ಆಹಾರದ ಆಮಿಷವೊಡ್ಡಿ ಆ್ಯಂಬುಲೆನ್ಸ್ ನೊಳಗೆ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ
ಆಕೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಪಾಚೋಲಿ ಮಾಹಿತಿ ನೀಡಿದ್ದಾರೆ.
Team Udayavani, May 26, 2021, 7:17 PM IST
ಜೈಪುರ್: ಆಹಾರದ ಆಮಿಷವೊಡ್ಡಿ 22 ವರ್ಷದ ಮಹಿಳೆ ಮೇಲೆ ಆಂಬುಲೆನ್ಸ್ ನೊಳಗೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವ ಘಟನೆ ಜೈಪುರದಲ್ಲಿ (ಮೇ 26) ನಡೆದಿರುವುದಾಗಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಈ ಘಟನೆ ಸೋಮವಾರ ನಡೆದಿತ್ತು.
ಇದನ್ನೂ ಓದಿ:ಭಾರತಕ್ಕೆ ಫೈಜರ್ ನಿಂದ 50ಮಿಲಿಯನ್ ಡೋಸ್ ರಫ್ತಿಗೆ ಸಿದ್ಧ, ಮಾಡೆರ್ನಾ ಲಸಿಕೆ ಈ ವರ್ಷಕ್ಕಿಲ್ಲ!
ಆಹಾರದ ನೆಪವೊಡ್ಡಿ ಆ್ಯಂಬುಲೆನ್ಸ್ ನಲ್ಲಿ ವಿವಾಹಿತ ಮಹಿಳೆಯನ್ನು ಕೂರಿಸಿಕೊಂಡು ನಿರ್ಜನ ಪ್ರದೇಶಕ್ಕೆ ಕರೆದೊಯ್ದಯ, ಚಾಲಕ ಮತ್ತು ಆತನ ಸಹವರ್ತಿಗಳು ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವುದಾಗಿ ಮೋತಿ ಡೋಂಗ್ರಿ ಠಾಣಾಧಿಕಾರಿ ಸುರೇಂದ್ರ ಪಾಚೋಲಿ ತಿಳಿಸಿದ್ದಾರೆ.
ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 376(ಡಿ) (ಸಾಮೂಹಿಕ ಅತ್ಯಾಚಾರ) ಮತ್ತು ಎಸ್ ಸಿ/ಎಸ್ ಟಿ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್ ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪಾಚೋಲಿ ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಆ್ಯಂಬುಲೆನ್ಸ್ ಚಾಲಕ ಮತ್ತು ಆತನ ಗೆಳೆಯರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಮಹಿಳೆಯ ಹೇಳಿಕೆಯನ್ನು ದಾಖಲಿಸಿಕೊಂಡಿದ್ದು, ಆಕೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಪಾಚೋಲಿ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ