ಅಂಬಾನಿ ನಿವಾಸದ ಬಳಿ ಸ್ಫೋಟಕ ಪತ್ತೆ ಪ್ರಕರಣ : ಕಾರಿನ ಮಾಲೀಕ ಸಾವು
ಮುಖೇಶ್ ಅಂಬಾನಿ ಮನೆ ಮುಂದೆ ಸ್ಪೋಟಕ ತುಂಬಿದ ಕಾರು ನಿಲ್ಲಿಸಿದ್ದ ಪ್ರಕರಣ
Team Udayavani, Mar 5, 2021, 7:07 PM IST
ಮುಂಬೈ : ಉದ್ಯಮಿ ಮುಖೇಶ್ ಅಂಬಾನಿ ಮುಂಬೈ ನಿವಾಸದ ಬಳಿ ಸ್ಫೋಟಕ ತುಂಬಿದ್ದ ಕಾರು ಪತ್ತೆಯಾದ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದ್ದು, ಆ ಕಾರಿನ ಮಾಲೀಕನ ಶವ ಮುಂಬೈ ಸಮೀಪದಲ್ಲಿ ಪತ್ತೆಯಾಗಿದೆ ಎಂದು ಥಾಣೆ ಪೊಲೀಸರು ತಿಳಿಸಿದ್ದಾರೆ.
ಕಳೆದ ಗುರುವಾರ ಮುಂಬೈನಲ್ಲಿರುವ ಮುಖೇಶ್ ಅಂಬಾನಿ ನಿವಾಸ ಆಂಟಿಲಿಯಾ ಬಳಿ 21 ಜಿಲೆಟಿನ್ ಕಡ್ಡಿಗಳನ್ನು ತುಂಬಿದ್ದ ಸ್ಕಾರ್ಪಿಯೋ ಕಾರು ಪತ್ತೆಯಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು 10 ತಂಡಗಳನ್ನು ರಚನೆ ಮಾಡಿ ಮುಂಬೈ ಕ್ರೈಂ ಬ್ರ್ಯಾಂಚ್ ಹಾಗೂ ಎಟಿಎಸ್ ಜಂಟಿಯಾಗಿ ತನಿಖೆ ನಡೆಸುತ್ತಿವೆ. ಇದೇ ವೇಳೆ ಸ್ಕಾರ್ಪಿಯೋ ಕಾರಿನ ಮಾಲೀಕನ ಶವ ಪತ್ತೆಯಾಗಿದ್ದು, ಪೊಲೀಸರ ನಿದ್ದೆಗೆಡಿಸಿದೆ.
ಇನ್ನು ಜೈಶ್ ಉಲ್ ಹಿಂದ್ ಉಗ್ರ ಸಂಘಟನೆಯ ಮೇಲೆ ಶಂಕೆ ವ್ಯಕ್ತಪಡಿಸಲಾಗಿತ್ತು ಎನ್ನಲಾಗಿದ್ದು, ನಂತರ ಆ ಪ್ರಕರಣಕ್ಕೂ ಜೈಶ್ ಉಲ್ ಹಿಂದ್ ಸಂಘಟನೆಗೂ ಸಂಬಂಧ ಇಲ್ಲ ಎನ್ನಲಾಗುತ್ತಿದೆ.
ಸದ್ಯ ಸ್ಕಾರ್ಪಿಯೋ ಮಾಲೀಕನನ್ನ ಮನ್ಸುಖ್ ಹಿರೆನ್ ಎಂದು ಗುರುತಿಸಲಾಗಿದ್ದು, ಈ ಸಾವು ಹೇಗಾಯಿತು ಎಂಬುದು ಅನುಮಾನಕ್ಕೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ