ಕೇಂದ್ರ ನಮ್ಮ ಎಲ್ಲಾ ಬೇಡಿಕೆ ಈಡೇರಿಸುವವರೆಗೆ ಪ್ರತಿಭಟನೆ ಮುಂದುವರಿಕೆ: ರೈತ ಸಂಘಟನೆ
ಇತ್ತೀಚೆಗಷ್ಟೇ ಸರ್ಕಾರದ ಜತೆಗೆ ಮಾತುಕತೆಗೆ ರೈತ ಒಕ್ಕೂಟವು ಐವರು ಸದಸ್ಯರ ಸಮಿತಿ ರಚಿಸಿತ್ತು.
Team Udayavani, Dec 8, 2021, 1:21 PM IST
ನವದೆಹಲಿ: ಕೇಂದ್ರ ಸರ್ಕಾರ ನಮ್ಮ ಎಲ್ಲಾ ಬೇಡಿಕೆಗಳನ್ನು ಈಡೇರಿಸುವವರೆಗೆ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ರೈತ ಮುಖಂಡರು ಬುಧವಾರ(ಡಿಸೆಂಬರ್ 08) ತಿಳಿಸಿದ್ದಾರೆ. ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಮೂರು ಕೃಷಿ ಕಾಯ್ದೆ ವಿರೋಧಿಸಿ ಒಂದು ವರ್ಷ ಕಾಲ ರೈತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದು, ಏತನ್ಮಧ್ಯೆ ಕೇಂದ್ರ ಸರ್ಕಾರ ಮೂರು ಕಾಯ್ದೆಯನ್ನು ರದ್ದುಗೊಳಿಸಿತ್ತು.
ಇದನ್ನೂ ಓದಿ:ಸತತ 9ನೇ ಬಾರಿಯೂ ರೆಪೋ ದರದಲ್ಲಿ ಯಥಾಸ್ಥಿತಿ ಮುಂದುವರಿಕೆ: ಆರ್ ಬಿಐ ಗವರ್ನರ್ ದಾಸ್
ಆದರೆ ಕಾಯ್ದೆ ರದ್ದಾದರೂ ಬೆಂಬಲ ಬೆಲೆಗೆ ಕಾನೂನು ಮಾನ್ಯತೆ, ರೈತರ ಮೇಲಿನ ಕೇಸ್ ವಾಪಸ್ ಸೇರಿದಂತೆ ಮತ್ತಿತರ ಬೇಡಿಕೆಗಳನ್ನು ಈಡೇರಿಸುವವರೆಗೆ ಪ್ರತಿಭಟನೆ ಮುಂದುವರಿಸಲು ನಿರ್ಧರಿಸಿರುವುದಾಗಿ ರೈತ ಸಂಘಟನೆಗಳು ತಿಳಿಸಿವೆ.
ಪ್ರತಿಭಟನಾಕಾರರ ಬಹುತೇಕ ಬೇಡಿಕೆಗಳಿಗೆ ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿರುವ ಹಿನ್ನೆಲೆಯಲ್ಲಿ ರೈತ ಸಂಘಟನೆ ಒಕ್ಕೂಟಗಳು ಪ್ರತಿಭಟನೆಯನ್ನು ಕೈಬಿಡುವ ಸಾಧ್ಯತೆ ಇದ್ದಿರುವುದಾಗಿ ವರದಿ ತಿಳಿಸಿತ್ತು. ಆದರೆ ತಮ್ಮ ಪ್ರತಿಭಟನೆ ಕುರಿತು ಇಂದು ಚಿಂತನೆ ನಡೆಸಿದ ರೈತ ಸಂಘಟನೆಗಳು ಹೋರಾಟ ಮುಂದುವರಿಸಲು ನಿರ್ಧರಿಸಿರುವುದಾಗಿ ಎಂದು ಘೋಷಿಸಿವೆ.
ಇತ್ತೀಚೆಗಷ್ಟೇ ಸರ್ಕಾರದ ಜತೆಗೆ ಮಾತುಕತೆಗೆ ರೈತ ಒಕ್ಕೂಟವು ಐವರು ಸದಸ್ಯರ ಸಮಿತಿ ರಚಿಸಿತ್ತು. ಮಾತುಕತೆ ಯಶಸ್ವಿಯಾಗಿದ್ದು, ಎಂಎಸ್ ಪಿಗೆ ಕಾನೂನು ಮಾನ್ಯತೆ, ರೈತರ ವಿರುದ್ಧದ ಎಫ್ ಐಆರ್ ರದ್ದು, ಮೃತ ರೈತರಿಗೆ ಪರಿಹಾರ ಮತ್ತಿತರ ರೈತರ ಬಹುಕೇತ ಬೇಡಿಕೆಗಳನ್ನು ಈಡೇರಿಸುವುದಾಗಿ ಕೇಂದ್ರ ಸರ್ಕಾರ ಲಿಖಿತ ಭರವಸೆ ನೀಡಿತ್ತು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಮರನಾಥ ಯಾತ್ರೆ ಭದ್ರತಾ ವ್ಯವಸ್ಥೆ: 2 ಮಹತ್ವದ ಸಭೆ ನಡೆಸಿದ ಅಮಿತ್ ಶಾ
2ಜಿ ಯುಗ ಭ್ರಷ್ಟಾಚಾರದ ಸಂಕೇತವಾಗಿತ್ತು, ಈಗ ಪಾರದರ್ಶಕತೆ ಇದೆ: ಪ್ರಧಾನಿ
ಜ್ಞಾನವಾಪಿ ಮಸೀದಿಯಲ್ಲಿ ಸಿಕ್ಕಿದ್ದು ಶಿವಲಿಂಗವಲ್ಲ; ಅದು ಫೌಂಟನ್: ಮಸೀದಿಯ ಆಡಳಿತ ಮಂಡಳಿ ವಾದ
ಮಾಜಿ ಕೇಂದ್ರ ಸಚಿವ ಚಿದಂಬರಂ ಆಸ್ತಿ ಮೇಲೆ ಸಿಬಿಐ ದಾಳಿ; ಪುತ್ರನ ವಿರುದ್ಧ ಹೊಸ ಕೇಸ್
ಜಮ್ಮು ಕಾಶ್ಮೀರ ಹಿಂಸಾಚಾರಕ್ಕೆ ದಿ ಕಾಶ್ಮೀರ ಫೈಲ್ ಚಿತ್ರವೇ ಕಾರಣ: ಮೆಹಬೂಬಾ ಮುಫ್ತಿ