ಸಂವಿಧಾನದ ಬಗ್ಗೆ ಸಿದ್ದರಾಮಯ್ಯರಿಂದ ಪಾಠ ಕಲಿಯಬೇಕಾದ ಅಗತ್ಯವಿಲ್ಲ: ಸಿಎಂ ಬೊಮ್ಮಾಯಿ
Team Udayavani, Nov 28, 2022, 1:04 PM IST
ಬೆಂಗಳೂರು: ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಸಂವಿಧಾನವನ್ನು ತಿರುಚಿದ ಅಪಕೀರ್ತಿ ಕಾಂಗ್ರೆಸ್ ಗೆ ಸಲ್ಲುತ್ತದೆ. ಹೀಗಾಗಿ ಬಿಜೆಪಿ ಬಗ್ಗೆ ಮಾತನಾಡುವ ನೈತಿಕತೆ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂವಿಧಾನದ ಬಗ್ಗೆ ಕಾಂಗ್ರೆಸ್ ಪಕ್ಷದಿಂದಾಗಲಿ ಅಥವಾ ಸಿದ್ದರಾಮಯ್ಯ ಅವರಿಂದ ಪಾಠ ಕಲಿಯಬೇಕಾದ ಅಗತ್ಯವಿಲ್ಲ. ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದಾಗ ಸಂವಿಧಾನ ತಿರುಚಿದ್ದು ಯಾವ ಪಕ್ಷ ಎಂದು ಪ್ರಶ್ನೆ ಮಾಡಿದ್ದರು.
ಸಂವಿಧಾನಕ್ಕೆ ಬಿಜೆಪಿ ಯಾವಾಗಲು ಅತ್ಯಂತ ಹೆಚ್ಚು ಗೌರವ ನೀಡುವ ರಾಜಕೀಯ ಪಕ್ಷವಾಗಿದೆ. ಮೊದಲು ಕಾಂಗ್ರೆಸ್ ನವರು ಸಂವಿಧಾನಕ್ಕೆ ಗೌರವ ನೀಡುವುದನ್ನು ಕಲಿಯಲಿ ಎಂದು ವ್ಯಂಗ್ಯವಾಡಿದರು.
ಇದನ್ನೂ ಓದಿ:ಶೃದ್ಧಾ ರೀತಿಯ ಮತ್ತೊಂದು ಕೇಸ್: ಹತ್ಯೆಗೈದು ಫ್ರಿಡ್ಜ್ ನಲ್ಲಿಟ್ಟಿದ್ದ ತಾಯಿ-ಮಗನ ಬಂಧನ
ನವದೆಹಲಿಗೆ ತೆರಳುತ್ತಿದ್ದು, ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ನಡ್ಡಾ ಅವರನ್ನು ಭೇಟಿಯಾಗಬೇಕೆಂದು ತೀರ್ಮಾನಿಸಿದ್ದೇನೆ. ಅವರು ಗುಜರಾತ್ ವಿಧಾನಸಭೆ ಚುನಾವಣೆ ಪ್ರಚಾರದಲ್ಲಿರುವ ಕಾರಣ ನನಗೆ ಇನ್ನು ಭೇಟಿಗೆ ಸಮಯ ಅವಕಾಶ ಸಿಕ್ಕಿಲ್ಲ ಎಂದು ಹೇಳಿದರು.
ದೆಹಲಿಗೆ ಹೋದಾಗ ಸುಪ್ರೀಂ ಕೋರ್ಟ್‍ನ ಹಿರಿಯ ವಕೀಲರಾದ ಮುಕುಲ್ ರೋಹ್ಟಗಿ ಅವರನ್ನು ಭೇಟಿ ಮಾಡಿ ಕಾನೂನು ಹೋರಾಟಗಳ ಬಗ್ಗೆ ಚರ್ಚಿಸಲಾಗುವುದು. ಡಿಸೆಂಬರ್ ನಲ್ಲಿ ಕರ್ನಾಟಕ ಮತ್ತು ಮಹಾರಾಷ್ಟ್ರದ ಅರ್ಜಿ ವಿಚಾರಣೆ ಸುಪ್ರೀಂ ಕೋರ್ಟ್‍ನಲ್ಲಿ ನಡೆಯಲಿದೆ. ನಮ್ಮ ರಾಜ್ಯದ ನಿಲುವು ಏನಾಗಬೇಕು ಎಂಬುದರ ಕುರಿತು ಮಾಹಿತಿ ನೀಡಲಿದ್ದೇನೆ. ಗಡಿ ರಕ್ಷಣೆಗೆ ನಮ್ಮ ಸರ್ಕಾರ ಬದ್ದವಾಗಿದೆ ಎಂದು ಸಿಎಂ ಪುನರುಚ್ಚರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಆರ್ ಟಿಐ ಕಾರ್ಯಕರ್ತ ಸಾಯಿದತ್ತ ನಿಧನ
ಹಾಲಿ ಶಾಸಕರಿಗೆ ಟಿಕೆಟ್ ಪಕ್ಕಾ: ಆಕಾಂಕ್ಷಿಗಳಲ್ಲಿ ತಳಮಳ
ಹಿರಿಯ-ಕಿರಿಯ ಶಾಲೆಗಳ ವಿಲೀನ ಹತ್ತಿರದಲ್ಲಿರುವ ಶಾಲೆಗಳನ್ನು ಒಂದೆಡೆ ಸೇರಿಸಿ
ದಾವಣಗೆರೆಯಲ್ಲಿ ಕೇಸರಿ ಮಹಾಸಂಗಮ: ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ನಿರ್ಧಾರ
ರಾಜ್ಯಕ್ಕೆ ಬಂಪರ್: ಬಜೆಟ್ನಲ್ಲಿ ನೈಋತ್ಯ ರೈಲ್ವೇಗೆ 9,200 ಕೋ.ರೂ. ಅನುದಾನ
MUST WATCH
ಮಿಸ್ಟರ್ ಬೀನ್ ಈಗ ಎಲ್ಲಿದ್ದಾರೆ? ಹೇಗಿದ್ದಾರೆ |ಯಾರು ಈ ಮಿಸ್ಟರ್ ಬೀನ್ ?
ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?
ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ
ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು
ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ
ಹೊಸ ಸೇರ್ಪಡೆ
ಮೋದಿ ಉತ್ತರಾಧಿಕಾರಿಯಾಗುತ್ತಾರಾ ಯು.ಪಿ ಸಿಎಂ?: ಯೋಗಿ ಆದಿತ್ಯನಾಥ್ ಹೇಳುವುದೇನು?
ದೇಶದ ಮೊದಲ ಪ್ರಕರಣ: ಮಗುವಿನ ನಿರೀಕ್ಷೆಯಲ್ಲಿ ತೃತೀಯ ಲಿಂಗಿ ದಂಪತಿ
ಅಫ್ರಿದಿ ಮಗಳನ್ನು ವರಿಸಿದ ಶಾಹೀನ್ ಅಫ್ರಿದಿ: ಅದ್ಧೂರಿ ವಿವಾಹಕ್ಕೆ ಸಾಕ್ಷಿಯಾದ ಸಹ ಆಟಗಾರರು
ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಆರ್ ಟಿಐ ಕಾರ್ಯಕರ್ತ ಸಾಯಿದತ್ತ ನಿಧನ
ಹಾಕಿ ಕೋಚ್ ಹುದ್ದೆಗೆ ವಿದೇಶಿಯರ ರೇಸ್