ಹೆಚ್ಚುವರಿ ವಿಮಾನಗಳ ಕಾರ್ಯಾಚರಣೆಗೆ ಅನುಮತಿ
Team Udayavani, Jun 15, 2020, 9:48 PM IST
ಮುಂಬೈ: ಮಹಾರಾಷ್ಟ್ರದಲ್ಲಿ ದಿನವೊಂದಕ್ಕೆ 100 ಸ್ಥಳೀಯ ವಿಮಾನಗಳ ಕಾರ್ಯಾಚರಣೆ ನಡೆಸಲು ನಾಗರಿಕ ವಿಮಾನಯಾನ ಸಚಿವಾಲಯ ಸೋಮವಾರ ಅನುಮತಿ ನೀಡಿದೆ.
ದೇಶದಲ್ಲಿ ಮೇ ಕೊನೆಯ ವಾರದಲ್ಲಿ ವಿಮಾನಯಾನ ಸೇವೆ ಆರಂಭವಾದಾಗಿನಿಂದ ಮಹಾರಾಷ್ಟ್ರದಲ್ಲಿ 25 ಅರೈವಲ್ ಹಾಗೂ 25 ಡಿಪಾರ್ಚರ್ ಸೇರಿ ದಿನವೊಂದಕ್ಕೆ 50 ವಿಮಾನಗಳು ಮಾತ್ರ ಕಾರ್ಯಾಚರಣೆ ನಡೆಸುತ್ತಿದ್ದವು. ಈಗ ಆ ಸಂಖ್ಯೆಯನ್ನು ದ್ವಿಗುಣಗೊಳಿಸಲಾಗಿದೆ.
ವಿಮಾನ ಸೇವೆ ಪುನರಾರಂಭಗೊಂಡಾಗಿನಿಂದ ದೇಶದಲ್ಲಿ ಏರ್ ಟ್ರಾಫಿಕ್ ದಿನೇ ದಿನೆ ಹೆಚ್ಚುತ್ತಿದೆ ಎಂದು ನಾಗರಿಕ ವಿಮಾನಯಾನ ಸಚಿವ ಹರ್ಷ್ದೀಪ್ ಸಿಂಗ್ ಪುರಿ ಹೇಳಿದ್ದಾರೆ.
ಸ್ಥಳೀಯ ವಿಮಾನಯಾನ ಸೇವೆ ಪುನರಾರಂಭವಾಗಿ ಜೂ.14ಕ್ಕೆ 21 ದಿನಗಳು ಕಳೆದಿದ್ದು, ಈ ಅವಧಿಯಲ್ಲಿ ದೇಶದ ವಿವಿಧ ವಿಮಾನ ನಿಲ್ದಾಣಗಳಿಂದ 714 ವಿಮಾನಗಳು ಕಾರ್ಯಾಚರಣೆ ನಡೆಸಿದ್ದು, ಏರ್ಪೋರ್ಟ್ಗಳು 72,583 ಡಿಪಾರ್ಚರ್ ಪ್ರಯಾಣಿಕರು ಮತ್ತು 72,439 ಅರೈವಲ್ ಪ್ರಯಾಣಿಕರನ್ನು ನಿರ್ವಹಿಸಿವೆ. ಹಾಗೇ ಎಲ್ಲ ವಿಮಾನ ನಿಲ್ದಾಣಗಳಿಗೆ ಒಟ್ಟು 1,45,022 ಮಂದಿ ಬಂದು ಹೋಗಿದ್ದಾರೆ ಎಂದು ಸಚಿವ ಪುರಿ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
MUST WATCH
ಹೊಸ ಸೇರ್ಪಡೆ
Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ