ಅಮಿತ್ ಶಾ ಭೇಟಿಗಾಗಿ ದಿಲ್ಲಿಯಲ್ಲಿ ರಮೇಶ್ ಜಾರಕಿಹೊಳಿ; ಕುತೂಹಲ
Team Udayavani, Feb 3, 2023, 6:45 AM IST
ಬೆಳಗಾವಿ: ಸಿಡಿ ಪ್ರಕರಣವನ್ನು ಸಿಬಿಐಗೆ ಒಪ್ಪಿಸಲು ಕಸರತ್ತು ನಡೆಸಿರುವ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅವರು ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ಬಳಿಕ ಈಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಗೆ ದಿಲ್ಲಿಗೆ ತೆರಳಿದ್ದಾರೆ.
ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ, ಸಿಡಿ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಳಿ ರಾಜಕಾರಣಿಗಳು, ಹಿರಿಯ ಅಧಿಕಾರಿಗಳ 100ಕ್ಕೂ ಹೆಚ್ಚು ಸಿಡಿಗಳಿದ್ದು, ಸಿಬಿಐ ತನಿಖೆಯಲ್ಲಿ ಹೊರ ಬೀಳಲಿದೆ ಎಂದು ಅಮಿತ್ ಶಾ ಬಳಿ ಮನವಿ ಮಾಡಿಕೊಳ್ಳಲಿದ್ದಾರೆ.
ಎರಡು ದಿನಗಳಿಂದ ಬೆಂಗಳೂರಿನಲ್ಲಿಯೇ ಇದ್ದ ರಮೇಶ ಜಾರಕಿಹೊಳಿ ಗುರುವಾರ ಮಧ್ಯಾಹ್ನ ದಿಢೀರ್ ದಿಲ್ಲಿಗೆ ಪ್ರಯಾಣ ಬೆಳೆಸಿದ್ದಾರೆ. ಅಮಿತ್ ಶಾ ಭೇಟಿಗೂ ಮುನ್ನ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರನ್ನೂ ರಮೇಶ ಜಾರಕಿಹೊಳಿ ಭೇಟಿ ಮಾಡಿದ್ದಾರೆ. ಜತೆಗೆ ಕೆಲವು ಹಿರಿಯ ವರಿಷ್ಠರೊಂದಿಗೂ ಮಾತುಕತೆ ನಡೆಸಿದ್ದಾರೆ. ರಮೇಶ ಹಾಗೂ ಶಾ ಭೇಟಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಂದು ರಾಹುಲ್ ಹರಿದು ಹಾಕಿದ್ದ ಸುಗ್ರೀವಾಜ್ಞೆ ಪ್ರತಿ ಇಂದು ಅವರಿಗೆ ಮುಳುವಾಯ್ತು!
ಅಂದು ಟೀ ಮಾರಾಟಗಾರ: ರಾಹುಲ್ ವಿರುದ್ಧ ಪ್ರಕರಣ ದಾಖಲಿಸಿದ್ದ ಪೂರ್ಣೇಶ್ ಮೋದಿ ಬಗ್ಗೆ ಗೊತ್ತಾ?
ದೋಷಿ,2 ವರ್ಷ ಶಿಕ್ಷೆಯ ತೀರ್ಪು…ರಾಹುಲ್ ರಾಜಕೀಯ ಭವಿಷ್ಯ ಏನಾಗಲಿದೆ?ಕಾನೂನು ತಜ್ಞರು ಹೇಳೋದೇನು
ಗೋವಾ: ಕನ್ನಡಿಗರ ಮಕ್ಕಳಿಗೆ ಕನ್ನಡ ಕಲಿಕಾ ಕಾರ್ಯಕ್ರಮ
Modi ಉಪನಾಮ ಪ್ರಕರಣ: ರಾಹುಲ್ ಗಾಂಧಿಗೆ ಎರಡು ವರ್ಷಗಳ ಜೈಲುಶಿಕ್ಷೆ ವಿಧಿಸಿದ ಕೋರ್ಟ್