
ಸರ್ಕಾರದ ಶವ ಯಾತ್ರೆಗೆ ಮುಂದಾದ ರೈತರು ವಶಕ್ಕೆ
Team Udayavani, Nov 26, 2022, 10:45 PM IST

ಬೆಂಗಳೂರು: ಕಬ್ಬಿನ ದರ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಕಬ್ಬು ಬೆಳೆಗಾರರು ಫ್ರೀಡಂ ಪಾರ್ಕ್‌ನಲ್ಲಿ ನಡೆಸುತ್ತಿರುವ ಧರಣಿ ಭಾನುವಾರ 6ನೇ ದಿನಕ್ಕೆ ಕಾಲಿರಿಸಿದ್ದು , ಸರ್ಕಾರದ ಶವಯಾತ್ರೆ ಮಾಡಲು ಮುಂದಾದ ರೈತರನ್ನು ಶನಿವಾರ ಪೊಲೀಸರು ವಶಕ್ಕೆ ಪಡೆದರು.
ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರಬೂರು ಶಾಂತಕುಮಾರ್ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ರಾಜ್ಯದ ವಿವಿ ಧ ಮೂಲೆಗಳಿಂದ ರೈತರು ಭಾಗವಹಿಸಿದ್ದಾರೆ. ಭಾನುವಾರ ಸರ್ಕಾರದ ವಿರುದ್ಧ ಕಪ್ಪುಬಾವುಟ ಪ್ರದರ್ಶನ ಮಾಡಲಾಗುವುದು ಎಂದು ರೈತರು ಎಚ್ಚರಿಸಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್, ಹಲವು ದಿನಗಳಿಂದ ರೈತರ ಹೋರಾಟ ನಡೆಸುತ್ತಿದ್ದು ಸರ್ಕಾರ ಈ ಬಗ್ಗೆ ಗಮನ ಹರಿಸುತ್ತಿಲ್ಲ. ಬೇಡಿಕೆ ಈಡೇರಿಕೆ ವರೆಗೂ ನಮ್ಮ ಹೋರಾಟ ಹೀಗೆ ಮುಂದುವರಿಯಲಿದೆ ಎಂದು ಎಚ್ಚರಿಕೆ ನೀಡಿದರು.
ಟಾಪ್ ನ್ಯೂಸ್
