30 ಸಾವಿರ ಕೋಟಿ ರೂ.ಲಂಚದ ಬಹಿರಂಗ ಆಮಿಷ ; ತನಿಖೆ ನಡೆಸುವಂತೆ ಕಾಂಗ್ರೆಸ್ ದೂರು
ಕಾನೂನಿನ ಪ್ರಕಾರ ಎಲ್ಲವೂ ನಡೆಯಲಿದೆ ಎಂದ ಸಿಎಂ ಬೊಮ್ಮಾಯಿ
Team Udayavani, Jan 25, 2023, 4:55 PM IST
ಬೆಂಗಳೂರು : ಮತದಾರನಿಗೆ ಲಂಚದ ಬಹಿರಂಗ ಆಮಿಷ ನೀಡಿದ ಕುರಿತು ರಾಜ್ಯ ಕಾಂಗ್ರೆಸ್ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ತನಿಖೆ ನಡೆಸುವಂತೆ ದೂರು ನೀಡಿದೆ.
”ಪ್ರತಿ ಮತದಾರನಿಗೆ 6000 ರೂಪಾಯಿ ಲಂಚದ ಬಹಿರಂಗ ಆಮಿಷದ ಮೂಲಕ ರಾಜ್ಯದ 5 ಕೋಟಿ ಮತದಾರರನ್ನು 30 ಸಾವಿರ ಕೋಟಿ ರೂ. ಲಂಚದ ಮೂಲಕ ಖರೀದಿ ಮಾಡಲು ಸಂಚು ನಡೆಸಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ತನಿಖೆ ನಡೆಸಬೇಕು ಎಂದು ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸರಿಗೆ ಮಂಗಳವಾರ ಪಕ್ಷದ ಪ್ರಮುಖ ನಾಯಕರು ದೂರು ನೀಡಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರೇ ಖುದ್ದು ಇತರ ನಾಯಕರೊಂದಿಗೆ ಠಾಣೆಗೆ ಆಗಮಿಸಿ ದೂರು ಸಲ್ಲಿಸಿದ್ದಾರೆ.
ಅತ್ಯಂತ ಕೀಳು ಮಟ್ಟದ್ದು
ದೂರು ದಾಖಲಿಸಿರುವ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಬೊಮ್ಮಾಯಿ, ಇದು ಅತ್ಯಂತ ಕೀಳು ಮಟ್ಟದ್ದು. ಹೇಳಿಕೆ ಕೊಟ್ಟವರು ಅದಕ್ಕೆ ಸ್ಪಷ್ಟೀಕರಣ ಕೊಡುತ್ತಾರೆ. ಮೊನ್ನೆ ದಿಗ್ವಿಜಯ ಸಿಂಗ್ ಅವರು ಒಂದು ಹೇಳಿಕೆ ಕೊಟ್ಟಿದ್ದಾರೆ. ನಿನ್ನೆ ರಾಹುಲ್ ಗಾಂಧಿ ಅವರು ಹೇಳಿಕೆ ನೀಡಿದ್ದು, ಯಾರಾದರೂ ಹೇಳಿಕೆ ನೀಡಿದರೆ. ಅದಕ್ಕೆ ಸರ್ಕಾರ ಜವಾಬ್ದಾರಿಯಲ್ಲ. ವೈಯಕ್ತಿಕವಾಗಿ ಅವರೇ ಜವಾಬ್ದಾರರು ಎಂದು ಸುಪ್ರೀಂಕೋರ್ಟ್ ತೀರ್ಪು ಕೂಡ ಬಂದಿದೆ. ಇದೆಲ್ಲ ಗೊತ್ತಿದ್ದು, ಕೇವಲ ರಾಜಕೀಯ ಕಾರಣಕ್ಕೆ, ಸೋಲು ಗ್ಯಾರಂಟಿಯಾಗಿರವ ಕಾರಣ ಸುಳ್ಳು ಹಾಗೂ ರಾಜಕೀಯ ಪ್ರೇರಿತ ಆರೋಪಗಳನ್ನು ಮಾಡಿ ಜನರ ದಾರಿ ತಪ್ಪಿಸುವ ಸಣ್ಣ ಪ್ರಯತ್ನ ಮಾಡುತ್ತಿದೆ. ಆದರೆ ಜನಕ್ಕೆ ಇದೆಲ್ಲಾ ಗೊತ್ತಿದೆ. ಮುಂದೆ ಇನ್ನೂ ಪ್ರಯತ್ನ ಮಾಡುತ್ತಾರೆ. ದೇಶದಲ್ಲಿ ಕಾನೂನಿದೆ. ಆ ಕಾನೂನಿನ ಪ್ರಕಾರ ಎಲ್ಲವೂ ನಡೆಯಲಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ