ಬಾಗಲಕೋಟೆ :ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಭಾರಿ ಸ್ಪೋಟಕ ವಶ
Team Udayavani, Jan 20, 2022, 4:42 PM IST
ಬಾಗಲಕೋಟೆ : ಜಿಲ್ಲೆಯ ವಿವಿಧೆಡೆ ಕಲ್ಲು ಗಣಿಗಾರಿಕೆಗೆ ಪೂರೈಸಲು ಬಳಸುವ ಭಾರಿ ಸ್ಪೋಟಕ ವಸ್ತುಗಳನ್ನು ತಾಲೂಕಿನ ಹೊನ್ನಾಕಟ್ಟಿಯ ತೋಟದ ಮನೆಯ ಶೆಡ್ ವೊಂದರಲ್ಲಿ ಸಂಗ್ರಹಿಸಿಟ್ಟಿದ್ದು, ಗುರುವಾರ ಪೊಲೀಸರು ಹಠಾತ್ ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ.
ತಾಲೂಕಿನ ಸಂಗಮ ಕ್ರಾಸ್ ಬಳಿಯ ಹೊನ್ನಾಕಟ್ಟಿ ಗ್ರಾಮದ ಗುರುನಾಥ ಹಾದಿಮನಿ ಎಂಬುವವರ ತೋಟದ ಮನೆಯ ಶೆಡ್‌ನಲ್ಲಿ ಈ ಭಾರಿ ಸ್ಪೋಟಕ ವಸ್ತುಗಳು ಪತ್ತೆಯಾಗಿದ್ದು, ಮಂಜುನಾಥ ಕಂಕಣಮೇಲಿ, ವಿಜಯ ನಾರಾ ಎಂಬುವವರು ಈ ಅಕ್ರಮ ಸ್ಟೋಟಕ ವಸ್ತುಗಳನ್ನು ಸಂಗ್ರಹಿಸಿದ್ದರು ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ಪತ್ತೆಯಾಗಿದೆ.
1.50 ಕೆ.ಜಿ. ಸೋಡಿಯಂ ನೈಟ್ರೇಟ್, 50 ಕೆ.ಜಿ. ಚಾರಕೋಲ್ ಪೌಡರ್ ಸೇರಿದಂತೆ 250 ಕೆ.ಜಿ. ಲಘು ಸ್ಪೋಟಕ ವಸ್ತುಗಳು, 250 ಕೆ.ಜಿ. ಕಚ್ಚಾ ಸ್ಪೋಟಕ ವಸ್ತುಗಳಾದ ಗಂಧಕ, ಸಲ್ಪರ್ ಮುಂತಾದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮಂಜುನಾಥ ಕಂಕಣಮೇಲಿ ಮತ್ತು ವಿಜಯ ನಾರಾ ಎಂಬುವವರು ಈ ಸ್ಪೋಟಕ ವಸ್ತುಗಳನ್ನು ಮುಂಬೈನಿಂದ ತರಿಸಿ, ಅಕ್ರಮವಾಗಿ ಸಂಗ್ರಹಿಸಿ ಇಟ್ಟು, ಜಿಲ್ಲೆಯ ವಿವಿಧ ಕಲ್ಲು ಗಣಿಗಾರಿಕೆ ಪ್ರದೇಶಗಳಿಗೆ ಪೂರೈಸಲಾಗುತ್ತಿತ್ತು. ಈ ಅಕ್ರಮ ಸಂಗ್ರಹದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದಾರೆ ಎನ್ನಲಾಗಿದೆ. ಬಾಗಲಕೋಟೆ ಗ್ರಾಮೀಣ ಪೊಲೀಸರು ಈ ದಾಳಿ ನಡೆಸಿದ್ದು, ತನಿಖೆ ಮುಂದುವರೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಮನಗರದಲ್ಲಿ ಕುಮಾರಸ್ವಾಮಿ ಆಪರೇಷನ್! ಡಿಕೆ ಬ್ರದರ್ಸ್ ಗೆ ಟಕ್ಕರ್ ಕೊಡುತ್ತಾರಾ ಎಚ್ ಡಿಕೆ?
ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಒಂಟಿಯಾಗುತ್ತಿದ್ದಾರೆಯೇ? ಹೈಕಮಾಂಡ್ ನೀಡಿದ ಸಂದೇಶವೇನು?
ಮೇಲ್ಮನೆ: ಇಂದು ಸ್ಪಷ್ಟ ಚಿತ್ರಣ? ಕಾಂಗ್ರೆಸ್ ಪಟ್ಟಿಯಲ್ಲಿ ಹಲವು ಪ್ರಭಾವಿ ನಾಯಕರ ಹೆಸರು
ರಾಜ್ಯಕ್ಕೆ ಆಪತ್ತಿನಲ್ಲಿ ಬರಲಿದ್ದಾರೆ “ಆಪದ್ ಮಿತ್ರ’ರು
ಜಾನುವಾರುಗಳ ಹಾನಿಗೆ ಪರಿಹಾರ: ಸಚಿವ ಪ್ರಭು ಚವ್ಹಾಣ್
MUST WATCH
ಹೊಸ ಸೇರ್ಪಡೆ
ರಾಮನಗರದಲ್ಲಿ ಕುಮಾರಸ್ವಾಮಿ ಆಪರೇಷನ್! ಡಿಕೆ ಬ್ರದರ್ಸ್ ಗೆ ಟಕ್ಕರ್ ಕೊಡುತ್ತಾರಾ ಎಚ್ ಡಿಕೆ?
ಯುಜಿಡಿ ಪೈಪ್ ಲೈನ್ ಗೆ ಖಾಸಗಿ ಲೇಔಟ್ ನ ಪೈಪ್ ಲೈನ್ ಜೋಡಣೆ : ಅಧಿಕಾರಿಗಳಿಂದ ತಡೆ
ಜಿಲ್ಲೆಯಲ್ಲಿ ಆತ್ಮಹತ್ಯೆ ಹೆಚ್ಚಳ
ಕೋವಿಡ್ 19: ಭಾರತ ಸೇರಿದಂತೆ 16 ದೇಶಗಳಿಗೆ ಪ್ರಯಾಣಿಸುವುದನ್ನು ನಿಷೇಧಿಸಿದ ಸೌದಿ ಅರೇಬಿಯಾ
ರೋಹಿತ್ ಶರ್ಮಾಗೆ ಬ್ರೇಕ್ ಕೊಟ್ಟಿದ್ಯಾಕೆ? ಇದು ಅನಗತ್ಯ: ರವಿ ಶಾಸ್ತ್ರಿ