
ರಾಜ್ಯದ ಪ್ರವಾಹ ಪರಿಸ್ಥಿತಿಯ ಮಾಹಿತಿ ಪಡೆದ ಪ್ರಧಾನಿ ನರೇಂದ್ರ ಮೋದಿ
Team Udayavani, Aug 10, 2020, 12:33 PM IST

ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲವು ದಿನಗಳಲ್ಲಿ ಪ್ರವಾಹದಿಂದ ಉಂಟಾದ ನಷ್ಟಗಳ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಮಾಹಿತಿ ಪಡೆದರು. ವಿಡಿಯೋ ಕಾನ್ಫರೆನ್ಸ್ ನಲ್ಲಿ ಗೃಹ ಸಚಿವ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಕಂದಾಯ ಸಚಿವ ಆರ್.ಅಶೋಕ್ ಭಾಗವಹಿಸಿ ರಾಜ್ಯದ ಪ್ರವಾಹ ಸ್ಥಿತಿಯ ಬಗ್ಗೆ ಮಾಹಿತಿ ಒದಗಿಸಿದರು.
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ದೇಶದಲ್ಲಿ ಪ್ರವಾಹ ಪರಿಸ್ಥಿತಿಯ ಕುರಿತು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು. ಸಿಎಂ ಬಿಎಸ್ ಯಡಿಯೂರಪ್ಪ ಕೋವಿಡ್ ಕಾರಣದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರಣ ಸಚಿವರು ವಿಡಿಯೋ ಸಂವಾದದಲ್ಲಿ ಪಾಲ್ಗೊಂಡರು.
ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?
