ರಾಜಕೀಯ ಪ್ರವೇಶದ ಕುರಿತು ಅತೀ ಶೀಘ್ರವೇ ನಿರ್ಧಾರ ಪ್ರಕಟ ಎಂದ ಸೂಪರ್ ಸ್ಟಾರ್
Team Udayavani, Nov 30, 2020, 7:29 PM IST
ಚೆನ್ನೈ : ತಾನು ರಾಜಕೀಯಕ್ಕೆ ಪ್ರವೇಶಿಸುವ ಕುರಿತು ಅತೀ ಶೀಘ್ರದಲ್ಲಿ ನಿರ್ಧಾರ ಪ್ರಕಟಿಸಲಿದ್ದೇನೆ ಎಂದು ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಹೇಳಿಕೆ ನೀಡಿದ್ದಾರೆ.
ಚೆನ್ನೈ ನ ಕಲ್ಯಾಣ ಮಂಟಪದಲ್ಲಿ ನಡೆದ ‘ರಜನಿ ಮಕ್ಕಳ್ ಮಂದಿರಂ’ನ ಜಿಲ್ಲಾ ಪದಾಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ರಾಜಕೀಯ ಪ್ರವೇಶದ ಕುರಿತು ನಿರ್ಧಾರ ಪ್ರಕಟಿಸಲಿದ್ದಾರೆ ಎಂದು ಸೂಪರ್ ಸ್ಟಾರ್ ಅಭಿಮಾನಿಗಳು ಕಾತುರದಿಂದ ಕಾದಿದ್ದರು ಆದರೆ ಸಭೆಯಲ್ಲಿ ರಾಜಕೀಯ ಪ್ರವೇಶದ ಕುರಿತು ಯಾವುದೇ ವಿಚಾರ ಪ್ರಕಟಿಸದ ರಜನಿಕಾಂತ್ ಮಾಧ್ಯಮದವರೊಂದಿಗೆ ಮಾತನಾಡಿ ‘ರಜನಿ ಮಕ್ಕಳ್ ಮಂಡ್ರಮ್’ನ ಜಿಲ್ಲಾ ಕಾರ್ಯದರ್ಶಿಗಳು ತಮ್ಮ ಯೋಜನೆಗಳ ಬಗ್ಗೆ ಅಭಿಪ್ರಾಯ ಹಂಚಿಕೊಂಡಿದ್ದಾರೆ. ನಾನು ತೆಗೆದುಕೊಳ್ಳುವ ಎಲ್ಲ ನಿರ್ಧಾರಗಳಿಗೆ ಬೆಂಬಲ ನೀಡುವುದಾಗಿ ತಿಳಿದಿದ್ದಾರೆ ಎಂದು ಹೇಳಿದ್ದಾರೆ ಅಲ್ಲದೆ ನನ್ನ ರಾಜಕೀಯ ಪ್ರವೇಶದ ಕುರಿತು ಶೀಘ್ರವಾಗಿ ನಿರ್ಧಾರ ಪ್ರಕಟಿಸಲಿದ್ದೇನೆ ಎಂದು ತಿಳಿಸಿದ್ದಾರೆ
ಇದನ್ನೂ ಓದಿ:ಪ್ರತಿಭಟನಾ ನಿರತ ರೈತರ ಮೇಲೆ ಜಲಫಿರಂಗಿ ಪ್ರಯೋಗ ಮಾಡಿರುವುದು ಕ್ರೂರತನ : ಶಿವಸೇನೆ ಆಕ್ರೋಶ
ತಮಿಳುನಾಡಿನಲ್ಲಿ ಮುಂಬರುವ 2021ರ ವಿಧಾನ ಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ರಜನಿಕಾಂತ್ ರಾಜಕೀಯಕ್ಕೆ ಪ್ರವೇಶಿಸುವುದು ಭಾರಿ ಕುತೂಹಲ ಮೂಡಿದೆ. ಸೂಪರ್ ಸ್ಟಾರ್ ರಾಜಕೀಯ ಸೇರುತ್ತಾರೋ, ಇಲ್ಲವೋ ಎಂಬುದು ಅವರ ನಿರ್ಧಾರದ ಮೇಲಿದೆ.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸತತ ಎರಡನೇ ದಿನ ಪೆಟ್ರೋಲ್- ಡೀಸೆಲ್ ಬೆಲೆ ಏರಿಕೆ; ತಿಂಗಳಲ್ಲಿ 8 ಬಾರಿ ಬೆಲೆ ಬದಲಾವಣೆ
ನೂತನ ವಿಮಾನ ಖರೀದಿಸ್ತೀರಿ, ನೇತಾಜಿ ಸ್ಮಾರಕ ಯಾಕೆ ನಿರ್ಮಿಸಿಲ್ಲ: ಕೇಂದ್ರಕ್ಕೆ ಮಮತಾ
ಜೈಲುಪಾಲಾದ ಲಾಲು ಆರೋಗ್ಯ ಸ್ಥಿತಿ ಗಂಭೀರ; ದೆಹಲಿ ಏಮ್ಸ್ ಗೆ ಸ್ಥಳಾಂತರ ಸಾಧ್ಯತೆ
3ನೇ ಅವಧಿಗೆ ಸ್ಪರ್ಧೆ ಇಲ್ಲ; ಮೋದಿ ಬದಲು ಮುಂದಿನ ಪ್ರಧಾನಿ ಹುದ್ದೆಗೆ ಯಾರು ಅರ್ಹ?ಸಮೀಕ್ಷೆ
ಗಣರಾಜ್ಯೋತ್ಸವ ಪರೇಡ್ ಪೂರ್ವಾಭ್ಯಾಸ, ಬದಲಿ ಮಾರ್ಗ ಕಂಡುಕೊಳ್ಳಿ : ಸಂಚಾರಿ ಪೋಲಿಸರು