ಬಿಬಿಎಂಪಿ ಚುನಾವಣೆ ಪೂರ್ವ ಸಿದ್ಧತೆ: ಜ. 25 ರಿಂದ ಮೂರು ದಿನ ಬಿಜೆಪಿ ಸಭೆ
Team Udayavani, Jan 24, 2022, 5:19 PM IST
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ದೃಷ್ಟಿಯಿಂದ ಪಕ್ಷವನ್ನು ಸಂಘಟಿಸಲು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಮೂರು ದಿವಸಗಳ ಕಾಲ ಮಹತ್ವದ ಸಭೆ ನಡೆಯಲಿದೆ.
ಜನವರಿ 25, 26, 27 ರಂದು ಬೆಳಿಗ್ಗೆ 10 ಗಂಟೆಯಿಂದ ಈ ಸಭೆ ನಡೆಯಲಿದೆ ಎಂದು ರಾಜ್ಯ ಉಪಾಧ್ಯಕ್ಷರಾದ ನಿರ್ಮಲ್ ಕುಮಾರ್ ಸುರಾಣಾ ಅವರು ತಿಳಿಸಿದ್ದಾರೆ.
ಬೆಂಗಳೂರು ಉತ್ತರ ಜಿಲ್ಲೆ, ದಕ್ಷಿಣ ಜಿಲ್ಲೆ, ಮತ್ತು ಕೇಂದ್ರ ಜಿಲ್ಲಾ ಪದಾಧಿಕಾರಿಗಳು, ಮಂಡಳಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಶಾಸಕರು ಹಾಗೂ ಚುನಾಯಿತ ಜನಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಈ ಸಭೆ ಜರುಗಲಿದೆ.
ಬಿಬಿಎಂಪಿಗೆ ಫೆಬ್ರವರಿ ಅಥವಾ ಮಾರ್ಚ್ ತಿಂಗಳಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಸಿದ್ಧತೆ ಆರಂಭಿಸಿದೆ. ಸ್ವಂತ ಬಲದ ಮೇಲೆ ಬಿಬಿಎಂಪಿಯಲ್ಲಿ ಅಧಿಕಾರ ಹಿಡಿಯ ಬೇಕೆಂಬ ಲೆಕ್ಕಾಚಾರವನ್ನು ಬಿಜೆಪಿ ಹೊಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಂಗಳೂರು : ಶಾಪಿಂಗ್ ಮಾಲ್ ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿ ಸಾವು
ಯಾರು ಭ್ರಷ್ಟರು, ಯಾರು ಭ್ರಷ್ಟರಲ್ಲ ಎಂದು ಜನರಿಗೆ ಗೊತ್ತಿದೆ : ಸಿಎಂ ಬೊಮ್ಮಾಯಿ
ಯಾವುದೇ ಸೌಲಭ್ಯ ನೀಡದೆ 11 ಸಾವಿರ ಬಿಸಿಯೂಟ ನೌಕರರ ವಜಾ : ಸರಕಾರದ ನಿರ್ಧಾರಕ್ಕೆ ಡಿಕೆಶಿ ಗರಂ
ಸಾಯಿ ಲೇಔಟ್ ನಿವಾಸಿಗಳಿಗೆ ಭವಿಷ್ಯದ ಚಿಂತೆ
ಬಾವನ ಮೇಲೆ ಸೇಡು ತೀರಿಸಿಕೊಳ್ಳಲು ಹುಸಿ ಬಾಂಬ್ ಕರೆ ಮಾಡಿ.. ಜೈಲಿಗೆ ಹೋದ ಭಾಮೈದುನ