ಪ್ರಯಾಣ ದರ ಹೆಚ್ಚಿಸುವಂತೆ ಸರಕಾರದ ಮೊರೆಹೋದ ಖಾಸಗಿ ಬಸ್‌ ಮಾಲಕರು


Team Udayavani, Feb 24, 2021, 11:40 PM IST

ಪ್ರಯಾಣ ದರ ಹೆಚ್ಚಿಸುವಂತೆ ಸರಕಾರದ ಮೊರೆಹೋದ ಖಾಸಗಿ ಬಸ್‌ ಮಾಲಕರು

ಮಹಾನಗರ: ಗೃಹ ಬಳಕೆ ವಸ್ತುಗಳು, ತೈಲ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇದೀಗ ಬಸ್‌ ಪ್ರಯಾಣಿಕರ ಜೇಬಿಗೆ ಕತ್ತರಿ ಬೀಳುವ ಕಾಲ ಸನ್ನಿಹಿತವಾಗಿದೆ. ಏಕೆಂದರೆ, ಕರಾವಳಿ ಭಾಗದಲ್ಲಿ ಸಂಚರಿಸುವ ಖಾಸಗಿ ಸರ್ವಿಸ್‌ ಮತ್ತು ಸಿಟಿ ಬಸ್‌ಗಳ ಪ್ರಯಾಣ ದರ ಏರಿಕೆ ಮಾಡುವಂತೆ ಇದೀಗ ಬಸ್‌ ಮಾಲಕರ ಒಕ್ಕೂಟವು ರಾಜ್ಯ ಸರಕಾರದ ಮೊರೆ ಹೋಗಿದೆ.

ಕೊರೊನಾ ಪರಿಣಾಮ ಬಸ್‌ ಮಾಲಕರು ಸಂಕಷ್ಟಲ್ಲಿದ್ದು, ವಾಹನ ಬಿಡಿ ಭಾಗಗಳ ದರ ಏರಿಕೆಯಾಗಿದೆ. ಒಂದೆಡೆ, ಡೀಸೆಲ್‌ ಬೆಲೆ ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿದ್ದು, ದೈನಂದಿನ ಖರ್ಚು-ವೆಚ್ಚ ನಿರ್ವಹಣೆಯು ಬಸ್‌ ಮಾಲಕರಿಗೆ ಸವಾಲಾಗಿ ಪರಿಣಮಿಸುತ್ತಿದೆ. ಹೀಗಾಗಿ, ಮತ್ತೆ ಖಾಸಗಿ ಬಸ್‌ ಪ್ರಯಾಣ ದರ ಏರಿಕೆ ಮಾಡಬೇಕೆಂದು ಮನವಿ ಮಾಡಲಾಗಿದೆ. ಒಂದು ವೇಳೆ, ಬಸ್‌ ದರ ಏರಿಕೆಗೆ ಸರಕಾರದ ಸ್ಪಂದನೆ ದೊರೆತರೆ ಈಗಾಗಲೇ ಬೆಲೆಯೇರಿಕೆ ಬಿಸಿಯಿಂದ ಹೈರಾಣಗೊಂಡಿರುವ ಜನರ ಮೇಲೆ ಪ್ರಯಾಣ ದರ ಹೆಚ್ಚಳದ ಹೊರೆಯೂ ಬೀಳುವ ಸಾಧ್ಯತೆಯಿದೆ.

ಕೊರೊನಾ ಸಂಕಷ್ಟ ಸಹಿತ ನಾನಾ ಕಾರಣದಿಂದಾಗಿ 2020ರಲ್ಲಿ ಖಾಸಗಿ-ಸಿಟಿ ಬಸ್‌ ಪ್ರಯಾಣ ದರ ಏರಿಕೆ ಮಾಡಲಾಗಿದ್ದು, ಇದೀಗ ಮತ್ತೆ ಬಸ್‌ ಪ್ರಯಾಣ ದರ ಏರಿಕೆ ಪ್ರಸ್ತಾವ ಸಲ್ಲಿಕೆಯಾಗಿದೆ. ರಾಜ್ಯ ಸರಕಾರ ಇದಕ್ಕೆ ಒಪ್ಪಿಕೆ ನೀಡಿದರೆ ಶೀಘ್ರದಲ್ಲೇ ಈ ಬಗ್ಗೆ ಸಾರಿಗೆ ಇಲಾಖೆ ಅಧೀನದಲ್ಲಿ ಬಸ್‌ ಮಾಲಕರ ಸಂಘದ ಸಭೆ ನಡೆಯುವ ಸಾಧ್ಯತೆಯಿದೆ. ಆ ಸಭೆ ಬಳಿಕ ದರ ಏರಿಕೆ ನಿಗದಿಯಾದರೆ ರಾಜ್ಯ ಸರಕಾರ ಅಧಿಸೂಚನೆ ಹೊರಡಿಸುವುದರೊಂದಿಗೆ ಪರಿಷ್ಕೃತ ದರ ಜಾರಿಗೆ ಬರಲಿದೆ.

ರಾಜ್ಯ ಸರಕಾರವು 2013ರಿಂದ 2020ರ ವರೆಗೆ ಸರ್ವಿಸ್‌ ಬಸ್‌ ಪ್ರಯಾಣ ದರವನ್ನು ಪರಿಷ್ಕರಣೆ ಮಾಡಲಿಲ್ಲ. ಡೀಸೆಲ್‌ ಮೇಲಿನ ಸೆಸ್‌ ದರ ಆಧಾರದಲ್ಲಿ 2018ರ ಎಪ್ರಿಲ್‌ ತಿಂಗಳಿನಲ್ಲಿ ನಗ ರ ದಲ್ಲಿ ಓಡಾಡುವ ಸಿಟಿ ಬಸ್‌ ದರವನ್ನು ಮೊದಲ ಸ್ಟೇಜ್‌ಗೆ ಒಂದು ರೂ. ನಂತೆ ಹೆಚ್ಚಳ ಮಾಡಲಾಗಿತ್ತು. ಅದೇ ರೀತಿ ಟೋಲ್‌ ದರ ಹೆಚ್ಚಳವಾದ ಕಾರಣಕ್ಕೆ ಟೋಲ್‌ ಮುಖೇನ ಸಾಗುವ ಸರ್ವಿಸ್‌ ಬಸ್‌ ದರವನ್ನು ಈ ಹಿಂದೆ ಪ್ರಥಮ ಸ್ಟೇಜ್‌ಗೆ ಒಂದು ರೂ. ಹೆಚ್ಚಳ ಮಾಡಲಾಗಿತ್ತು. ಇನ್ನು 2020ರಲ್ಲಿ ಬಸ್‌ ಪ್ರಯಾಣ ದರ ಮತ್ತೆ ಏರಿಕೆ ಕಂಡಿತ್ತು. ಈ ಕುರಿತು ರಾಜ್ಯ ಸರಕಾರ ಈಗಾಗಲೇ ಅಧಿಸೂಚನೆಯನ್ನೂ ಹೊರಡಿಸಿದೆ.

ದರ ಹೆಚ್ಚಳ ಪ್ರಸ್ತಾವ ಕುರಿತಂತೆ ಉಡುಪಿ ಬಸ್‌ ಮಾಲಕರ ಸಂಘದ ಅಧ್ಯಕ್ಷ ಕುಯಿಲಾಡಿ ಸುರೇಶ್‌ ನಾಯಕ್‌ “ಉದಯವಾಣಿ’ಗೆ ಪ್ರತಿಕ್ರಿಯಿಸಿ “2020ರಲ್ಲಿ ಬಸ್‌ ಪ್ರಯಾಣ ದರ ಏರಿಕೆ ಮಾಡುವಾಗ ಒಂದು ಲೀಟರ್‌ ಡಿಸೇಲ್‌ಗೆ 64 ರೂ. ಇತ್ತು. ಈಗ 83 ರೂ. ಇದೆ. ಇಂಧನ ದರ ಏರಿಕೆಯಿಂದ ಬಸ್‌ ಮಾಲಕರಿಗೆ ನಷ್ಟ ಉಂಟಾಗುತ್ತಿದ್ದು, ಖಾಸಗಿ ವಲಯದಲ್ಲಿ ಸಾರಿಗೆ ಉದ್ಯಮ ಉಳಿಯಲು ಪ್ರಯಾಣ ದರ ಹೆಚ್ಚಿಸುವುದು ಅನಿವಾರ್ಯ. ಕೆಎಸ್ಸಾರ್ಟಿಸಿ ಬಸ್‌ಗಳ ನಷ್ಟ ಸರಿದೂಗಿಸಲು ರಾಜ್ಯ ಸರಕಾರ ನೆರವಾಗುತ್ತದೆ. ಆದರೆ ನಮ್ಮ ಪರಿಸ್ಥಿತಿ ಕೇಳುವವರಿಲ್ಲ’ ಎನ್ನುತ್ತಾರೆ.

ರಸ್ತೆ ತೆರಿಗೆಯಷ್ಟೇ ಟೋಲ್‌ ದರ !
“ನಾಲ್ಕು ವರ್ಷಗಳಿಗೆ ಹೋಲಿಕೆ ಮಾಡಿದರೆ ಹೊಸ ಬಸ್‌ ಖರೀದಿ ಮಾಡುವವರ ಸಂಖ್ಯೆ ಇಳಿಕೆಯಾಗಿದೆ. ರಸ್ತೆ ತೆರಿಗೆ ಕೂಡ ಏರಿಕೆಯಾಗಿದ್ದು, ಖಾಸಗಿ ಎಕ್ಸ್‌ಪ್ರೆಸ್‌ ಬಸ್‌ಗೆ ಮೂರು ತಿಂಗಳಿಗೆ 50,000 ರೂ. ರಸ್ತೆ ತೆರಿಗೆ ಪಾವತಿ ಮಾಡಬೇಕು. ಅದೇ ರೀತಿ, ಟೋಲ್‌ ದರ ಕೂಡ ಹೆಚ್ಚಳವಾಗಿದ್ದು, ಮಂಗಳೂರು-ಮಣಿಪಾಲ ನಡುವಣ ಮೂರು ಬಾರಿಯ ಟ್ರಿಪ್‌ಗೆ ಸುಮಾರು 1,200 ಟೋಲ್‌ ದರ ಪಾವತಿ ಮಾಡಬೇಕಾಗುತ್ತದೆ. ರಸ್ತೆ ತೆರಿಗೆಗಿಂತ ಟೋಲ್‌ ದರವೇ ಹೆಚ್ಚಳವಾಗುತ್ತಿದೆ ಎನ್ನುತ್ತಾರೆ ಬಸ್‌ ಮಾಲಕರು.

ಸರಕಾರಕ್ಕೆ ಪ್ರಸ್ತಾವ
ಡಿಸೇಲ್‌ ಬೆಲೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು, ಬಸ್‌ ಪ್ರಯಾಣ ದರ ಏರಿಕೆ ಅನಿವಾರ್ಯವಾಗಿದೆ. ಪ್ರತೀ ಟ್ರಿಪ್‌ನಲ್ಲಿ ಸರಾಸರಿ 40ರಿಂದ 50 ಮಂದಿ ಪ್ರಯಾಣಿಕರು ಇರದಿದ್ದರೆ ಅಪಾರ ನಷ್ಟ ಉಂಟಾಗುತ್ತದೆ. ಸದ್ಯ ಬೆಳಗ್ಗೆ ಮತ್ತು ಸಂಜೆ ವೇಳೆ ಬಸ್‌ಗಳಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಿರುತ್ತದೇ ವಿನಾ ಮಧ್ಯಾಹ್ನ ಖಾಲಿ ಬಸ್‌ ಸಂಚರಿಸುತ್ತಿದೆ. ಹೀಗಿದ್ದಾಗ ದರ ಪರಿಷ್ಕರಣೆ ಅನಿವಾರ್ಯ. ಈ ಕಾರಣಕ್ಕೆ ದರ ಏರಿಕೆ ಕುರಿತಂತೆ ರಾಜ್ಯ ಸರಕಾರಕ್ಕೆ ಕೆಲವು ದಿನಗಳ ಹಿಂದೆ ಪ್ರಸ್ತಾವ ಸಲ್ಲಿಸಲಾಗಿದೆ.
– ರಾಜವರ್ಮ ಬಲ್ಲಾಳ್‌, ಕೆನರಾ ಬಸ್‌ ಮಾಲಕರ ಸಂಘದ ಅಧ್ಯಕ್ಷ

ಟಾಪ್ ನ್ಯೂಸ್

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.