ಕರ್ನಾಟಕಕ್ಕೇ ಕಾಲಿಟ್ಟ ಒಮಿಕ್ರಾನ್ : ದೇಶದಲ್ಲಿ ಮೊದಲ 2 ಪ್ರಕರಣಗಳು!
Team Udayavani, Dec 2, 2021, 4:34 PM IST
ಬೆಂಗಳೂರು : ಕೋವಿಡ್ ರೂಪಾಂತರಿ ವೈರಸ್ ಕರ್ನಾಟಕಕ್ಕೇ ಕಾಲಿಟ್ಟಿದ್ದು, ದೇಶದಲ್ಲಿ ಮೊದಲ 2 ಪ್ರಕರಣಗಳು ಕರ್ನಾಟಕದಲ್ಲಿ ಪತ್ತೆಯಾಗಿ ಆತಂಕ ಮೂಡಿಸಿದೆ.
ದಕ್ಷಿಣ ಆಫ್ರಿಕಾದಿಂದ ಬಂದ ಇಬ್ಬರಲ್ಲಿ ವೈರಸ್ ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಆಘಾತಕಾರಿ ಮಾಹಿತಿ ನೀಡಿದೆ.
ಆಫ್ರಿಕಾದಿಂದ ಬಂದಿದ್ದ 66ವರ್ಷದ ವ್ಯಕ್ತಿ, ಮತ್ತು 46 ವರ್ಷದ ವ್ಯಕ್ತಿಯಲ್ಲಿ ಸೋಂಕು ದೃಢ ಪಟ್ಟಿದೆ ಎಂದು ತಿಳಿದು ಬಂದಿದೆ.
ಪತ್ತೆಯಾದ ಕೇಸ್ ಗಳ ಪೈಕಿ ಓರ್ವ ಸೋಂಕಿತ ಬೆಂಗಳೂರಿನಲ್ಲಿ ಇರುವುದಾಗಿ ತಿಳಿದು ಬಂದಿದೆ.