ರಾಜ್ ಠಾಕ್ರೆ ಎಚ್ಚರಿಕೆ ಬೆನ್ನಲ್ಲೇ ಮಹಾರಾಷ್ಟ್ರದಲ್ಲಿ ಧ್ವನಿವರ್ಧಕಗಳ ಬಳಕೆಗೆ ಮಾರ್ಗಸೂಚಿ
Team Udayavani, Apr 18, 2022, 3:47 PM IST
ಮುಂಬಯಿ : ಮಸೀದಿಗಳಿಂದ ಧ್ವನಿವರ್ಧಕಗಳನ್ನು ತೆಗೆದುಹಾಕುವಂತೆ ಮಹಾರಾಷ್ಟ್ರ ನವನಿರ್ಮಾಣ ಸೇನೆ ನಾಯಕ ರಾಜ್ ಠಾಕ್ರೆ ಒತ್ತಾಯಿಸಿದ ಬೆನ್ನಲ್ಲೇ ಮಹಾರಾಷ್ಟ್ರ ಮೈತ್ರಿ ಸರ್ಕಾರ ಕ್ರಮ ಕೈ ಗೊಳ್ಳಲು ಮುಂದಾಗಿದೆ.
ರಾಜ್ಯ ಗೃಹ ಸಚಿವ ದಿಲೀಪ್ ವಾಲ್ಸೆ ಪಾಟೀಲ್ ಸೋಮವಾರ, ಮಹಾರಾಷ್ಟ್ರ ಪೊಲೀಸ್ ಮಹಾನಿರ್ದೇಶಕರು ಮತ್ತು ಮುಂಬೈ ಪೊಲೀಸ್ ಕಮಿಷನರ್ ಅವರು ಧ್ವನಿವರ್ಧಕಗಳ ಬಳಕೆಗೆ ಮಾರ್ಗಸೂಚಿಗಳನ್ನು ಸಿದ್ಧಪಡಿಸಲಿದ್ದು, ಅದನ್ನು ಒಂದೆರಡು ದಿನಗಳಲ್ಲಿ ನೀಡಲಾಗುವುದು ಎಂದು ಹೇಳಿದ್ದಾರೆ.
“ರಾಜ್ಯದ ಪೊಲೀಸ್ ಮಹಾನಿರ್ದೇಶಕ ರಜನೀಶ್ ಸೇಠ್ ಮತ್ತು ಮುಂಬೈ ಸಿಪಿ ಸಂಜಯ್ ಪಾಂಡೆ ಒಟ್ಟಿಗೆ ಕುಳಿತು ಧ್ವನಿವರ್ಧಕಗಳ ಬಳಕೆಯ ಕುರಿತು ರಾಜ್ಯಕ್ಕೆ ಮಾರ್ಗಸೂಚಿಗಳನ್ನು ಸಿದ್ಧಪಡಿಸುತ್ತಾರೆ. ಈ ಮಾರ್ಗಸೂಚಿಗಳನ್ನು ಒಂದು ಅಥವಾ ಎರಡು ದಿನಗಳಲ್ಲಿ ಹೊರಡಿಸಲಾಗುವುದು. ಎಲ್ಲರೂ ಅವುಗಳನ್ನು ಕಾರ್ಯಗತಗೊಳಿಸಬೇಕು ”ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.
ರಾಜ್ ಠಾಕ್ರೆ ಅವರು ಮೇ 3 ರೊಳಗೆ ಮಸೀದಿಗಳಿಂದ ಧ್ವನಿವರ್ಧಕಗಳನ್ನು ತೆಗೆದು ಹಾಕಲು ಮಹಾ ವಿಕಾಸ್ ಅಘಾಡಿ ಸರ್ಕಾರವನ್ನು ಆಗ್ರಹಿಸಿದ್ದರು, ಇತರ ಸಮುದಾಯಗಳ ಸದಸ್ಯರು ದೊಡ್ಡ ಧ್ವನಿಯ ಮುಸ್ಲಿಮರ ಪ್ರಾರ್ಥನೆಯನ್ನು ಕೇಳಲು ಇಷ್ಟವಿಲ್ಲ ಎಂದು ವಾದಿಸಿ ಮೇ 3ರ ನಂತರ ಹೆಚ್ಚಿನ ಪ್ರಮಾಣದಲ್ಲಿ ಮಸೀದಿಗಳ ಹೊರಗೆ ಹನುಮಾನ್ ಚಾಲೀಸಾ ಮೊಳಗಿಸುಸುವುದಾಗಿ ಬೆದರಿಕೆ ಹಾಕಿದ್ದರು. ಇದು ಶಿವಸೇನೆಗೆ ಸವಾಲಾಗಿ ಪರಿಣಮಿಸಿ ರಾಜ್ ಠಾಕ್ರೆ ‘ಹಿಂದೂ ಓವೈಸಿ’ಎಂದು ಕರೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ