ಅಂತಿಮ ಗಡುವು:ಅಪಾರ ಬೆಂಬಲಿಗರೊಂದಿಗೆ ಇಸ್ಲಾಮಾಬಾದ್ ಗೆ ಲಗ್ಗೆ ಇಟ್ಟ ಇಮ್ರಾನ್, ಸೇನೆ ನಿಯೋಜನೆ
ಪೊಲೀಸರು ಮತ್ತು ಪಿಟಿಐ ಪಕ್ಷದ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿರುವುದಾಗಿ ವರದಿ ಹೇಳಿದೆ.
Team Udayavani, May 26, 2022, 11:50 AM IST
ಇಸ್ಲಾಮಾಬಾದ್: ಆರು ದಿನದೊಳಗೆ ಚುನಾವಣೆ ಘೋಷಿಸಿ, ಇಲ್ಲದಿದ್ದಲ್ಲಿ ಇಡೀ ದೇಶದ ಜನರೊಂದಿಗೆ ಇಸ್ಲಾಮಾಬಾದ್ ಗೆ ಲಗ್ಗೆ ಇಡುವುದಾಗಿ ಪಾಕಿಸ್ತಾನದ ಮಾಜಿ ಪ್ರಧಾನಮಂತ್ರಿ ಇಮ್ರಾನ್ ಖಾನ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಗುರುವಾರ (ಮೇ 26) ಮಿಲಿಟರಿಯನ್ನು ನಿಯೋಜಿಸಲಾಗಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ರಾಜ್ಯಸಭಾ ಅಭ್ಯರ್ಥಿ ಆಯ್ಕೆ ಕಸರತ್ತು ಶುರು; ನಾಲ್ಕನೇ ಅಭ್ಯರ್ಥಿ ಆಯ್ಕೆಗೆ ಜೆಡಿಎಸ್ ಬಲ ಅಗತ್ಯ
ಇಮ್ರಾನ್ ಖಾನ್ ತನ್ನ ಅಪಾರ ಬೆಂಬಲಿಗರು, ಪಕ್ಷದ ಕಾರ್ಯಕರ್ತರ ಜತೆ ಇಸ್ಲಾಮಾಬಾದ್ ಗೆ ಮುತ್ತಿಗೆ ಹಾಕಲು ಬೃಹತ್ ಜಾಥಾದೊಂದಿಗೆ ಆಗಮಿಸುತ್ತಿರುವುದು ಪಾಕ್ ಪ್ರಧಾನಿ ಶೆಹ್ಬಾಜ್ ಶರೀಫ್ ನೇತೃತ್ವದ ಸರ್ಕಾರಕ್ಕೆ ಕಗ್ಗಂಟಾಗಿ ಪರಿಣಮಿಸಿದೆ. ಈ ಹಿನ್ನೆಲೆಯಲ್ಲಿ ಗುರುವಾರ ಬೆಳಗ್ಗೆ ಇಸ್ಲಾಮಾಬಾದ್ ಗೆ ಆಗಮಿಸಿದ್ದು, ರೆಡ್ ಝೋನ್ ರಕ್ಷಣೆಗಾಗಿ ಪಾಕಿಸ್ತಾನ ಸೇನೆ ಬೀಡು ಬಿಟ್ಟಿರುವುದಾಗಿ ವರದಿ ವಿವರಿಸಿದೆ.
ರಾಜಧಾನಿ ಇಸ್ಲಾಮಾಬಾದ್ ನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪಾಕಿಸ್ತಾನ ಸೇನೆಯನ್ನು ನಿಯೋಜಿಸಲಾಗಿದೆ ಎಂದು ಪಾಕಿಸ್ತಾನದ ಆಂತರಿಕ ಸಚಿವ ರಾಣಾ ಸನಾವುಲ್ಲಾ ಸರ್ಕಾರ ಹೊರಡಿಸಿರುವ ಆದೇಶವನ್ನು ಟ್ವೀಟ್ ಮಾಡಿರುವುದಾಗಿ ವರದಿ ತಿಳಿಸಿದೆ.
ಕೆಂಪು ವಲಯ(ರೆಡ್ ಝೋನ್)ದಲ್ಲಿರುವ ಪ್ರಮುಖ ಸರ್ಕಾರಿ ಕಟ್ಟಡಗಳ ರಕ್ಷಣೆಗಾಗಿ ಪಾಕಿಸ್ತಾನ ಸರ್ಕಾರ ಸೇನೆಯನ್ನು ರವಾನಿಸಿರುವುದಾಗಿ ಸನಾವುಲ್ಲಾ ತಿಳಿಸಿದ್ದಾರೆ. ಇಮ್ರಾನ್ ಖಾನ್ ಬೆಂಬಲಿಗರು ರಾಜಧಾನಿ ಒಳಕ್ಕೆ ಪ್ರವೇಶಿಸದಂತೆ ತಡೆಯಲು ಪ್ರಯತ್ನಿಸಿದ್ದು, ಈ ಸಂದರ್ಭದಲ್ಲಿ ಪೊಲೀಸರು ಮತ್ತು ಪಿಟಿಐ ಪಕ್ಷದ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿರುವುದಾಗಿ ವರದಿ ಹೇಳಿದೆ.
ಶೆಹ್ಬಾಜ್ ಶರೀಫ್ ನೇತೃತ್ವದ ಸರ್ಕಾರ ನೂತನ ಚುನಾವಣಾ ದಿನಾಂಕ ಘೋಷಿಸುವವರೆಗೂ ಇಸ್ಲಾಮಾಬಾದ್ ನ ಡಿ-ಚೌಕ್ ದಿಂದ ಬೆಂಬಲಿಗರು ಕದಲಬಾರದು ಎಂದು ಇಮ್ರಾನ್ ಖಾನ್ ಬುಧವಾರ ಎಚ್ಚರಿಕೆ ನೀಡಿರುವುದಾಗಿ ವರದಿ ವಿವರಿಸಿದೆ.
ನಿಜವಾದ ಸ್ವಾತಂತ್ರ್ಯಕ್ಕಾಗಿ ಪಾಕಿಸ್ತಾನದ ಪ್ರತಿಯೊಬ್ಬ ಮಹಿಳೆಯರು, ಮಕ್ಕಳು ಮನೆಯಿಂದ ಹೊರಬಂದು ಹೋರಾಟಕ್ಕೆ ಬೆಂಬಲ ನೀಡಬೇಕೆಂದು ಇಮ್ರಾನ್ ಖಾನ್ ಮನವಿ ಮಾಡಿಕೊಂಡಿರುವುದಾಗಿ ಡಾನ್ ಪತ್ರಿಕೆ ವರದಿ ಮಾಡಿದೆ.
ಪಾಕಿಸ್ತಾನದ ಸುಪ್ರೀಂಕೋರ್ಟ್ ಕೂಡಾ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಬಂಧಿಸದಂತೆ ಪಾಕ್ ಸರ್ಕಾರಕ್ಕೆ ನಿರ್ಬಂಧ ವಿಧಿಸಿದೆ. ಅಲ್ಲದೇ ಇಸ್ಲಾಮಾಬಾದ್ ನ ಎಚ್-9 ಮೈದಾನದಲ್ಲಿ ಪಿಟಿಐ ಪಕ್ಷ ಶಾಂತಿಯುತ ಪ್ರತಿಭಟನೆ ನಡೆಸಲು ಅನುಮತಿ ನೀಡಿದೆ ಎಂದು ವರದಿ ತಿಳಿಸಿದೆ.
ಇಮ್ರಾನ್ ಖಾನ್ ನ ಸಾವಿರಾರು ಬೆಂಬಲಿಗರು, ವಿಪಕ್ಷಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು, ಪಾಕಿಸ್ತಾನದಲ್ಲಿ ಗಲಭೆ, ಹಿಂಸಾಚಾರ ನಡೆಯುವ ಸಾಧ್ಯತೆ ಇದ್ದು, ಮತ್ತೆ ದೇಶದಲ್ಲಿ ರಾಜಕೀಯ ಬಿಕ್ಕಟ್ಟು ಸೃಷ್ಟಿಯಾಗುವ ಸನ್ನಿವೇಶ ಎದುರಾಗಿರುವುದಾಗಿ ವರದಿ ವಿಶ್ಲೇಷಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದೇಶಕ್ಕೆ ಕಪ್ಪು ಚುಕ್ಕಿ ತಂದಿಟ್ಟ ಎಮರ್ಜೆನ್ಸಿ: ಜರ್ಮನಿಯ ಮ್ಯೂನಿಚ್ನಲ್ಲಿ ಪ್ರಧಾನಿ ಅಭಿಮತ
ಈ ಹೋಟೆಲ್ ನಲ್ಲಿ ಆಂಟಿ ಎಂದರೆ ಆರ್ಡರ್ ಕ್ಯಾನ್ಸಲ್! 18ವರ್ಷ ಮೇಲ್ಪಟ್ಟವರಿಗೆ ಮಾತ್ರ ಈ ನಿಯಮ
ಇಮ್ರಾನ್ ಖಾನ್ ನಿವಾಸದಲ್ಲಿ ಬೇಹು ಸಾಧನ ಅಳವಡಿಕೆಗೆ ಯತ್ನ: ಭದ್ರತಾ ಸಿಬ್ಬಂದಿ ಬಂಧನ
ಆರ್ಥಿಕ ದುಸ್ಥಿತಿ: ಶ್ರೀಲಂಕಾದಲ್ಲಿ ಪೆಟ್ರೋಲ್, ಡೀಸೆಲ್ ಮತ್ತಷ್ಟು ತುಟ್ಟಿ
ದಕ್ಷಿಣ ಆಫ್ರಿಕಾದ ನೈಟ್ಕ್ಲಬ್ನಲ್ಲಿ 17 ಮಂದಿ ಶವವಾಗಿ ಪತ್ತೆ! ಕಾರಣ ನಿಗೂಢ
MUST WATCH
ರಸ್ತೆ ಮಧ್ಯೆಯೇ ಪ್ರವಾಸಿಗರ ಸೆಲ್ಪಿ… ಚಾರ್ಮಾಡಿ ಘಾಟ್ ನಲ್ಲಿ ವಾಹನ ಸವಾರರ ಪರದಾಟ
ವರ್ಷದ ಬಳಿಕ ತಾಯಿ ಮಡಿಲು ಸೇರಿದ ಮಗ: ವಿಳಾಸ ಪತ್ತೆಗೆ ನೆರವಾಯಿತು ಫೇಸ್ ಬುಕ್
ಉಡುಪಿ : ಆಟೋರಿಕ್ಷಾ ಬಳಿ ತೆರಳಿ ಪ್ರಕರಣ ಇತ್ಯರ್ಥಪಡಿಸಿದ ನ್ಯಾಯಾಧೀಶರು
ಸುಳ್ಯ, ಕೊಡಗಿನ ಕೆಲವೆಡೆ ಭಾರಿ ಶಬ್ದದೊಂದಿಗೆ ಭೂಕಂಪನ, ಗೋಡೆ ಬಿರುಕು
ಸಕಲೇಶಪುರ : ರಸ್ತೆ ಅಪಘಾತಕ್ಕೆ ದೈಹಿಕ ಶಿಕ್ಷಕ ಸ್ಥಳದಲ್ಲೇ ಸಾವು: ವಿದ್ಯಾರ್ಥಿಗಳ ಕಣ್ಣೀರು…
ಹೊಸ ಸೇರ್ಪಡೆ
ಶ್ರೀಗಂಧದಲ್ಲಿ ಡಾ. ಪುನೀತ್ ರಾಜ್ಕುಮಾರ್ ಪುತ್ಥಳಿ
ಅವರ ದೇಹ ಮಾತ್ರ ವಾಪಸ್ ಬರಲಿದೆ…: ಸೇನಾ ಬಂಡಾಯ ಶಾಸಕರಿಗೆ ಸಂಜಯ್ ರಾವತ್ ಎಚ್ಚರಿಕೆ
ಒಂದೇ ದಿನ 45% ಏರಿಕೆ ಕಂಡ ಕೋವಿಡ್ ಪ್ರಕರಣಗಳ ಸಂಖ್ಯೆ; 17,073 ಹೊಸ ಪ್ರಕರಣಗಳು
ದನ ಮೇಯಿಸುತ್ತಿದ್ದ ಯುವತಿಯನ್ನು ಹೊತ್ತೊಯ್ದು ಬಾಯಿಗೆ ಬಟ್ಟೆ ತುರುಕಿ ಅತ್ಯಾಚಾರ: ಆರೋಪಿ ಬಂಧನ
ಅಂಜನಾದ್ರಿಗೆ ಮೈಸೂರು ಒಡೆಯರ್ ಕುಟುಂಬ ಭೇಟಿ; ದೇವರ ದರ್ಶನ