ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ ಪ್ರಮೋದ್ ಮಧ್ವರಾಜ್
ಇಂದಿನಿಂದ ಕಮಲ ಪಾಳಯದಲ್ಲಿ ಮಾಜಿ ಸಚಿವ
Team Udayavani, May 7, 2022, 3:34 PM IST
ಉಡುಪಿ : ಉಡುಪಿ ಜಿಲ್ಲಾ ಬಿಜೆಪಿ, ಪಕ್ಷ ಸೇರ್ಪಡೆಗೆ ಗ್ರೀನ್ ಸಿಗ್ನಲ್ ನೀಡಿರುವ ಬೆನ್ನಲ್ಲೇ ಮಾಜಿ ಸಚಿವ, ಉಡುಪಿಯ ಮಾಜಿ ಶಾಸಕ ಪ್ರಮೋದ್ ಮಧ್ವರಾಜ್ ಅವರು ಕಾಂಗ್ರೆಸ್ ಪಕ್ಷಕ್ಕೆ ಶನಿವಾರ ರಾಜೀನಾಮೆ ಸಲ್ಲಿಸಿದ್ದಾರೆ.
ಪ್ರಮೋದ್ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ರಾಜೀನಾಮೆ ಪತ್ರ ಬರೆದಿದ್ದು, ನನಗೆ ಪಕ್ಷದಲ್ಲಿ ದುಡಿಸಿಕೊಂಡಿದ್ದಕ್ಕಾಗಿ ಧನ್ಯವಾದಗಳು ಎಂದಿದ್ದಾರೆ. ಉಡುಪಿ ಜಿಲ್ಲೆಯ ಕಾಂಗ್ರೆಸ್ ನಲ್ಲಿ ನನಗೆ ಮುಂದುವರಿಯಲು ಸಾಧ್ಯವಾಗದ ವಾತಾವರಣವಿದೆ. ನಾನು ಈ ಬಗ್ಗೆ ವಿಷಾದ ವ್ಯಕ್ತಪಡಿಸುತ್ತೇನೆ. ಇತ್ತೀಚಿಗೆ ನನಗೆ ಕೆಪಿಸಿಸಿ ಉಪಾಧ್ಯಕ್ಷನನ್ನಾಗಿ ನೇಮಿಸಿದ್ದೀರಿ ಅದಕ್ಕಾಗಿ ಧನ್ಯವಾದಗಳು, ಆದರೆ ನಾನು ಅದನ್ನು ಒಪ್ಪಿಕೊಳ್ಳುವುದಿಲ್ಲ, ಕಾಂಗ್ರೆಸ್ ಪಕ್ಷದಲ್ಲಿ ಮುಂದುವರಿಯಲು ಸಾಧ್ಯವಾಗುತ್ತಿಲ್ಲ ಎಂದು ಬರೆದಿದ್ದಾರೆ.
2018 ರಲ್ಲಿ ಸರ್ವೇಯೊಂದರಲ್ಲಿ ನಾನು ರಾಜ್ಯದ ಅತ್ಯುತ್ತಮ ಕಾರ್ಯನಿರವಹಿಸಿದ ಶಾಸಕರ ಪೈಕಿ ಮೊದಲಿಗನಾಗಿದ್ದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಪ್ರಮೋದ್ ಅವರು ಶನಿವಾರ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿದು ಬಂದಿದೆ. ಅವರಿಗೆ ಪಕ್ಷ ಯಾವ ಸ್ಥಾನ ಮಾನ ನೀಡಲಿದೆ ಎಂಬ ನಿರೀಕ್ಷೆ ಎಲ್ಲರದ್ದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ