
ಪಿಲ್ಯ: ಅಡಿಕೆ ತೋಟದಲ್ಲಿ ಅಕ್ರಮ ಮದ್ಯ ದಾಸ್ತಾನು; ಅಬಕಾರಿ ಇಲಾಖೆಯಿಂದ ದಾಳಿ, ಸೊತ್ತುಗಳು ವಶ
Team Udayavani, Apr 2, 2023, 5:46 AM IST

ಬೆಳ್ತಂಗಡಿ: ಪಿಲ್ಯ ಗ್ರಾಮದ ನಿನ್ನಿಕಲ್ಲು ಎಂಬಲ್ಲಿ ವಿಶ್ವನಾಥ್ ಎಂಬಾತ ತನ್ನ ಅಡಿಕೆ ತೋಟದಲ್ಲಿ ಅಕ್ರಮವಾಗಿ ಮಾರಾಟದ ಉದ್ದೇಶಕ್ಕಾಗಿ ದಾಸ್ತಾನು ಇರಿಸಲಾಗಿದ್ದ ಮದ್ಯವನ್ನು ಅಬಕಾರಿ ಇಲಾಖೆ ದಾಳಿ ನಡೆಸಿ 8.280 ಲೀ ಮದ್ಯವನ್ನು ವಶಕ್ಕೆ ಪಡೆದಿದ್ದಾರೆ.
ಅಬಕಾರಿ ಉಪ ಆಯುಕ್ತಕರು, ದ.ಕ.ಜಿಲ್ಲೆ ಮಂಗಳೂರು ಹಾಗೂ ಅಬಕಾರಿ ಉಪ ಅಧೀಕ್ಷಕರು, ಬಂಟ್ವಾಳ ಉಪ ವಿಭಾಗ ನಿರ್ದೇಶನದಂತೆ, ಸಾರ್ವತ್ರಿಕ ವಿಧಾನಸಭಾ ಚುನಾವಣೆ-2023ರ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ಯಾವುದೇ ಅಬಕಾರಿ ಅಕ್ರಮ ಚಟುವಟಿಕೆಗಳು ನಡೆಯದಂತೆ ಗಸ್ತು ನಡೆಸುತ್ತಿರುವ ವೇಳೆ ಈ ಪ್ರಕರಣ ಪತ್ತೆಯಾಗಿದೆ.
ಸ್ಥಳದಿಂದ ಮದ್ಯವನ್ನು ವಶಕ್ಕೆ ಪಡೆಯಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಮೌಲ್ಯ ಸುಮಾರು 3,240 ರೂ. ಎಂದು ಅಂದಾಜಿಸಲಾಗಿದೆ. ಕಾರ್ಯಾಚರಣೆಯಲ್ಲಿ ಅಬಕಾರಿ ನಿರೀಕ್ಷಕ ನವೀನ್, ಉಪ ನಿರೀಕ್ಷಕ ಸಯ್ಯದ್ ಶಬೀರ್ ಹಾಗೂ ಕಾನ್ಸ್‌ಟೇಬಲ್ ಭೋಜ ಕೆ., ವಿನೋಯ್ ಸಿ.ಜಿ. ಮತ್ತು ವಾಹನ ಚಾಲಕ ನವೀನ್ ಪಿ. ಭಾಗವಹಿಸಿದ್ದರು. ಪ್ರಕರಣವನ್ನು ನವೀನ್ ಕುಮಾರ್ ನಿರೀಕ್ಷಕರು, ದಾಖಲಿಸಿ ಮುಂದಿನ ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

Kadaba: ಕಾಡಾನೆ ದಾಳಿ; ಕೆಎಸ್ಸಾರ್ಟಿಸಿ ಬಸ್ ಗೆ ಹಾನಿ

Mohan Bhagwat; ಪ್ರತಿಯೊಬ್ಬರೂ ಭಾರತದ ಏಕತೆ-ಸಮಗ್ರತೆಯನ್ನು ಕಾಪಾಡಿಕೊಳ್ಳಲು ಶ್ರಮಿಸಬೇಕು

ಯಾವ ಯಾವ ರಾಜ್ಯಗಳಲ್ಲಿ ಸೌಲಭ್ಯ- ಕೊಡುಗೆಗಳ ಮಹಾಪೂರ ಜಾರಿಯಲ್ಲಿವೆ? ಇಲ್ಲಿದೆ ಮಾಹಿತಿ

Mangaluru Airport bomb case; ಆದಿತ್ಯ ರಾವ್ ವಿರುದ್ಧ ಜೈಲು ಅಧಿಕಾರಿಗಳ ದೂರು

Thailand Open Badminton: ಕಿರಣ್, ಸೇನ್ ಕ್ವಾರ್ಟರ್ ಫೈನಲಿಗೆ