Rain continues : ಉಡುಪಿ, ದಕ್ಷಿಣ ಕನ್ನಡದ ಶಾಲಾ, ಕಾಲೇಜುಗಳಿಗೆ ಶುಕ್ರವಾರವೂ ರಜೆ
Team Udayavani, Jul 6, 2023, 8:44 PM IST
ಮಂಗಳೂರು/ಉಡುಪಿ: ಕರಾವಳಿಯಲ್ಲಿ ಕಳೆದ ನಾಲ್ಕು ದಿನಗಳಿಂದ ಕುಂಭದ್ರೋಣ ಮಳೆಯಾಗುತ್ತಿದ್ದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜು.7 ಶುಕ್ರವಾರವೂ ರಜೆ ಘೋಷಿಸಲಾಗಿದೆ
ಕೇಂದ್ರ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿ ಸಿದ್ದು, ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ.
ಬುಧವಾರ, ಗುರುವಾರವೂ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು, ಕರಾವಳಿಯಾಧ್ಯಂತ ಭಾರಿ ಮಳೆ ಸುರಿಯುತ್ತಿದ್ದು ಮುನ್ನೆಚ್ಚರಿಕೆ ವಹಿಸುವಂತೆ ಆಡಳಿತ ಸೂಚನೆ ನೀಡಿದೆ. ಪ್ರವಾಸಿಗರು ನದಿ ಮತ್ತು ಸಮುದ್ರ ತೀರಕ್ಕೆ ತೆರಳದಂತೆ ಮುನ್ಸೂಚನೆ ನೀಡಲಾಗಿದೆ. ಪದವಿ, ಸ್ನಾತಕೋತ್ತರ, ಡಿಪ್ಲೋಮಾ, ಐಟಿಐ ಕಾಲೇಜುಗಳಿಗೆ ರಜೆ ಘೋಷಿಸಲಾಗಿಲ್ಲ.
ಈಗ ನೀಡಿದ ರಜೆಯನ್ನು ಶನಿವಾರ ಪೂರ್ಣ ದಿನ ಅಥವಾ ಭಾನುವಾರ ತರಗತಿಗಳನ್ನು ನಡೆಸಿ ಸರಿದೊಗಿಸುವಂತೆ ಇಲಾಖೆ ಸುತ್ತೋಲೆ ಹೊರಡಿಸಿದೆ.
ಪಕ್ಕದ ಕಾಸರಗೋಡು ಜಿಲ್ಲೆಯಲ್ಲೂ ಭಾರಿ ಮಳೆಯಾಗುತ್ತಿದ್ದು , ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ