
ವಂದೇ ಮಾತರಂ ಗೀತೆಗೆ ವಿರೋಧದಿಂದ ದೇಶದ ಏಕತೆಗೆ ಧಕ್ಕೆ: ಬಿಜೆಪಿ
Team Udayavani, Nov 27, 2022, 9:15 PM IST

ಬೆಂಗಳೂರು: ವಂದೇ ಮಾತರಂ ಗೀತೆಗೆ ವಿರೋಧ ವ್ಯಕ್ತಪಡಿಸುವ ಮೂಲಕ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ದೇಶದ ಏಕತೆಗಿಂತ ಅಧಿಕಾರಕ್ಕಾಗಿ ಸಮಾಜವನ್ನು ಒಡೆಯುವುದೇ ತಮಗೆ ಮುಖ್ಯ ಎನ್ನುವುದನ್ನು ತೋರಿಸಿದ್ದಾರೆ ಎಂದು ರಾಜ್ಯ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
ವಂದೇಮಾತರಂ ಗೀತೆ ವಿರುದ್ಧ ಸಿದ್ದರಾಮಯ್ಯ ಅವರ ಹೇಳಿಕೆಗೆ ಟ್ವೀಟ್ ಮೂಲಕ ತಿರುಗೇಟು ನೀಡಿರುವ ಬಿಜೆಪಿ, ದೇಶದಲ್ಲಿ ಎಲ್ಲ ಧರ್ಮೀಯರು ವಂದೇ ಮಾತರಂ ಗೀತೆಯನ್ನು ಮುಕ್ತ ಮನಸ್ಸಿನಿಂದ ಒಪ್ಪಿಕೊಂಡಿದ್ದಾರೆ. ಆದರೆ ಸಿದ್ದರಾಮಯ್ಯ ಅವರು ಗೀತೆಗೆ ವಿರೋಧ ವ್ಯಕ್ತಪಡಿಸಿ ತಮ್ಮ ಜಿಹಾದಿ ಮನಸ್ಥಿತಿಯನ್ನು ತೋರಿಸಿದ್ದಾರೆ. ಬ್ರಿಟೀಷರು ವಂದೇ ಮಾತರಂ ಹಾಡನ್ನು ವಿರೋಧಿಸಿದ್ದು. ಸಿದ್ದರಾಮಯ್ಯ ಈಗ ಅವರ ಸಾಲಿಗೆ ಸೇರಿದ್ದಾರೆ ಎಂದಿದೆ.
ಓಟ್ ಬ್ಯಾಂಕ್ ರಾಜಕಾರಣಕ್ಕಾಗಿ ವಂದೇ ಮಾತರಂ ಗೀತೆಗೆ ಅವಮಾನ ಮಾಡುವ ಮೂಲಕ ಭಾರತೀಯರ ಏಕತೆಯ ಭಾವನೆಯನ್ನು ವಿಭಜಿಸುವ ಪ್ರಯತ್ನ ಮಾಡಿದ್ದು, ಭಾರತೀಯರ ಕ್ಷಮೆ ಕೋರಬೇಕು ಎಂದು ಆಗ್ರಹಿಸಲಾಗಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮತದಾರರೇ ಭ್ರಷ್ಟರಾಗಿದ್ದಾರೆ ನಾನು ಚುನಾವಣೆಗೆ ನಿಲ್ಲಲಾರೆ: ಹಳ್ಳಿ ಹಕ್ಕಿ ಹೊಸ ರಾಗ

ಮಲೆಯೂರಿನಲ್ಲಿ ವಿಜೃಂಭಣೆಯ ಸೋಮೇಶ್ವರ ರಥೋತ್ಸವ

ಪ್ರೀತಿಸುವ ನಾಟಕವಾಡಿ ಅಪ್ರಾಪ್ತೆಯ ಅಪಹರಿಸಿ ಅತ್ಯಾಚಾರ: 7 ಮಂದಿಗೆ 10 ವರ್ಷ ಶಿಕ್ಷೆ

ಡಿಕೆಶಿ, ರಮೇಶ್, ಲಕ್ಷ್ಮೀ ವೈಯಕ್ತಿಕ ನಿಂದನೆ ಬಿಡಲಿ: ಬಾಲಚಂದ್ರ ಜಾರಕಿಹೊಳಿ ಮನವಿ

ಮೇಲಿನಕುರುವಳ್ಳಿ ಗ್ರಾಮಪಂಚಾಯಿತಿಯಲ್ಲಿ ರಾತ್ರೋ ರಾತ್ರಿ ಹೈಡ್ರಾಮಾ: ಪಿಡಿಓ ಎತ್ತಂಗಡಿ, ಆದೇಶ ವಾಪಾಸ್
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?
