡಿಕೆ ಪ್ರಸ್ತಾಪಗಳ ರೂಪದಲ್ಲಿ 28,600 ಕೋಟಿ ರೂಪಾಯಿ ಮೌಲ್ಯದ ಹೂಡಿಕೆಗಳನ್ನು ಗಳಿಸಿದೆ. ವ್ಯಾಪಾರ ವಹಿವಾಟಿಗಳನ್ನು ಸರಳೀಕರಣಗೊಳಿಸಲು‌ ನಾವು ಲಾಜಿಸ್ಟಿಕ್ಸ್ ಮತ್ತು ವೇರ್ ಸಿಂಗ್ ಕ್ಷೇತ್ರಗಳಿಗೆ ಉದ್ಯಮದ ಸ್ಥಾನಮಾನವನ್ನು ನೀಡಿದ್ದೇವೆ ಎಂದು ತಿಳಿಸಿದರು.

ಕರ್ನಾಟಕವು ಅನೇಕ ಜಾಗತಿಕ ಕಂಪನಿಗಳ ತಾಣವಾಗಿದೆ. ರಾಜ್ಯವನ್ನು ‌ ಜಾಗತಿಕ ಉತ್ಪಾದನಾ ಕೇಂದ್ರವನ್ನಾಗಿ ಮಾಡುವ ಸದುದ್ದೇಶದಿಂದ‌ ಇಂತಹ ಸಂವಾದ ಹಾಗೂ ಚರ್ಚೆಗೆ ವೇದಿಕೆ ಸೃಷ್ಟಿಸಿದ್ದಕ್ಕಾಗಿ ಇಂಡೋ-ಅಮೆರಿಕನ್ ಚೇಂಬರ್ ಆಫ್ ಕಾಮರ್ಸ್‌ ನ ಪದಾಧಿಕಾರಿಗಳಿಗೆ ಅಭಿನಂದನೆಯನ್ನು ಸಚಿವ ನಿರಾಣಿ ಅವರು ಸಲ್ಲಿಸಿದರು.

ಕಾರ್ಯಕ್ರಮದಲ್ಲಿಇಂಡೋ – ಅಮೇರಿಕನ್ ಚೇಂಬರ್ಸ್ ‌ಆಫ್ ಕಾಮರ್ಸ್ ನ ಅಧ್ಯಕ್ಷರಾದ ಶ ಜೋಸ್ ಜಾಕೋಬ್,ಐಎಸಿಸಿ ಶಾಖೆಯ ಮುಖ್ಯಸ್ಥರಾದ ಜಿತಿಕಾ ನಾರಂಗ್, ಕೈಗಾರಿಕಾ ಮತ್ತು ‌ವಾಣಿಜ್ಯ ಇಲಾಖೆಯ ಆಯುಕ್ತೆ,ಗುಂಜನ್ ಕೃಷ್ಣ,ಐಎಸಿಸಿ ಹಿರಿಯ ಉಪಾಧ್ಯಕ್ಷ ಚಂದ್ರಕನಾಥ್ ಬಿ ಎನ್,ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-r4w

ಹಸುವಿನ ಹೊಟ್ಟೆಯಲ್ಲಿತ್ತು 77 ಕೆಜಿ ಐಸ್ ಕ್ರೀಮ್ ಕಪ್ ಗಳು, ಚಮಚಗಳು

ತರಗತಿಯೊಳಗೆ ನುಗ್ಗಿದ ಚಿರತೆ, ವಿದ್ಯಾರ್ಥಿ ಮೇಲೆ ದಾಳಿ, ಪ್ರಾಣಾಪಾಯದಿಂದ ಪಾರು

ತರಗತಿಯೊಳಗೆ ನುಗ್ಗಿದ ಚಿರತೆ, ವಿದ್ಯಾರ್ಥಿ ಮೇಲೆ ದಾಳಿ, ಪ್ರಾಣಾಪಾಯದಿಂದ ಪಾರು

shivaram

ಹಿರಿಯ ಚಿತ್ರ ನಟ ಶಿವರಾಂ ಅರೋಗ್ಯ ಸ್ಥಿತಿ ಗಂಭೀರ ; ಐಸಿಯುನಲ್ಲಿ ಚಿಕಿತ್ಸೆ

accident

ಅಪಘಾತ: ಪುತ್ರ‌ನ ಮದುವೆಗೆ ಆಮಂತ್ರಿಸಲು ಹೋದ ದಂಪತಿ ದುರ್ಮರಣ

Online

ಟೆಕ್ಕಿಗಳ ಪ್ರಯತ್ನಕ್ಕೆ ಆನ್‌ಲೈನ್‌ ಸಪೋರ್ಟ್‌

1-fdssdf

ರೌಡಿ ಹಿನ್ನಲೆ, ತೆರಿಗೆ ಕಳ್ಳರೇ ಡಿಕೆಶಿ ಆಯ್ಕೆ : ಬಿಜೆಪಿಯಿಂದ ಟ್ವೀಟ್ ಆಸ್ತ್ರಗಳ ಪ್ರಯೋಗ

ಘೀಳಿಡಲು ರೆಡಿಯಾದ ಮದಗಜ; 900ಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಬಿಡುಗಡೆ

ಘೀಳಿಡಲು ರೆಡಿಯಾದ ಮದಗಜ; 900ಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಬಿಡುಗಡೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕನೇರಿಯಲ್ಲಿ ಗರ್ಭಸಂಸ್ಕಾರ ಕೇಂದ್ರ ಲೋಕಾರ್ಪಣೆ : ದೇಶದ ಎರಡನೇ ಗರ್ಭ ಸಂಸ್ಕಾರ ಕೇಂದ್ರ

ಕನೇರಿಯಲ್ಲಿ ಗರ್ಭಸಂಸ್ಕಾರ ಕೇಂದ್ರ ಲೋಕಾರ್ಪಣೆ : ದೇಶದ ಎರಡನೇ ಗರ್ಭ ಸಂಸ್ಕಾರ ಕೇಂದ್ರ

ನಿಸರ್ಗ ಚಿಕಿತ್ಸೆ ದುಬಾರಿ ಅಲ್ಲವೇ ಅಲ್ಲ.. : ನಿಸರ್ಗ ಚಿಕಿತ್ಸೆ ಪಾರ್ಲರ್‌ ವೆಚ್ಚಕ್ಕಿಂತ ಕಡಿಮೆ

ನಿಸರ್ಗ ಚಿಕಿತ್ಸೆ ದುಬಾರಿ ಅಲ್ಲವೇ ಅಲ್ಲ.. ನಿಸರ್ಗ ಚಿಕಿತ್ಸೆ ಪಾರ್ಲರ್‌ ವೆಚ್ಚಕ್ಕಿಂತ ಕಡಿಮೆ

ಉತ್ತರದ ಮದುವೆಗೆ ದಕ್ಷಿಣದ ಸವಿರುಚಿ : ಸಹೋದರರ ತಂಡದಿಂದ ನವ ಖಾದ್ಯೋದ್ಯಮ

ಉತ್ತರದ ಮದುವೆಗೆ ದಕ್ಷಿಣದ ಸವಿರುಚಿ : ಸಹೋದರರ ತಂಡದಿಂದ ನವ ಖಾದ್ಯೋದ್ಯಮ

1-fdssdf

ರೌಡಿ ಹಿನ್ನಲೆ, ತೆರಿಗೆ ಕಳ್ಳರೇ ಡಿಕೆಶಿ ಆಯ್ಕೆ : ಬಿಜೆಪಿಯಿಂದ ಟ್ವೀಟ್ ಆಸ್ತ್ರಗಳ ಪ್ರಯೋಗ

ದೇವೇಗೌಡ

ಡಿ.13ಕ್ಕೆ ಎಚ್‌ಡಿಡಿ ಆತ್ಮ ಚರಿತ್ರೆ ಬಿಡುಗಡೆ

MUST WATCH

udayavani youtube

ಈ ಪ್ರಮುಖ ಕಾರಣಗಳಿಂದ ಜೀವನಶೈಲಿ ರೋಗಗಳಿಗೆ ನಾವು ತುತ್ತಾಗುತ್ತೇವೆ

udayavani youtube

ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಅವರ ಕೊಲೆಗೆ ಸಂಚು ಮಾಡಿಲ್ಲ : ಗೋಪಾಲ ಕೃಷ್ಣ

udayavani youtube

ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ಹತ್ಯೆಗೆ ಸ್ಕೆಚ್!

udayavani youtube

ಜಡೇಜಾಗಾಗಿ ಮೊದಲ ಸ್ಥಾನವನ್ನೇ ಬಿಟ್ಟುಕೊಟ್ಟ ಮಾಹಿ

udayavani youtube

ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕಾಡಿನಲ್ಲಿ ಹೂತಿಟ್ಟ ರೀತಿಯಲ್ಲಿ ಪತ್ತೆ, ಕೊಲೆ ಶಂಕೆ

ಹೊಸ ಸೇರ್ಪಡೆ

1-r4w

ಹಸುವಿನ ಹೊಟ್ಟೆಯಲ್ಲಿತ್ತು 77 ಕೆಜಿ ಐಸ್ ಕ್ರೀಮ್ ಕಪ್ ಗಳು, ಚಮಚಗಳು

ತರಗತಿಯೊಳಗೆ ನುಗ್ಗಿದ ಚಿರತೆ, ವಿದ್ಯಾರ್ಥಿ ಮೇಲೆ ದಾಳಿ, ಪ್ರಾಣಾಪಾಯದಿಂದ ಪಾರು

ತರಗತಿಯೊಳಗೆ ನುಗ್ಗಿದ ಚಿರತೆ, ವಿದ್ಯಾರ್ಥಿ ಮೇಲೆ ದಾಳಿ, ಪ್ರಾಣಾಪಾಯದಿಂದ ಪಾರು

suicide lovers

ಮದುವೆಗೆ ಪೋಷಕರ ವಿರೋಧ: ಪ್ರೇಮಿಗಳಿಬ್ಬರೂ ಆತ್ಮಹತ್ಯೆಗೆ ಶರಣು

shivaram

ಹಿರಿಯ ಚಿತ್ರ ನಟ ಶಿವರಾಂ ಅರೋಗ್ಯ ಸ್ಥಿತಿ ಗಂಭೀರ ; ಐಸಿಯುನಲ್ಲಿ ಚಿಕಿತ್ಸೆ

ಕನೇರಿಯಲ್ಲಿ ಗರ್ಭಸಂಸ್ಕಾರ ಕೇಂದ್ರ ಲೋಕಾರ್ಪಣೆ : ದೇಶದ ಎರಡನೇ ಗರ್ಭ ಸಂಸ್ಕಾರ ಕೇಂದ್ರ

ಕನೇರಿಯಲ್ಲಿ ಗರ್ಭಸಂಸ್ಕಾರ ಕೇಂದ್ರ ಲೋಕಾರ್ಪಣೆ : ದೇಶದ ಎರಡನೇ ಗರ್ಭ ಸಂಸ್ಕಾರ ಕೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.