
ಜೋಸ್ ಆಲುಕ್ಕಾಸ್‌ನ ಪ್ಯಾನ್ ಇಂಡಿಯಾ ಬ್ರಾಂಡ್ ಅಂಬಾಸಿಡರ್ ಆಗಿ ಆರ್. ಮಾಧವನ್ ಆಯ್ಕೆ
Team Udayavani, Mar 30, 2023, 4:08 PM IST

ಮುಂಬೈ: ದೇಶದ ಪ್ರಮುಖ ಆಭರಣ ಸಂಸ್ಥೆಗಳಲ್ಲಿ ಒಂದಾಗಿರುವ ಜೋಸ್ ಆಲುಕ್ಕಾಸ್ ತನ್ನ ಪ್ಯಾನ್ ಇಂಡಿಯಾ ಬ್ರಾಂಡ್ ಅಂಬಾಸಿಡರ್ ಆಗಿ ದಕ್ಷಿಣ ಭಾರತದ ಪ್ರಸಿದ್ಧ ನಟ ಆರ್. ಮಾಧವನ್ ಅವರನ್ನು ಆಯ್ಕೆ ಮಾಡಿದೆ.
ಮುಂದಿನ ದಿನಗಳಲ್ಲಿ ಜೋಸ್ ಆಲುಕ್ಕಾಸ್ ಜೊತೆಗಿನ ಕಾರ್ಯಾಚರಣೆಗಳಲ್ಲಿ ಪ್ಯಾನ್ ಇಂಡಿಯಾ ಬ್ರಾಂಡ್ ಅಂಬಾಸಿಡರ್ ಆಗಿ ಕೆಲಸ ಮಾಡಲು ಆರ್. ಮಾಧವನ್, ಜೋಸ್ ಆಲುಕ್ಕಾಸ್ ಜತೆಗಿನ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ದಕ್ಷಿಣ ಭಾರತದ ಇನ್ನೋರ್ವ ನಟಿ ಕೀರ್ತಿ ಸುರೇಶ್ ಬ್ರಾಂಡ್ ಅಂಬಾಸಿಡರ್ ಆಗಿ ಮುಂದುವರಿಯಲಿದ್ದಾರೆ.
ಇತ್ತೀಚೆಗೆ ಮುಂಬೈನಲ್ಲಿ ನಡೆದಿದ್ದ ಸಮಾರಂಭದಲ್ಲಿ ಈ ಇಬ್ಬರೂ ಸ್ಟಾರ್‌ಗಳು ಜೋಸ್ ಆಲುಕ್ಕಾಸ್ ಜೊತೆಗಿನ ಈ ಒಡಂಬಡಿಕೆಗೆ ಸಹಿ ಹಾಕಿದ್ದಾರೆ.
ಇದನ್ನೂ ಓದಿ: ಅಧಿವೇಶನ ನಡೆಯುತ್ತಿರುವಾಗ ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋ ವೀಕ್ಷಿಸಿದ ಬಿಜೆಪಿ ಶಾಸಕ
ಜೋಸ್ ಆಲುಕ್ಕಾಸ್, ತನ್ನ ಆಭರಣ ಸಮೂಹದ ಫಿಲಾಸಫಿಯನ್ನು ದೇಶದಾದ್ಯಂತ ಪಸರಿಸಲು ಆರ್. ಮಾಧವನ್ ಅವರನ್ನು ಪ್ಯಾನ್ ಇಂಡಿಯಾ ಬ್ರಾಂಡ್ ಅಂಬಾಸಿಡರ್ ಆಗಿ ನೇಮಿಸಿಕೊಳ್ಳಲಾಗಿದೆ. ತನ್ನ ಮಳಿಗೆಗಳನ್ನು ವಿಸ್ತರಿಸುವ ಯೋಜನೆಯನ್ನು ಜೋಸ್ ಆಲುಕ್ಕಾಸ್ ಹಾಕಿಕೊಂಡಿದ್ದು ಇದರಲ್ಲಿ ಈ ಇಬ್ಬರೂ ಸ್ಟಾರ್‌ಗಳ ಪಾತ್ರ ಮಹತ್ವದ್ದಾಗಿರಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಜೋಯ್ ಆಲುಕ್ಕಾ ಹೇಳಿದ್ದಾರೆ .
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ
