ಜಪಾನ್ ನಲ್ಲಿ ಪ್ರಬಲ ಭೂಕಂಪ; ನಾಲ್ವರು ಸಾವು, 2 ಲಕ್ಷ ಮನೆಗಳಿಗೆ ವಿದ್ಯುತ್ ಸಂಪರ್ಕ ಕಡಿತ
ಈಶಾನ್ಯ ಕರಾವಳಿ ಪ್ರದೇಶದಲ್ಲಿ ಸುನಾಮಿ ಎಚ್ಚರಿಕೆಯನ್ನು ನೀಡಲಾಗಿದೆ.
Team Udayavani, Mar 17, 2022, 9:57 AM IST
ಟೋಕಿಯೋ:ಜಪಾನ್ ನ ಪೂರ್ವ ಭಾಗದಲ್ಲಿ ಬುಧವಾರ (ಮಾರ್ಚ್ 16) ರಾತ್ರಿ 7.4ರಷ್ಟು ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಪ್ರಾಥಮಿಕ ವರದಿಗಳ ಪ್ರಕಾರ ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿರುವುದಾಗಿ ತಿಳಿಸಿದೆ.
ಇದನ್ನೂ ಓದಿ:ಉಕ್ರೇನ್ ಅಧ್ಯಕ್ಷರಿಗೆ “ಎದ್ದುನಿಂತು ಗೌರವ’ ಕೊಟ್ಟ ಅಮೆರಿಕ ಸಂಸತ್ತು
ಟೋಕಿಯೋ ಸೇರಿದಂತೆ ಹಲವು ನಗರಗಳಲ್ಲಿ ಕಂಪನದ ಅನುಭವವಾಗಿದ್ದು, ಫುಕುಶಿಮಾ ಸಮುದ್ರ ತೀರದಲ್ಲಿ ಸಣ್ಣ ಪ್ರಮಾಣದ ಸುನಾಮಿ ಎದ್ದಿರುವುದಾಗಿ ವರದಿ ವಿವರಿಸಿದೆ. ಈಶಾನ್ಯ ಕರಾವಳಿ ಪ್ರದೇಶದಲ್ಲಿ ಸುನಾಮಿ ಎಚ್ಚರಿಕೆಯನ್ನು ನೀಡಲಾಗಿದೆ.
ಫುಕುಶಿಮಾ ಪ್ರದೇಶದ ಕರಾವಳಿಯಾಚೆ 60 ಕಿಲೋ ಮೀಟರ್ ಆಳದಲ್ಲಿ ಭೂಕಂಪನದ ಕೇಂದ್ರಬಿಂದು ಪತ್ತೆಯಾಗಿರುವುದಾಗಿ ಭೂಗರ್ಭಶಾಸ್ತ್ರ ಇಲಾಖೆ ತಿಳಿಸಿದೆ. ಪ್ರಬಲ ಭೂಕಂಪದ ಪರಿಣಾಮ 20 ಲಕ್ಷಕ್ಕೂ ಅಧಿಕ ಮನೆಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.
ಸುಮಾರು 11 ವರ್ಷಗಳ ಹಿಂದೆ ಜಪಾನ್ ಉತ್ತರ ಭಾಗದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಿಂದಾಗಿ ಭಾರೀ ಪ್ರಮಾಣದ ಹಾನಿ ಸಂಭವಿಸಿತ್ತು. ಸುನಾಮಿಯಿಂದಾಗಿ ನ್ಯೂಕ್ಲಿಯರ್ ರಿಯಾಕ್ಟರ್ ಹಾನಿಗೊಂಡು ಭಾರೀ ಪ್ರಮಾಣದಲ್ಲಿ ವಿಕಿರಣಗಳು ಹೊರಸೂಸಿತ್ತು ಎಂದು ವರದಿ ತಿಳಿಸಿದೆ.
ಭೂಕಂಪದಲ್ಲಿ ನಾಲ್ವರು ಸಾವನ್ನಪ್ಪಿದ್ದು, 97 ಮಂದಿ ಗಾಯಗೊಂಡಿದ್ದಾರೆ ಎಂದು ಜಪಾನ್ ಪ್ರಧಾನಿ ಫ್ಯುಮಿಯೊ ಕಿಶಿಡಾ ಗುರುವಾರ(ಮಾರ್ಚ್ 17) ಸಂಸದೀಯ ಮಂಡಳಿಯಲ್ಲಿ ತಿಳಿಸಿದ್ದಾರೆ. ಪರಮಾಣು ಸ್ಥಾವರದ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ ಎಂದು ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು