ಮೇಕೆದಾಟು ಪಾದಯಾತ್ರೆ ಡಿ.ಕೆ.ಶಿವಕುಮಾರ್ ಗೆ ವ್ಯಕ್ತಿತ್ವ ವಿಕಸನ ಶಿಬಿರ: ಬಿಜೆಪಿ ಟೀಕೆ
''ಪಾದಯಾತ್ರೆ ಮೂಲಕ ನಾಯಕರಾಗಿ" ಎಂಬ ಪುಸ್ತಕ ಬರೆಯಬಹು !
Team Udayavani, Feb 28, 2022, 11:35 AM IST
ಬೆಂಗಳೂರು : ಮೇಕೆದಾಟು ಎಂಬುದು ಡಿ.ಕೆ.ಶಿವಕುಮಾರ್ ಅವರಿಗೆ ವ್ಯಕ್ತಿತ್ವ ವಿಕಸನ ಶಿಬಿರವಾಗಿದೆ ಎಂದು ಬಿಜೆಪಿ ವ್ಯಂಗ್ಯವಾಡಿದೆ.ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಬಿಜೆಪಿ,ಮೇಕೆದಾಟು ಪಾದಯಾತ್ರೆ ಎಂಬುದು ಈಗ ಡಿ.ಕೆ. ಶಿವಕುಮಾರ್ ಅವರಿಗೆ ವ್ಯಕ್ತಿತ್ವ ವಿಕಸನ ಶಿಬಿರವಾಗಿ ಪರಿಣಮಿಸಿದೆ.ಮೂವತ್ತು ದಿನದಲ್ಲಿ ಇಂಗ್ಲೀಷ್ ಕಲಿಯುವುದು ಹೇಗೆ? ಎಂಬಂತಹ ಪುಸ್ತಕಗಳ ರೀತಿಯಲ್ಲಿ “ಪಾದಯಾತ್ರೆ ಮೂಲಕ ನಾಯಕರಾಗಿ” ಎಂಬ ಪುಸ್ತಕ ಬರೆಯಬಹುದೇನೋ ಎಂದು ವ್ಯಂಗ್ಯವಾಡಿದೆ.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ವಿರುದ್ಧವೂ ಕಿಡಿಕಾರಿರುವ ಬಿಜೆಪಿ ಕಾವೇರಿ ನೀರಿನ ಪ್ರತಿ ಹನಿಯಲ್ಲೂ ಈ ಭಾಗದ ಜನರ ಹಕ್ಕಿದೆ. ಇದು ಚಲಾವಣೆಯಾಗಬೇಕು. ಆದರೆ ಬೆಂಗಳೂರಿನಲ್ಲಿ ಆಡಳಿತ ನಡೆಸುತ್ತಿರುವ ಸರ್ಕಾರ ಇದಕ್ಕೆ ಅಡ್ಡಿಯಾಗಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ಹೇಳಿದ್ದಾರೆ.ಒಂದು ರಾಜ್ಯದ ಉಸ್ತುವಾರಿಯಾದವರಿಗೆ ಕನಿಷ್ಠ ಮಾಹಿತಿ ಇಲ್ಲದಿರುವುದು ಹಾಸ್ಯಾಸ್ಪದ ಎಂದು ವ್ಯಂಗ್ಯವಾಡಿದೆ.
ಸುರ್ಜೇವಾಲಾ ಅವರೇ, ಕಾಂಗ್ರೆಸ್ ನಡೆಸುತ್ತಿರುವ ಮೇಕೆದಾಟು ಪಾದಯಾತ್ರೆ ಸ್ಥಿತಿ “ಆಕಾಶ ನೋಡುವುದಕ್ಕೆ ನೂಕು ನುಗ್ಗಲು” ಎಂಬಂತಾಗಿದೆ ಎಂದು ಟೀಕಿಸಿದೆ.ನೀವು ಯಾರ ವಿರುದ್ಧ ಹೋರಾಟ ನಡೆಸಬೇಕೆಂಬುದನ್ನು ಮೊದಲು ನಿರ್ಧರಿಸಿ. ಆ ಮೇಲೆ ಪಾದಯಾತ್ರೆ ನಾಟಕ ಮುಂದುವರಿಸಿ ಎಂದು ವ್ಯಂಗ್ಯವಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ
H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್
Prajwal R case: ಪ್ರಜ್ವಲ್ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಜಾರಿಗೆ SIT ಮನವಿ: ಏನಿದು?
Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ
Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ
MUST WATCH
ಹೊಸ ಸೇರ್ಪಡೆ
BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್
Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ
Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ
Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು
Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ