
ಕಾಣಿಕೆ ಡಬ್ಬ ಕಳವು ಪ್ರಕರಣದ ಆರೋಪಿಗೆ ಶಿಕ್ಷೆ
Team Udayavani, Jun 8, 2023, 5:21 AM IST

ಉಡುಪಿ: 76 ಬಡಗಬೆಟ್ಟು ಗ್ರಾಮದ ಬೈಲೂರು ಶ್ರೀನೀಲಕಂಠ ಬಬ್ಬುಸ್ವಾಮಿ ದೈವಸ್ಥಾನದ ಕಾಣಿಕೆ ಡಬ್ಬಗಳ ಕಳವು ಪ್ರಕರಣದ ಆರೋಪಿಗೆ ಉಡುಪಿ ಪ್ರಧಾನ ಸಿಜೆ ಮತ್ತು ಸಿಜೆಎಂ ನ್ಯಾಯಾಲಯ ಜೈಲುಶಿಕ್ಷೆ ವಿಧಿಸಿ ಜೂ. 6ರಂದು ಆದೇಶ ನೀಡಿದೆ.
ಪ್ರಕಾಶ್ (40) ಶಿಕ್ಷೆಗೆ ಗುರಿಯಾದ ಆರೋಪಿ. ಈತ 2022ರ ಅ. 30ರಂದು ದೈವಸ್ಥಾನದ ಕಾಣಿಕೆ ಡಬ್ಬ ಕಳವು ಮಾಡಿಕೊಂಡು ಹೋಗಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ ಆಗಿನ ಪೊಲೀಸ್ ನಿರೀಕ್ಷಕ ವಾಸಪ್ಪ ನಾೖಕ್, ದೋಷಾರೋಪಣ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ವಿಘ್ನೇಶ್ ಕುಮಾರ್ ಅವರು ಆರೋಪಿ ವಿರುದ್ಧದ ಆರೋಪ ಸಾಬೀತಾಗಿದೆ ಎಂದು ತೀರ್ಮಾನಿಸಿ ಒಂದು ವರ್ಷ 6 ತಿಂಗಳು ಜೈಲು ಶಿಕ್ಷೆ ಮತ್ತು 2,000 ರೂ. ದಂಡ ವಿಧಿಸಿದ್ದು, ದಂಡ ಪಾವತಿಸಲು ತಪ್ಪಿದಲ್ಲಿ ಒಂದು ತಿಂಗಳ ಸಾದಾ ಶಿಕ್ಷೆಯನ್ನು ವಿಧಿಸಿ ಆದೇಶ ನೀಡಿದ್ದಾರೆ. ಸರಕಾರದ ಪರ ಹಿರಿಯ ಸಹಾಯಕ ಸರಕಾರಿ ಅಭಿಯೋಜಕಿ ಜಯಂತಿ ಕೆ. ವಾದ ಮಂಡಿಸಿದ್ದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UDUPI: ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

Mullugudde ಕೊರಗಜ್ಜನ ಪವಾಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾರ್ಥನೆ

Brahmavar ಸ್ಕೂಟಿ ಢಿಕ್ಕಿ ಹೊಡೆದು ಪಾದಚಾರಿ ಸಾವು

Central Government ಯೋಜನೆಗಳ ಮಾಹಿತಿ ಗ್ರಾ.ಪಂ.ಗಳಲ್ಲೂ ಸಿಗಲಿ: ಸಚಿವೆ ಶೋಭಾ

Cauvery Issue ನೀರು ಹಂಚಿಕೆ ವಿಚಾರದಲ್ಲಿ ವೈಜ್ಞಾನಿಕ ವರದಿ ಅಗತ್ಯ: ಸಚಿವೆ ಶೋಭಾ
MUST WATCH
ಹೊಸ ಸೇರ್ಪಡೆ

Dharwad ರಾಷ್ಟ್ರಧ್ವಜ ತಯಾರಿಕಾ ಕೇಂದ್ರಕ್ಕೆ ಮಹಾತ್ಮಾಗಾಂಧಿ ಪ್ರಶಸ್ತಿ

Mangaluru ಎಂಡಿಎಂಎ ಡ್ರಗ್ಸ್ ಮಾರಾಟ: ವಿದ್ಯಾರ್ಥಿಯ ಬಂಧನ

Cauvery; ತಮಿಳುನಾಡಿಗೆ ಮತ್ತೆ ನೀರು ಹರಿಸುವ ಬಗ್ಗೆ ಚರ್ಚೆ ನಡೆಸಿ ತೀರ್ಮಾನ: ಸಿದ್ದರಾಮಯ್ಯ

Rabkavi Banhatti ದೇವರ ದಾಸಿಮಯ್ಯ ಹಟಗಾರ ಸಮಾಜದ ಜಗದ್ಗುರು ಅಸ್ತಂಗತ

Bihar; ಸಚಿವರ ಕಚೇರಿಗಳಿಗೆ ನಿತೀಶ್ ಕುಮಾರ್ ದಿಢೀರ್ ಭೇಟಿ; ಹಲವರು ಗೈರು