ಕೋವಿಡ್ ಲಸಿಕೆ ಹಂಚಿಕೆ ಚರ್ಚೆ: ಜನವರಿ 11ರಂದು ಎಲ್ಲಾ ಸಿಎಂಗಳ ಜತೆ ಪ್ರಧಾನಿ ಮೋದಿ ಸಭೆ
ಮುಂದಿನ ವಾರದಿಂದ ದೇಶದ ಎಲ್ಲಾ ರಾಜ್ಯಗಳಲ್ಲಿಯೂ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮ ಆರಂಭ
Team Udayavani, Jan 8, 2021, 6:45 PM IST
ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ (ಜನವರಿ 11, 2021) ಕೋವಿಡ್ ಲಸಿಕೆ ಹಂಚಿಕೆ ಕುರಿತಂತೆ ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳ ಜತೆ ಮಾತುಕತೆ ನಡೆಸಲಿದ್ದಾರೆ ಎಂದು ವರದಿ ತಿಳಿಸಿದೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ಸೋಮವಾರ ಸಂಜೆ 4ಗಂಟೆಗೆ ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳ ಜತೆ ಕೋವಿಡ್ ಲಸಿಕೆ ಹಂಚಿಕೆ ಕುರಿತು ಚರ್ಚೆ ನಡೆಸಲಿದ್ದಾರೆ. ದೇಶದಲ್ಲಿ ಮತ್ತೊಂದು ಲಸಿಕೆಯ ಡ್ರೈ ರನ್ ನಡೆಯಲಿರುವ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ ಎಂದು ವರದಿ ಹೇಳಿದೆ.
ಭಾನುವಾರ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ) ಆಕ್ಸ್ ಫರ್ಡ್ ನ ಆಸ್ಟ್ರಾಜೆನಿಕಾ ಕೋವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ನ ಕೋವ್ಯಾಕ್ಸಿನ್ ಲಸಿಕೆ ಡ್ರೈರನ್ ಗೆ ಅನುಮತಿ ನೀಡಿದೆ.
ಈಗಾಗಲೇ ಹಲವು ರಾಜ್ಯಗಳಲ್ಲಿ ಕೋವಿಡ್ ಲಸಿಕೆಯ ಡ್ರೈರನ್ ನಡೆದಿದ್ದು, ಮುಂದಿನ ವಾರದಿಂದ ದೇಶದ ಎಲ್ಲಾ ರಾಜ್ಯಗಳಲ್ಲಿಯೂ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮ ಆರಂಭವಾಗಲಿದೆ ಎಂದು ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ