ಸಪ್ತಗಿರಿ ಗ್ರಾಮೋದಯ ಅಕ್ಕಿ ಗಿರಣಿ ಮೇಲೆ ಅಧಿಕಾರಿಗಳ ದಾಳಿ 4ಲಕ್ಷ ರೂ. ಮೌಲ್ಯದ ಬೇಳೆ ಕಾಳು ವಶ

Team Udayavani, Jun 5, 2021, 7:11 PM IST

ಸಪ್ತಗಿರಿ ಗ್ರಾಮೋದಯ ಅಕ್ಕಿ ಗಿರಣಿ ಮೇಲೆ ಅಧಿಕಾರಿಗಳ ದಾಳಿ 4ಲಕ್ಷ ರೂ. ಮೌಲ್ಯದ ಬೇಳೆ ಕಾಳು ವಶ

ಚಿಕ್ಕಬಳ್ಳಾಪುರ : ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ಸರ್ಕಾರ ಬಡವರಿಗೆ ನೀಡುವ ಅಕ್ಕಿಯನ್ನು ಪಾಲಿಶ್ ಮಾಡಿ ಅಕ್ರಮವಾಗಿ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಸಾರ್ವಜನಿಕರ ದೂರು ಕೊನೆಗೂ ನಿಜ ಸಾಬೀತು ಆಗಿದೆ ಸಾರ್ವಜನಿಕರಿಗೆ ವಿತರಿಸುವ ಅಕ್ಕಿಯನ್ನು ಪಾಲಿಶ್ ಮತ್ತು ನುಚ್ಚು ಆಗಿ ಪರಿವರ್ತಿಸಿ ಅವುಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಆಹಾರ ಇಲಾಖೆಯ ಅಧಿಕಾರಿಗಳು ನಗರದ ಕಂದವಾರ ಕೈಗಾರಿಕಾ ಅಭಿವೃದ್ಧಿ ಪ್ರದೇಶದಲ್ಲಿರುವ ಗಿರಣಿ ಮೇಲೆ ದಾಳಿ ನಡೆಸಿ ಸುಮಾರು 4 ಲಕ್ಷ ರೂಗಳ ಮೌಲ್ಯದ ಅಕ್ಕಿ, ನುಚ್ಚು, ರಾಗಿ ಹಾಗೂ ವಿವಿಧ ಬ್ರಾಂಡ್‍ಗಳ ಚೀಲಗಳನ್ನು ವಶಪಡಿಸಿಕೊಳ್ಳಲಾಗಿದೆ.

ಚಿಕ್ಕಬಳ್ಳಾಪುರ ನಗರದ ಕಂದವಾರ ಕೈಗಾರಿಕಾ ಅಭಿವೃದ್ಧಿ ಪ್ರದೇಶದಲ್ಲಿರುವ ವೇಣುಗೋಪಾಲ್ ಅವರ ಮಾಲೀಕತ್ವದ ಶ್ರೀ ಸಪ್ತಗಿರಿ ಗ್ರಾಮೋದಯ ಅಕ್ಕಿ ಗಿರಣಿಯ ಮೇಲೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕಿ ಪಿ ಸವಿತಾ ಅವರ ಮಾರ್ಗದರ್ಶನದಲ್ಲಿ ಚಿಕ್ಕಬಳ್ಳಾಪುರ ತಾಲೂಕು ಆಹಾರ ಶಿರಸ್ತೇದಾರ್ ಬಿಜಿ ಗೌತಮ್, ಆಹಾರ ನಿರೀಕ್ಷಕ ರಘು ಅವರ ನೇತೃತ್ವದ ತಂಡ ದಾಳಿ ನಡೆಸಿ 7440 ಕೆಜಿ ಅಕ್ಕಿ ,28150 ಕೆಜಿ ನುಚ್ಚು,322 ಕೆಜಿ ರಾಗಿ ಹಾಗೂ ಪಾಲೀಶ್ ಮಾಡಿದ ಅಕ್ಕಿಯನ್ನು ತುಂಬಿಸಲು ತಂದಿದ್ದ ವಿವಿಧ ಬ್ರಾಂಡ್‍ಗಳ ಚೀಲಗಳನ್ನು ಆಹಾರ ಇಲಾಖೆಯ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ:ಲಾಕ್ ಡೌನ್ ಅವಧಿಯಲ್ಲಿ ಪಿಲಿಕುಳ ಮೃಗಾಲಯದಲ್ಲಿ ಪ್ರಾಣಿಗಳ ಸಂತಾನಾಭಿವೃದ್ಧಿ

ಭತ್ತದಿಂದ ಅಕ್ಕಿಯನ್ನು ಉತ್ಪಾದಿಸಿ ಮಾರಾಟ ಮಾಡುವ ಗಿರಣಿಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಸರ್ಕಾರದಿಂದ ಬಡವರಿಗೆ ಬಿಡುಗಡೆ ಮಾಡಿರುವ ಅಕ್ಕಿಯನ್ನು ವಿವಿಧ ಮೂಲಗಳಿಂದ ಅಕ್ರಮವಾಗಿ ಖರೀದಿ ಮಾಡಿ ಗಿರಣಿಯಲ್ಲಿ ಪಾಲೀಶ್ ಮಾಡಿ ವಿವಿಧ ಬ್ರಾಂಡ್‍ನಲ್ಲಿ ಅಕ್ಕಿ ಚೀಲಗಳನ್ನು ತಯಾರಿಸಿ ಮಾರಾಟ ಮಾಡಲು ತಯಾರಿ ನಡೆಸುತ್ತಿದ್ದ ಅಂಶ ಆಹಾರ ಇಲಾಖೆ ಅಧಿಕಾರಿಗಳಿಂದ ಬಹಿರಂಗಗೊಂಡಿದೆ ಈ ಸಂಬಂಧ ಆಹಾರ ಇಲಾಖೆ ಶಿರಸ್ತೇದಾರ್ ಅವರು ಸಪ್ತಗಿರಿ ಗ್ರಾಮೋದಯ ಅಕ್ಕಿ ಗಿರಣಿ ಮಾಲೀಕರ ಗೋಪಾಲ್ ಅವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ 1955 ಸೆಕ್ಷನ್ 3 ಮತ್ತು 6(ಎ) ಐಪಿಸಿ ಸೆಕ್ಷನ್ 420 ಅಡಿಯಲ್ಲಿ ಪ್ರಕರಣ ದಾಖಲಿಸಿ ಮತ್ತು ಕಾಳಸಂತೆಕೋರರ ವಿರುದ್ಧ ಕಾನೂನು ರೀತ್ಯ ಕ್ರಮ ಜರುಗಿಸಬೇಕೆಂದು ನಂದಿಗಿರಿಧಾಮ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಈ ಸಂಬಂಧ ದೂರು ದಾಖಲಿಸಿಕೊಂಡಿರುವ ನಂದಿಗಿರಿಧಾಮ ಪೊಲೀಸ್ ಠಾಣೆಯ ಪಿಎಸ್‍ಐ ಸುನೀಲ್ ಆರೋಪಿಯನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ ಒಟ್ಟಾರೇ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬಡವರಿಗೆ ಸಮರ್ಪಕವಾಗಿ ಪಡಿತರವನ್ನು ಹಂಚಿಕೆ ಮಾಡಲು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕಿ ಪಿ ಸವಿತಾ ಅವರು ಕ್ರಮ ಕೈಗೊಂಡಿದ್ದಾರೆ ಜಿಲ್ಲೆಯಲ್ಲಿ ಸಾರ್ವಜನಿಕರಿಂದ ದೂರು ಬಂದ ತಕ್ಷಣ ಕ್ರಮ ಜರುಗಿಸಿ ಕಾನೂನು ರೀತಿಯ ಕ್ರಮ ಕೈಗೊಂಡು ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.