
ಕಳವುಗೈದ ಆರೋಪಿಗೆ ಶಿಕ್ಷೆ
Team Udayavani, Apr 1, 2023, 5:15 AM IST

ಉಡುಪಿ: ಮನೆಗೆ ನುಗ್ಗಿ ಚಿನ್ನಾಭರಣಗಳನ್ನು ಕಳವು ಮಾಡಿದ ಆರೋಪಿಗೆ ಉಡುಪಿ ನಗರದ ಪ್ರಧಾನ ಸಿ.ಜೆ. ಮತ್ತು ಸಿ.ಜೆ.ಎಂ. ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ.
2022ರ ಮಾ. 26ರಂದು ರಾತ್ರಿ ಗುರುರಾಜ್ ಎಂಬಾತ ಗುಂಡಿಬೈಲು ದುಗ್ಗಣ್ಣಬೆಟ್ಟು ಮಾರ್ಗ ಜುಮಾದಿಕಟ್ಟೆ ದೇವಸ್ಥಾನದ ಹಿಂಬದಿ ರಸ್ತೆಯಲ್ಲಿರುವ ಸುನೀತಾ ರಾಮಚಂದ್ರರ ಮನೆಗೆ ನುಗ್ಗಿ ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಕಳವು ಮಾಡಿರುವ ಹಿನ್ನೆಲೆಯಲ್ಲಿ ಉಡುಪಿ ನಗರ ಠಾಣೆಯ ಪೊಲೀಸ್ ನಿರೀಕ್ಷಕರು ಪ್ರಕರಣ ದಾಖಲಿಸಿಕೊಂಡು ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪತ್ರ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನಗರದ ಪ್ರಧಾನ ಸಿ.ಜೆ. ಮತ್ತು ಸಿ.ಜೆ.ಎಂ. ನ್ಯಾಯಾಲಯದ ನ್ಯಾಯಾಧೀಶೆ ಶಕುಂತಲಾ ಅವರು ಆರೋಪಿ ಗುರುರಾಜ್‌ಗೆ 10 ವರ್ಷಗಳ ಕಠಿನ ಸಜೆ ಮತ್ತು 5,000 ರೂ. ದಂಡ, ದಂಡ ಪಾವತಿಸಲು ತಪ್ಪಿದಲ್ಲಿ 6 ತಿಂಗಳ ಸಾಧಾರಣ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.
ಸರಕಾರದ ಪರವಾಗಿ ಹಿರಿಯ ಸಹಾಯಕ ಸರಕಾರಿ ಅಭಿಯೋಜಕಿ ಜಯಂತಿ ಕೆ. ವಾದ ಮಂಡಿಸಿದ್ದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ
ಹೊಸ ಸೇರ್ಪಡೆ

ಟಿಕೆಟ್ ಖಚಿತ, ಕಾಮಿಡಿ ಉಚಿತ, ಖುಷಿ ನಿಶ್ಚಿತ!: ‘ದರ್ಬಾರ್’ ಸಿನಿಮಾ ಇಂದು ಬಿಡುಗಡೆ

ಹೊಸಬರ ಗದಾಯುದ್ಧ ಬಿಡುಗಡೆ

Kollywood: ಪೋಷಕ ನಟನ ಕಾರು ಢಿಕ್ಕಿ; ಸಹಾಯಕ ನಿರ್ದೇಶಕ ಸ್ಥಳದಲ್ಲೇ ಮೃತ್ಯು

Tiger cubsಗಳೊಂದಿಗೆ ಬಿಂದಾಸ್ ಆಗಿ ಹೆಜ್ಜೆ ಹಾಕಿದ ತಾಯಿ ಹುಲಿ; ಪ್ರವಾಸಿಗರು ಪುಲ್ ಖುಷ್

Hyderabad: ನೇಣು ಬಿಗಿದು ಮಗಳು ಆತ್ಮಹತ್ಯೆ; ವಾಮಾಚಾರವೇ ಘಟನೆಗೆ ಕಾರಣವೆಂದ ಪೋಷಕರು