
ಅರಣ್ಯ ಪ್ರದೇಶದಲ್ಲಿ ಅನುಮಾನಾಸ್ಪದವಾಗಿ ನವ ವಿವಾಹಿತೆ ಸಾವು
Team Udayavani, Jan 29, 2022, 11:44 AM IST

ಚಿಕ್ಕಮಗಳೂರು: ಅನುಮಾನಸ್ಪಾದವಾಗಿ ನವ ವಿವಾಹಿತೆ ಸಾವನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಜಡಗನಹಳ್ಳಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ನಡೆದಿದೆ.
ಸುಮಾ, ಅನುಮಾನಸ್ಪದವಾಗಿ ಸಾವನ್ನಪ್ಪಿದ ಮಹಿಳೆ. ಸಾವನ್ನಪ್ಪುವ ಮುನ್ನ ಇಡೀ ರಾತ್ರಿ ಅರಣ್ಯ ಪ್ರದೇಶದಲ್ಲಿ ಸುಮಾ ಜತೆ ಆಕೆಯ ಪತಿ ಅಭಿಷೇಕ್ ಇದ್ದ ಎನ್ನಲಾಗಿದೆ.
ಕಳೆದ ಒಂದು ವರ್ಷದ ಹಿಂದೆ ಸುಮಾ, ಅಭಿಷೇಕ್ ಪ್ರೀತಿಸಿ ಮದುವೆಯಾಗಿದ್ದರು. ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನೀಡಿದ್ದು, ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಮುಂದುವರೆಸಿದ್ದು, ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
