ಜೂ.11ಕ್ಕೆ ಪೈಲಟ್‌ ಹೊಸಪಕ್ಷ?: Rajasthan ಭಿನ್ನಮತಕ್ಕೆ ಕ್ಷಣಕ್ಕೊಂದು ತಿರುವು

Team Udayavani, Jun 7, 2023, 8:00 AM IST

sachin pilot

ಜೈಪುರ: ರಾಜಸ್ಥಾನ ವಿಧಾನಸಭೆ ಚುನಾವಣೆಯಲ್ಲಿ ಮತ್ತೂಮ್ಮೆ ಕಾಂಗ್ರೆಸ್‌ ವಿಜಯಪತಾಕೆ ಹಾರಿಸಲು ಹೈಕ  ಮಾಂಡ್‌ ಶತಪಥ ಹಾಕುತ್ತಿರುವ ನಡುವೆಯೇ, ಇತ್ತ ರಾಜ್ಯ ಕೈನಾಯಕರ ನಡುವಿನ ಭಿನ್ನಾಭಿಪ್ರಾಯ ತಾರಕಕ್ಕೇರಿದೆ. ಇದರ ಪ್ರತಿಫ‌ಲವಾಗಿ ಕಾಂಗ್ರೆಸ್‌ ನಾಯಕ ಸಚಿನ್‌ ಪೈಲಟ್‌ ಜೂ.11ರಂದು ಹೊಸ ಪಕ್ಷವನ್ನೇ ಘೋಷಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ ಇದನ್ನು ಪೈಲಟ್‌ ಆಪ್ತರು ಸುಳ್ಳು ಎಂದಿದ್ದಾರೆ. ಮಾತ್ರವಲ್ಲ ಪೈಲಟ್‌ ಜತೆಗೆ ಕಾಂಗ್ರೆಸ್‌ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ದೀರ್ಘ‌ಕಾಲ ದೂರವಾಣಿಯಲ್ಲಿ ಮಾತನಾಡಿದ್ದಾರೆ. ಆದರೆ ಇದುವರೆಗೂ ಯಾವುದೇ ನಿರ್ಣಯವಾಗಿಲ್ಲ.

ಇತ್ತೀಚೆಗಷ್ಟೇ ರಾಜ್ಯದಲ್ಲಿ ಪ್ರಗತಿಶೀಲ ಕಾಂಗ್ರೆಸ್‌ ಹಾಗೂ ರಾಜ್‌ ಜನ ಸಂಘರ್ಷ ಎನ್ನುವ 2 ಹೊಸ ಪಕ್ಷಗಳನ್ನು ನೋಂದಾಯಿಸಲಾಗಿದೆ. ಈ ಪೈಕಿ ಒಂದು ಪಕ್ಷವನ್ನು ಪೈಲಟ್‌ ಮುನ್ನಡೆಸಲಿದ್ದಾರೆ ಎನ್ನುವ ಊಹಾಪೋಹಗಳೂ ಇವೆ. ಜೂ.11ರಂದು ಪೈಲಟ್‌ ಅವರ ತಂದೆಯ ಪುಣ್ಯತಿಥಿ ಇದೆ. ಆ ಕಾರ್ಯಕ್ರಮದ ಬಳಿಕ ದೌಸಾದಲ್ಲಿ ಪೈಲಟ್‌ ತಮ್ಮ ಹೊಸ ಪಕ್ಷವನ್ನು ಘೋಷಿಸಲಿದ್ದಾರೆ ಎನ್ನಲಾಗಿದೆ.

ಸಿಎಂ ಅಶೋಕ್‌ ಗೆಹ್ಲೋಟ್‌ ಸರಕಾರ ಪೈಲಟ್‌ ಅವರನ್ನು ನಡೆಸಿಕೊಂಡಿರುವ ರೀತಿ ಬಗ್ಗೆ ಅನೇಕ ಬಾರಿ ಆಕ್ಷೇಪಗಳು ವ್ಯಕ್ತವಾಗಿದ್ದಲ್ಲದೇ, ಉಭಯ ನಾಯಕರ ನಡುವಿನ ಭಿನ್ನಾಭಿಪ್ರಾಯ ಸರ್ಕಾರದಲ್ಲಿ ಒಡಕು ಮೂಡಿಸಿ, ಪೈಲಟ್‌ ಬಂಡಾಯ ಏಳುವಂತೆಯೂ ಮಾಡಿತ್ತು. ಆ ಬಳಿಕವೂ ಕಾಂಗ್ರೆಸ್‌ ನಡೆಸಿದ ಪ್ರಯತ್ನಗಳು ಸದ್ಯಕ್ಕೆ ಪೈಲಟ್‌ ಪಕ್ಷದಲ್ಲೇ ಉಳಿಯುವಂತೆ ಮಾಡಿತ್ತು. ಈ ಭಿನ್ನಾಭಿಪ್ರಾಯ ಮುಂದಿನ ಚುನಾವಣೆಗೆ ಅಡ್ಡಿಯಾಗದಿರಲೆಂದು ಎಐಸಿಸಿ ಅಧ್ಯಕ್ಷ ಮಲ್ಲಿ ಕಾರ್ಜುನ ಖರ್ಗೆ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಗೆಹಲೋತ್‌ ಹಾಗೂ ಪೈಲಟ್‌ ನಡುವೆ ಇತ್ತೀಚೆಗೆ ಗೌಪ್ಯ ಮಾತುಕತೆಯನ್ನೂ ನಡೆಸಿದ್ದಾರೆ ಎನ್ನಲಾಗಿದೆ. ಇದರ ನಡುವೆ ಈ ಹಿಂದಿನ ವಸುಂಧರಾ ರಾಜೆ ಸರ್ಕಾರದಲ್ಲಾದ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸು ವಂತೆ ಆಗ್ರಹಿಸಿದ ಪೈಲಟ್‌ರನ್ನು ಸರಕಾರನಿರ್ಲಕ್ಷ್ಯಸಿದೆ. ಈ ಎಲ್ಲದರ ಪರಿಣಾಮ ಹೊಸ ಪಕ್ಷ ಸ್ಥಾಪನೆಗೆ ಪೈಲಟ್‌ ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ಒಂದು ವೇಳೆ ಹಾಗೇನಾದರೂ ಆದಲ್ಲಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಮತ ವಿಭಜನೆಯಾಗಲಿದೆ ಎನ್ನುವ ಮಾತು ಕೇಳಿಬಂದಿದೆ.

ಟಾಪ್ ನ್ಯೂಸ್

Thirthahalli ಮೀನು ಹಿಡಿಯಲು ಹೋದ ಯುವಕ ತುಂಗಾ ನದಿಗೆ ಬಿದ್ದು ಸಾವು !

Thirthahalli ಮೀನು ಹಿಡಿಯಲು ಹೋದ ಯುವಕ ತುಂಗಾ ನದಿಗೆ ಬಿದ್ದು ಸಾವು !

1-sdsad

Manipur ; ಇಡೀ ರಾಜ್ಯವನ್ನು ‘ಪ್ರಕ್ಷುಬ್ಧ ಪ್ರದೇಶ’ ಎಂದು ಘೋಷಿಸಿದ ಸರಕಾರ

Tourist Place: ಪ್ರವಾಸೋದ್ಯಮ ಇಲಾಖೆಯ ಪ್ರೋತ್ಸಾಹವಿಲ್ಲದೆ ಸ್ವರಗುತ್ತಿರುವ ಪ್ರವಾಸಿ ತಾಣಗಳು

Tourist Place: ಪ್ರವಾಸೋದ್ಯಮ ಇಲಾಖೆಯ ಪ್ರೋತ್ಸಾಹವಿಲ್ಲದೆ ಸ್ವರಗುತ್ತಿರುವ ಪ್ರವಾಸಿ ತಾಣಗಳು

ಜಲಪ್ರಳಯದ ಮನಕಲಕುವ ಕಥಾಹಂದರದ “2018” ನಮ್ಮ ಬದುಕಿನ ಚಿತ್ರ!

ಜಲಪ್ರಳಯದ ಮನಕಲಕುವ ಕಥಾಹಂದರದ “2018” ನಮ್ಮ ಬದುಕಿನ ಚಿತ್ರ!

tdy-13

Damadan Purva: ಈ ಗ್ರಾಮದ ಯುವತಿಯರನ್ನು ಮದುವೆಯಾದರೆ ಸಿಗುತ್ತೆ ಮನೆ, ಜಮೀನು, ಆಸ್ತಿ.!

Mysore ದಸರಾ ಗಜಪಡೆಯ ತೂಕ ಪರೀಕ್ಷೆ… ತೂಕ ಹೆಚ್ಚಿಸಿಕೊಂಡ ಅಭಿಮನ್ಯು

Mysore ದಸರಾ ಗಜಪಡೆಯ ತೂಕ ಪರೀಕ್ಷೆ… ತೂಕ ಹೆಚ್ಚಿಸಿಕೊಂಡ ಅಭಿಮನ್ಯು, ಭೀಮ

World Tourism Day: ಭೂಲೋಕದ ಸ್ವರ್ಗ…ಪಾಂಡವರು ಸ್ಥಾಪಿಸಿದ ಬೆಟ್ಟದ ಭೈರವೇಶ್ವರ ದೇವಾಲಯ

World Tourism Day: ಭೂಲೋಕದ ಸ್ವರ್ಗ…ಪಾಂಡವರು ಸ್ಥಾಪಿಸಿದ ಬೆಟ್ಟದ ಭೈರವೇಶ್ವರ ದೇವಾಲಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sdsad

Manipur ; ಇಡೀ ರಾಜ್ಯವನ್ನು ‘ಪ್ರಕ್ಷುಬ್ಧ ಪ್ರದೇಶ’ ಎಂದು ಘೋಷಿಸಿದ ಸರಕಾರ

tdy-13

Damadan Purva: ಈ ಗ್ರಾಮದ ಯುವತಿಯರನ್ನು ಮದುವೆಯಾದರೆ ಸಿಗುತ್ತೆ ಮನೆ, ಜಮೀನು, ಆಸ್ತಿ.!

Delhi: ದೇವಸ್ಥಾನದಲ್ಲಿ ಪ್ರಸಾದ ಸೇವಿಸಿದ್ದ ವಿಕಲಚೇತನ ಮುಸ್ಲಿಂ ವ್ಯಕ್ತಿಗೆ ಥಳಿತ; ಮೃತ್ಯು

Delhi: ದೇವಸ್ಥಾನದಲ್ಲಿ ಪ್ರಸಾದ ಸೇವಿಸಿದ್ದ ವಿಕಲಚೇತನ ಮುಸ್ಲಿಂ ವ್ಯಕ್ತಿಗೆ ಥಳಿತ; ಮೃತ್ಯು

ISKCON: ಗೋರಕ್ಷಣೆ ಹೆಸರಲ್ಲಿ ಇಸ್ಕಾನ್ ಗೋವುಗಳನ್ನು ಕಟುಕರಿಗೆ ಮಾರುತ್ತಿದೆ… ಮನೇಕಾ ಗಾಂಧಿ

ISKCON: ಗೋರಕ್ಷಣೆ ಹೆಸರಲ್ಲಿ ಇಸ್ಕಾನ್ ಗೋವುಗಳನ್ನು ಕಟುಕರಿಗೆ ಮಾರುತ್ತಿದೆ… ಮನೇಕಾ ಗಾಂಧಿ

NIA Raids: ಭಯೋತ್ಪಾದಕ ಚಟುವಟಿಕೆ… 6 ರಾಜ್ಯಗಳ 51 ಸ್ಥಳಗಳಲ್ಲಿ ಎನ್‌ಐಎ ದಾಳಿ

NIA Raids: ಭಯೋತ್ಪಾದಕ ಚಟುವಟಿಕೆ… 6 ರಾಜ್ಯಗಳ 51 ಸ್ಥಳಗಳಲ್ಲಿ ಎನ್‌ಐಎ ದಾಳಿ

MUST WATCH

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

ಹೊಸ ಸೇರ್ಪಡೆ

Thirthahalli ಮೀನು ಹಿಡಿಯಲು ಹೋದ ಯುವಕ ತುಂಗಾ ನದಿಗೆ ಬಿದ್ದು ಸಾವು !

Thirthahalli ಮೀನು ಹಿಡಿಯಲು ಹೋದ ಯುವಕ ತುಂಗಾ ನದಿಗೆ ಬಿದ್ದು ಸಾವು !

1-sdsad

Manipur ; ಇಡೀ ರಾಜ್ಯವನ್ನು ‘ಪ್ರಕ್ಷುಬ್ಧ ಪ್ರದೇಶ’ ಎಂದು ಘೋಷಿಸಿದ ಸರಕಾರ

tdy-17

Sandalwood: ‘ಟಿಆರ್‌ಪಿ ರಾಮ’ನಿಗಾಗಿ ಮತ್ತೇ ಬಂದ್ರು ಮಹಾಲಕ್ಷ್ಮೀ

World Tourism Day: ಚಾರಣದ ಹುಚ್ಚು ಆರೋಗ್ಯಕ್ಕೆ ಒಳ್ಳೆಯದೇ…ಆದರೆ ಮೈಮರೆಯಬೇಡಿ!

World Tourism Day: ಚಾರಣದ ಹುಚ್ಚು ಆರೋಗ್ಯಕ್ಕೆ ಒಳ್ಳೆಯದೇ…ಆದರೆ ಮೈಮರೆಯಬೇಡಿ!

tdy-16

ಪೊಲೀಸ್‌ ವಿಜಯ: ‘ಮರೀಚಿʼ ಟೀಸರ್‌ ರಿಲೀಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.