
ಜಗತ್ತು ಕೋವಿಡ್ ಸಾಂಕ್ರಾಮಿಕವನ್ನು ಜಯಿಸುತ್ತಿದೆ : ಉಜ್ಬೇಕಿಸ್ತಾನ್‌ನಲ್ಲಿ ಪ್ರಧಾನಿ ಮೋದಿ
ಭಾರತವನ್ನು ಅಭಿನಂದಿಸಿದ ಚೀನ ಅಧ್ಯಕ್ಷ ಜಿನ್‌ಪಿಂಗ್
Team Udayavani, Sep 16, 2022, 2:04 PM IST

ಸಮರ್ಕಂಡ್: ಜಗತ್ತು ಕೋವಿಡ್-19 ಸಾಂಕ್ರಾಮಿಕ ರೋಗವನ್ನು ಜಯಿಸುತ್ತಿದೆ. ಕೋವಿಡ್ ಮತ್ತು ಉಕ್ರೇನ್ ಬಿಕ್ಕಟ್ಟಿನಿಂದಾಗಿ ಜಾಗತಿಕ ಪೂರೈಕೆ ಸರಪಳಿಯಲ್ಲಿ ಹಲವಾರು ಅಡಚಣೆಗಳು ಸಂಭವಿಸಿವೆ. ನಾವು ಭಾರತವನ್ನು ಉತ್ಪಾದನಾ ಕೇಂದ್ರವಾಗಿ ಪರಿವರ್ತಿಸಲು ಬಯಸುತ್ತೇವೆ ಎಂದು ಉಜ್ಬೇಕಿಸ್ತಾನ್‌ನ ಸಮರ್‌ಕಂಡ್‌ನಲ್ಲಿ ಎಸ್‌ಸಿಒ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ನೀಡಿದ್ದಾರೆ.
‘ಏಪ್ರಿಲ್ 2022 ರಲ್ಲಿ, ವಿಶ್ವ ಆರೋಗ್ಯ ಸಂಸ್ಥೆ ಗುಜರಾತ್‌ನಲ್ಲಿ ಸಾಂಪ್ರದಾಯಿಕ ಔಷಧಿಗಳ ಜಾಗತಿಕ ಕೇಂದ್ರವನ್ನು ಉದ್ಘಾಟಿಸಿತು. ಸಾಂಪ್ರದಾಯಿಕ ಚಿಕಿತ್ಸೆಗಾಗಿ ವಿಶ್ವ ಆರೋಗ್ಯ ಸಂಸ್ಥೆಯಿಂದ ಇದು ಮೊದಲ ಮತ್ತು ಏಕೈಕ ಜಾಗತಿಕ ಕೇಂದ್ರವಾಗಿದೆ. ಸಾಂಪ್ರದಾಯಿಕ ಔಷಧಿಗಳ ಮೇಲೆ ಹೊಸ ಎಸ್‌ಸಿಒ ಕಾರ್ಯನಿರತ ಗುಂಪಿಗೆ ಭಾರತವು ಉಪಕ್ರಮವನ್ನು ತೆಗೆದುಕೊಳ್ಳುತ್ತದೆ” ಎಂದು ಪ್ರಧಾನಿ ಮೋದಿ ಹೇಳಿದರು.
”ಈ ವರ್ಷ ಭಾರತದ ಆರ್ಥಿಕತೆಯು 7.5% ದರದಲ್ಲಿ ಬೆಳೆಯುವ ನಿರೀಕ್ಷೆಯಿದೆ. ವಿಶ್ವದ ಅತಿದೊಡ್ಡ ಆರ್ಥಿಕತೆಗಳಲ್ಲಿ ನಮ್ಮದು ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಗಳಲ್ಲಿ ಒಂದಾಗಿದೆ ಎಂದು ನನಗೆ ಖುಷಿಯಾಗಿದೆ” ಎಂದು ಪ್ರಧಾನಿ ಮೋದಿ ಹೇಳಿದರು.
”ನಾವು ಜನಕೇಂದ್ರಿತ ಅಭಿವೃದ್ಧಿ ಮಾದರಿಯತ್ತ ಗಮನಹರಿಸುತ್ತಿದ್ದೇವೆ. ನಾವು ಪ್ರತಿಯೊಂದು ವಲಯದಲ್ಲೂ ನಾವೀನ್ಯತೆಯನ್ನು ಬೆಂಬಲಿಸುತ್ತಿದ್ದೇವೆ. ಇಂದು ನಮ್ಮ ದೇಶದಲ್ಲಿ 70,000 ಕ್ಕೂ ಹೆಚ್ಚು ಸ್ಟಾರ್ಟ್‌ಅಪ್‌ಗಳು ಮತ್ತು 100 ಯುನಿಕಾರ್ನ್‌ಗಳು ಇವೆ” ಎಂದು ಪ್ರಧಾನಿ ಮೋದಿ ತಿಳಿಸಿದರು.
”ಉಕ್ರೇನ್ ಬಿಕ್ಕಟ್ಟಿನಿಂದಾಗಿ ಜಾಗತಿಕ ಪೂರೈಕೆ ಸರಪಳಿಯಲ್ಲಿ ಹಲವಾರು ಅಡಚಣೆಗಳು ಸಂಭವಿಸಿವೆ. ನಾವು ಭಾರತವನ್ನು ಉತ್ಪಾದನಾ ಕೇಂದ್ರವಾಗಿ ಪರಿವರ್ತಿಸಲು ಬಯಸುತ್ತೇವೆ” ಎಂದು ಹೇಳಿದರು.
ಭಾರತಕ್ಕೆ ಚೀನ ಅಧ್ಯಕ್ಷ ಜಿನ್‌ಪಿಂಗ್ ಅಭಿನಂದನೆ
ಮುಂದಿನ ವರ್ಷ ಶಾಂಘೈ ಸಹಕಾರ ಸಂಸ್ಥೆ (ಎಸ್‌ಸಿಒ) ಶೃಂಗಸಭೆಯನ್ನು ಆಯೋಜಿಸಿದ್ದಕ್ಕಾಗಿ ಭಾರತವನ್ನು ಚೀನ ಅಧ್ಯಕ್ಷ ಜಿನ್‌ಪಿಂಗ್ ಅಭಿನಂದಿಸಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬರ್ತ್ಡೇ ಪಾರ್ಟಿಯಲ್ಲಿ ಗುಂಡಿನ ದಾಳಿ: 8 ಮಂದಿ ಸಾವು, 3 ಮಂದಿಗೆ ಗಾಯ

ಪೇಶಾವರದಲ್ಲಿ ತಾಲಿಬಾನ್ ಅಟ್ಟಹಾಸ: 46 ಸಾವು,150ಕ್ಕೂ ಹೆಚ್ಚು ಮಂದಿಗೆ ಗಾಯ

49 ಸಾವಿರ ರೂ. ಚಿತ್ರ 25 ಕೋಟಿ ರೂಪಾಯಿಗೆ ಮಾರಾಟವಾಯಿತು!

ದುಬೈಯಿಂದ ಆಕ್ಲೆಂಡ್ ಗೆ ಹೊರಟಿದ್ದ ಎಮಿರೇಟ್ಸ್ ವಿಮಾನ ಬಂದಿಳಿದದ್ದು ಮಾತ್ರ ದುಬೈಯಲ್ಲೇ…

ಪುಟಿನ್ ಗಿಂತ ಚೀನಾ ಅಧ್ಯಕ್ಷ ಅತ್ಯಂತ ಒರಟು, ಕ್ರೂರ ನಾಯಕ: ಮೈಕ್ ಪೊಂಪಿಯೊ
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
