ಕೋವ್ಯಾಕ್ಸಿನ್ ಅಭಿಯಾನ; 2ನೇ ಹಂತದ ಅಭಿಯಾನದಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಲಸಿಕೆ
ಅಭಿಯಾನದ ಮೊದಲ ದಿನವೇ 1,91,181 ಮಂದಿಗೆ ಲಸಿಕೆ ನೀಡಲಾಗಿತ್ತು
Team Udayavani, Jan 21, 2021, 11:52 AM IST
ನವದೆಹಲಿ:ಕೋವಿಡ್ ಸೋಂಕನ್ನು ತಡೆಯುವ ನಿಟ್ಟಿನಲ್ಲಿ ಕಳೆದ ವಾರ ಭಾರತದಲ್ಲಿ ಕೋವಿಡ್ ಲಸಿಕೆ ನೀಡುವಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದ್ದು, 2ನೇ ಹಂತದ ಲಸಿಕೆ ಹಾಕುವ ಅಭಿಯಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಲಸಿಕೆ ನೀಡಲಾಗುವುದು ಎಂದು ವರದಿ ತಿಳಿಸಿದೆ.
ಮೊದಲ ಹಂತದ ಕೋವಿಡ್ ಲಸಿಕೆ ನೀಡಿಕೆ ಅಭಿಯಾನ ಪೂರ್ಣಗೊಂಡ ನಂತರ ಉಳಿದ ಎಲ್ಲಾ ಮುಖ್ಯಮಂತ್ರಿಗಳು, ಸಚಿವರುಗಳಿಗೆ ಲಸಿಕೆ ನೀಡಲಾಗುವುದು ಎಂದು ಹೇಳಿದೆ.
ಇದನ್ನೂ ಓದಿ:ಡ್ರಗ್ಸ್ ಪ್ರಕರಣ: ನಟಿ ರಾಗಿಣಿ ದ್ವಿವೇದಿಗೆ ಜಾಮೀನು ನೀಡಿದ ಸುಪ್ರೀಂ
ಜನವರಿ 16ರಂದು ಪ್ರಧಾನಿ ನರೇಂದ್ರ ಮೋದಿ ಅವರು ಕೋವಿಡ್ ಲಸಿಕೆ ವಿತರಣೆಗೆ ವಿಧ್ಯುಕ್ತವಾಗಿ ಚಾಲನೆ ನೀಡಿದ್ದರು. ಅಲ್ಲದೇ ಯಾವುದೇ ಕಾರಣಕ್ಕೂ ಎರಡನೇ ಬಾರಿಯ ಡೋಸ್(ಲಸಿಕೆ) ತೆಗೆದುಕೊಳ್ಳುವುದನ್ನು ನಿರ್ಲಕ್ಷಿಸಬೇಡಿ ಎಂದು ಕಿವಿ ಮಾತು ಹೇಳಿದ್ದರು. ಕೋವಿಡ್ ಲಸಿಕೆಗೆ ಸಂಬಂಧಿಸಿದಂತೆ ಊಹಾಪೋಹಗಳಿಗೆ ಕಿವಿಗೊಡದಂತೆ ಸಲಹೆ ನೀಡಿದ್ದರು.
ಇದನ್ನೂ ಓದಿ:ಕಾಲೇಜು ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ರೈಲ್ವೆ ಹಳಿಮೇಲೆ ಎಸೆದು ಹೋದ ಆರೋಪಿಗಳು!
ಲಸಿಕೆ ನೀಡುವಿಕೆಯ ಅಭಿಯಾನದ ಮೊದಲ ದಿನವೇ 1,91,181 ಮಂದಿಗೆ ಲಸಿಕೆ ನೀಡಲಾಗಿತ್ತು ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಎರಡನೇ ಹಂತದ ಅಭಿಯಾನದಲ್ಲಿ ಮೂವತ್ತು ಕೋಟಿ ಮಂದಿಗೆ ಲಸಿಕೆ ನೀಡಲಾಗುವುದು ಎಂದು ತಿಳಿಸಿದೆ.
ಕೋವ್ಯಾಕ್ಸಿನ್ ಲಸಿಕೆ ನೀಡಿಕೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಿದೆ. 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಲಸಿಕೆ ಹಾಕಬಹುದು. ಗರ್ಭಿಣಿ ಮಹಿಳೆಯರು, ಹೃದಯ ಸಂಬಂಧಿ ಕಾಯಿಲೆ, ಅಲರ್ಜಿ ಇರುವ ವ್ಯಕ್ತಿಗಳು ಲಸಿಕೆ ಪಡೆಯುವುದು ಬೇಡ ಎಂಬುದಾಗಿ ತಿಳಿಸಿತ್ತು.