ಗುರುಗಳ ಪದ್ಮವಿಭೂಷಣ ಸ್ವೀಕರಿಸಿದ ವಿಶ್ವ ಪ್ರಸನ್ನ ತೀರ್ಥರು
Team Udayavani, Nov 8, 2021, 6:05 PM IST
ಹೊಸದಿಲ್ಲಿ :ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅವರಿಗೆ ನೀಡಲಾಗಿರುವ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿಯನ್ನು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಶ್ರೀವಿಶ್ವ ಪ್ರಸನ್ನ ತೀರ್ಥ ಶ್ರೀಪಾದರಿಗೆ ಪ್ರದಾನ ಮಾಡಿದರು.
2019 ರ ಡಿಸೆಂಬರ್ 29 ರಂದು ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಹರಿಪಾದ ಸೇರಿದ್ದರು.
ಅಯೋಧ್ಯೆ ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ವಿಶ್ವಸ್ಥರೂ ಆಗಿರುವ ಶ್ರೀ ಪೇಜಾವರ ಮಠಾಧೀಶ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಸೋಮವಾರ ಸಂಜೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು.